Tata: ಈ ಕಾರಿಗೆ ರೂ.75,000 ರಿಯಾಯಿತಿ, ರೂ.5.65 ಲಕ್ಷ ಬೆಲೆ, 28 ಕಿ.ಮೀ ಮೈಲೇಜ್.. ಸುರಕ್ಷತೆಯಲ್ಲೂ ಉತ್ತಮ
ಹೊಸ ಟಾಟಾ (Tata) ಕಾರು ಖರೀದಿಸಲು ಯೋಜಿಸುತ್ತಿರುವವರಿಗೆ ಇಲ್ಲಿದೆ ಸಿಹಿಸುದ್ದಿ. ಕಂಪನಿಯು ಈ ಫೆಬ್ರವರಿ ತಿಂಗಳು ಆರಂಭಿಕ ಮಾದರಿ ಟಿಯಾಗೊ (Tiago) ಮೇಲೆ ರೂ.75,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದೆ. ಇದು ನಗದು ರಿಯಾಯಿತಿ, ವಿನಿಮಯ ಬೋನಸ್ ಅನ್ನು ಒಳಗೊಂಡಿದೆ.
ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಪೆಟ್ರೋಲ್ ರೂಪಾಂತರಗಳು ರೂ.40,000 ನಗದು ರಿಯಾಯಿತಿ (Cash discount), ರೂ.15,000 ವಿನಿಮಯ ಬೋನಸ್ (Exchange bonus) ಅನ್ನು ಪಡೆದಿವೆ. ಸಿಎನ್‌ಜಿ ಮಾದರಿಗಳು ರೂ.75,000 ವರೆಗೆ ಡಿಸ್ಕೌಂಟ್ ಆಫರ್ ಹೊಂದಿವೆ. ಅದರಲ್ಲಿ ರೂ.60,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್ ಸೇರಿದೆ. ಈ ರಿಯಾಯಿತಿ ಸೌಲಭ್ಯಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್ ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಟಿಯಾಗೊ (Tata Tiago) ಕಾರು, ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ(ಒ), ಎಕ್ಸ್‌ಟಿ ಸೇರಿದಂತೆ 6 ರೂಪಾಂತರ (Variants) ಮತ್ತು ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ, ಟೊರ್ನಾಡೋ ಬ್ಲೂ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.
ಈ ಕಾರು, 2 ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 86 PS ಪಿಎಸ್ ಗರಿಷ್ಠ ಪವರ್ (ಶಕಿ), 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು ಇದೇ ಎಂಜಿನ್ ಪಡೆದಿದೆ. ಆದರೆ 73.5 ಪಿಎಸ್ ಮತ್ತು 95 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.
ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಇಂಧನ ದಕ್ಷತೆ ವಿಚಾರಕ್ಕೆ ಬರುವುದಾದರೆ ಪೆಟ್ರೋಲ್ ಮಾದರಿಗಳು 19.43 ಕೆಎಂಪಿಎಲ್ ರಿಂದ 20.01 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 26.49 ಕೆಎಂ/ಕೆಜಿ - 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.
ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಟಿಯಾಗೊ ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಟಾಟಾ ಟಿಯಾಗೊ ಸುರಕ್ಷತೆಯಲ್ಲಿಯು ಅತ್ಯಾಧುನಿಕವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಕಾರ್ನೆರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ಅನ್ನು ಒಳಗೊಂಡಿದೆ. ಈ ಕಾರಿಗೆ ಮಾರುತಿ ಸುಜುಕಿ ಸೆಲೆರಿಯೊ, ವ್ಯಾಗನ್ ಆರ್ ಹಾಗೂ ಸಿಟ್ರಸ್ ಸಿ3 ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications