Tata: ಟಾಟಾ ಟಿಯಾಗೊ ಕಾರು ಖರೀದಿಸಬೇಕೇ.. ಸಿಹಿಸುದ್ದಿ, 5 ಲಕ್ಷ ಬೆಲೆ, 28 ಕಿ.ಮೀ ಮೈಲೇಜ್
ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೆಸರುವಾಗಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಅದರಲ್ಲೂ ಕಾಂಪ್ಯಾಕ್ಟ್ ಹ್ಯಾಚ್‌ಬ್ಯಾಕ್ ಟಿಯಾಗೊಗೆ ಪ್ರತ್ಯೇಕ ಅಭಿಮಾನಿ ಬಳಗವಿದ್ದು, ಹೆಚ್ಚಿನ ಬೇಡಿಕೆಯಿದೆ. ಈ ಫೆಬ್ರವರಿಯಲ್ಲಿ ಕಾಯುವಿಕೆ ಅವಧಿ ಸ್ವಲ್ಪ ಕಡಿಮೆಯಾಗಿದೆ ಎಂಬ ಮಾಹಿತಿ ದೊರೆತಿದೆ.
ಸದ್ಯ ಟಾಟಾ ಟಿಯಾಗೊ (Tata Tiago) ಪೆಟ್ರೋಲ್ ಮಾದರಿಗಳಿಗೆ ಹೋಲಿಸಿದರೆ, ಸಿಎನ್‌ಜಿ ಆವೃತ್ತಿಗಳು ಗರಿಷ್ಠ ಕಾಯುವಿಕೆಯನ್ನು ಹೊಂದಿವೆ. ಪೆಟ್ರೋಲ್ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ 2 ರಿಂದ 4 ವಾರಗಳಲ್ಲಿ ವಿತರಣೆಯಾಗಲಿವೆ. ಅದೇ ರೀತಿಯಲ್ಲಿ ಸಿಎನ್‌ಜಿ ರೂಪಾಂತರಗಳು ಕಾಯ್ದಿರಿಸಿದ ದಿನದಿಂದ 6 ವಾರಗಳೊಳಗೆ ಡಿಲೆವರಿಯಾಗುತ್ತವೆ. ಇದು ಮುಂಬೈನಲ್ಲಿ ಮಾತ್ರ ಅನ್ವಯಿಸುತ್ತದೆ.

ಈ ಕಾಯುವಿಕೆ ಅವಧಿಯು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ (Variant), ಡೀಲರ್‌ಶಿಪ್ (Dealer), ಬಣ್ಣ(Colour)ಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ಮಾಡಿರಿ. ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಟಿಯಾಗೊ ರೂ.5.65 ಲಕ್ಷದಿಂದ ರೂ.8.90 ಲಕ್ಷ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್ಎಂ, ಎಕ್ಸ್‌ಟಿ (ಒ) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಟಿಯಾಗೊ ಕಾರು ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ, ಟೊರ್ನಾಡೋ ಬ್ಲೂ ಒಳಗೊಂಡಂತೆ 6 ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಯುವ ಗ್ರಾಹಕರನ್ನು ಸೆಳೆಯುವ ವಿನ್ಯಾಸವನ್ನು ಹೊಂದಿದ್ದು, 242 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ. 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ 2 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 86 ಪಿಎಸ್ ಪವರ್ (ಶಕ್ತಿ), 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಒಳಗೊಂಡಿದೆ. ಆದರೆ 73.5 ಪಿಎಸ್ ಗರಿಷ್ಠ ಪವರ್, 95 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.
ರೂಪಾಂತರಗಳಿಗೆ ಅನುಗುಣವಾಗಿ ಈ ಕಾರು 5-ಸ್ವೀಡ್ ಮ್ಯಾನುವಲ್ ಮತ್ತು 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 19.43 ಕೆಎಂಪಿಎಲ್ ನಿಂದ 20.01 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 26.49 ಕೆಎಂ/ಕೆಜಿ - 28.06 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.
ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.
ಟಾಟಾ ಟಿಯಾಗೊ ಎಲೆಕ್ಟ್ರಿಕ್ ರೂಪದಲ್ಲಿಯೂ ಖರೀದಿಗೆ ದೊರೆಯಲಿದ್ದು, ಬೆಂಗಳೂರಿನಲ್ಲಿ ಬೇಸ್ ವೇರಿಯೆಂಟ್ ರೂ.8.43 ಲಕ್ಷ, ಟಾಪ್ ಎಂಡ್ ವೇರಿಯೆಂಟ್ ರೂ.12.62 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ. ಇದು 19.2 ಕೆಡಬ್ಲ್ಯೂಹೆಚ್ ಮತ್ತು 24 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ ಕ್ರಮವಾಗಿ 250 ಕಿಲೋಮೀಟರ್ ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಟಾಟಾ ಟಿಯಾಗೊ ಇವಿ ಬ್ಯಾಟರಿ ಪ್ಯಾಕ್ 10-80% ಚಾರ್ಜ್ ಆಗಲು 57 ನಿಮಿಷ ಬೇಕಾಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.


Click it and Unblock the Notifications