Tata: ಗಟ್ಟಿಮುಟ್ಟಾದ ಟಿಯಾಗೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ನೀವು ಕೈಗೆಟುಕುವ ಬೆಲೆಯಲ್ಲಿ ಕಂಪನಿಯ ಕಾರನ್ನು ಖರೀದಿಸಲು ಯೋಚಿಸಿದ್ದರೆ, ಟಿಯಾಗೊ (Tiago) ಹ್ಯಾಚ್‌ಬ್ಯಾಕ್‌ ಉತ್ತಮ ಆಯ್ಕೆಯಾಗಬಲ್ಲದು. ಇದರ ಆನ್-ರೋಡ್ ಬೆಲೆ, ಇಎಂಐ ಕುರಿತ ಸಂಪೂರ್ಣವಾದ ವಿವರ ಇಲ್ಲಿದೆ.

ಸದ್ಯ ಬೆಂಗಳೂರಿನಲ್ಲಿ ಟಾಟಾ ಟಿಯಾಗೊ (Tata Tiago) ಎಕ್ಸ್ಇ (ಪೆಟ್ರೋಲ್-ಬೇಸ್ ಮಾಡೆಲ್) ಮಾದರಿ ರೂ.6,91 ಲಕ್ಷ, ಹೆಚ್ಚು ಮಾರಾಟವಾಗುವ ಎಕ್ಸ್ಎಂ (ಪೆಟ್ರೋಲ್) ಆವೃತ್ತಿ ರೂ.7,33 ಲಕ್ಷ, ಎಕ್ಸ್ಇ (ಸಿಎನ್‌ಜಿ-ಬೇಸ್ ಮಾಡೆಲ್) ರೂ.8,06 ಲಕ್ಷ, ಅಧಿಕ ಸಂಖ್ಯೆಯಲ್ಲಿ ಜನರು ಕೊಂಡುಕೊಳ್ಳುವ ಎಕ್ಸ್ಎಂ (ಸಿಎನ್‌ಜಿ) ರೂ.8,48 ಲಕ್ಷ, ಎಕ್ಸ್‌ಝಡ್ಎ ಪ್ಲಸ್ ಡಿಟಿ ಎಎಂಟಿ (ಪೆಟ್ರೋಲ್) ರೂ.9,66 ಲಕ್ಷ ಆನ್ ರೋಡ್ ಬೆಲೆಯನ್ನು ಹೊಂದಿದೆ.

Tata Tiago Car On Road Price Emi Details

ನೀವು ಈ ಕಾರನ್ನು ಕನಿಷ್ಠ ರೂ.69,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,163 ಇಎಂಐ ಕಟ್ಟಬೇಕು. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ 2 ಪವರ್ ಟ್ರೇನ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 86 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

Tata Tiago Car On Road Price Emi Details

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ 73.5 ಪಿಎಸ್ ಪವರ್ ಮತ್ತು 95 ಎನ್ಎಂ ಪೀಕ್ ಟಾರ್ಕ್ ಮಾತ್ರ ಹೊರಹಾಕಲಿದ್ದು, 5-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ನೊಂದಿಗೆ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 19.43 ರಿಂದ 20.01 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್‌ನ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

ಈ ಕಾರಿಗೆ ಮಾರುತಿ ಸುಜುಕಿ ಸೆಲೆರಿಯೊ, ವ್ಯಾಗನ್ಆರ್ ಹಾಗೂ ಸಿಟ್ರಸ್ ಸಿ3 ಕಾರುಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವೇ ಕೆಲವು ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ನ ರೂಪಾಂತರಗಳ ಆನ್ ರೋಡ್ ಬೆಲೆ ಮತ್ತು ಇಎಂಐ ಆಯ್ಕೆ ಬಗ್ಗೆ ಹೇಳಿದ್ದೇವೆ. ರಾಜ್ಯದಿಂದ ರಾಜ್ಯಕ್ಕೆ ಈ ದರಗಳು ಹಾಗೂ ಸಾಲದ ಆಯ್ಕೆಗಳು ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, March 26, 2024, 10:49 [IST]
English summary
Tata tiago car on road price emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+