Tata: 28 Km ಮೈಲೇಜ್.. 5-ಸೀಟರ್, 4,99 ಲಕ್ಷ.. ಈ ಪ್ರಖ್ಯಾತ ಕಾರಿಗೆ ಭರ್ಜರಿ ಡಿಸ್ಕೌಂಟ್!
ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors), ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಟಿಯಾಗೊ (Tiago) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಆಗಿದ್ದು, ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಈ ನವೆಂಬರ್‌ನಲ್ಲಿಯೂ ನೂತನ ಟಿಯಾಗೊ ಕಾರಿನ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನಗಳು ಲಭ್ಯವಿವೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ಹೊಸ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್‌ನ ಎಕ್ಸ್ಇ, ಎಕ್ಸ್ಎಂ & ಎಕ್ಸ್‌ಟಿಒ ಹೊರತುಪಡಿಸಿದ ಎಲ್ಲ (2024) ಪೆಟ್ರೋಲ್ ಚಾಲಿತ ರೂಪಾಂತರಗಳು (ವೇರಿಯೆಂಟ್), ಒಟ್ಟು ರೂ.25,000 ವರೆಗೆ ರಿಯಾಯಿತಿ ಪಡೆದಿವೆ. ಇದರೊಳಗೆ ರೂ.10,000 ಗ್ರಾಹಕ ರಿಯಾಯಿತಿ ಅಥವಾ ನಗದು ರಿಯಾಯಿತಿ (Consumer Discount) ಹಾಗೂ ರೂ.15,000 ವಿನಿಮಯ/ ಸ್ಕ್ರ್ಯಾಪ್ ಬೋನಸ್ (Exchange/ Scrappage Bonus) ಕೂಡ ಸೇರಿದೆ.

ಇದೇ ಟಾಟಾ ಟಿಯಾಗೊ ಕಾರಿನ ಎಕ್ಸ್ಇ, ಎಕ್ಸ್ಎಂ ಹೊರತುಪಡಿಸಿದ ಎಲ್ಲ ಸಿಎನ್‌ಜಿ ಚಾಲಿತ ರೂಪಾಂತರಗಳು, ಬರೋಬ್ಬರಿ ರೂ.25,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಹೊಂದಿವೆ. ಈ ಡಿಸ್ಕೌಂಟ್ ಆಫರ್‌ನಲ್ಲಿ ರೂ.10,000 ಗ್ರಾಹಕ ರಿಯಾಯಿತಿ/ ನಗದು ರಿಯಾಯಿತಿ ಮತ್ತು ರೂ.15,000 ವಿನಿಮಯ/ ಸ್ಕ್ರ್ಯಾಪ್ ಬೋನಸ್ ಸಹ ಇದೆ.
ಈ ಟಿಯಾಗೊ ಹ್ಯಾಚ್‌ಬ್ಯಾಕ್‌ನ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿಒ ಪೆಟ್ರೋಲ್ ರೂಪಾಂತರಗಳು ಮತ್ತು ಎಕ್ಸ್ಇ, ಎಕ್ಸ್ಎಂ ಸಿಎನ್‌ಜಿ ರೂಪಾಂತರಗಳು ಕೂಡ ರೂ.15,000 ರಿಯಾಯಿತಿ ಪ್ರಯೋಜನ ಒಳಗೊಂಡಿವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟಿಯಾಗೊ ಕಾರು ಕನಿಷ್ಠ ರೂ.4,99 ಲಕ್ಷ ಮತ್ತು ಗರಿಷ್ಠ ರೂ.8.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಹೊಸ ಟಿಯಾಗೊ ಕಾರು ಮಿಡ್‌ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ ಹಾಗೂ ಟೊರ್ನಾಡೊ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಲು 242 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಲಭ್ಯವಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 86 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಸಿಗುತ್ತದೆ. ಈ ಕಾರು 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಟಿಯಾಗೊ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications