ಟಾಟಾದ ಈ ಕಾರು 28 ಕಿ.ಮೀ ಮೈಲೇಜ್ ನೀಡುತ್ತದೆ.. ಬೈಕ್‌ಗಳಿಗಿಂತ ಕಡಿಮೆ ನಿರ್ವಹಣಾ ವೆಚ್ಚ: ಸೇಫ್ಟಿಯಲ್ಲೂ ಮುಂದೆ!
ಮಾರುತಿ ಸುಜುಕಿ ಕಂಪನಿಯ ಕಾರುಗಳು ಗರಿಷ್ಠ ಮೈಲೇಜ್ ನೀಡುವುದಕ್ಕೆ ಹೆಸರುವಾಸಿಯಾಗಿವೆ. ಈಗ, ಟಾಟಾ ಮೋಟಾರ್ಸ್ ಕಾರುಗಳು ಸಹ ಹೆಚ್ಚಿನ ಇಂಧನ ದಕ್ಷತೆ (Fuel Efficiency)ಯನ್ನು ಹೊಂದಿವೆ. ಇಲ್ಲಿ ರಾಯಲ್ ಎನ್‌ಫೀಲ್ಡ್ 650 ಸರಣಿ ಬೈಕ್‌ಗಳಿಗಿಂತ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರುವ ಜನಪ್ರಿಯ ಹ್ಯಾಚ್‌ಬ್ಯಾಕ್ 'ಟಾಟಾ ಟಿಯಾಗೊ' ಬಗ್ಗೆ ತಿಳಿಸಿಕೊಟ್ಟಿದೇವೆ.
ಸಾಮಾನ್ಯವಾಗಿ ರಾಯಲ್ ಎನ್‌ಫೀಲ್ಡ್ 650 ಸರಣಿ ಮೋಟಾರ್‌ಸೈಕಲ್‌ಗಳಾಗಿರುವ ಇಂಟರ್‌ಸೆಪ್ಟರ್ ಹಾಗೂ ಸೂಪರ್ ಮೀಟಿಯರ್‌ಗಳು 25 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತವೆ. ಆದರೆ, ಟಾಟಾ ಟಿಯಾಗೊ (Tata Tiago) ಸಿಎನ್‌ಜಿ ಮಾದರಿಯು 28.06 ಕೆಎಂ/ಕೆಜಿವರೆಗೆ ಇಂಧನ ದಕ್ಷತೆಯನ್ನು ಹೊಂದಿದೆ. ಪೆಟ್ರೋಲ್ ಬೆಲೆಗೆ ಹೋಲಿಸಿದರೆ, ಸಿಎನ್‌ಜಿ ಇಂಧನ (ಫ್ಯುಯೆಲ್) ದರ ಕಡಿಮೆಯಿದ್ದು, ಈ ಕಾರಿನ ನಿರ್ವಹಣೆಗೆ ವಾಹನ ಮಾಲೀಕರು ಹೆಚ್ಚಿನ ಹಣವನ್ನು ವ್ಯಯಿಸಬೇಕಾಗಿಲ್ಲ.

ಟಾಟಾ ಟಿಯಾಗೊ ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು ಕೂಡ ಉತ್ತಮವಾದ ರೀತಿಯಲ್ಲಿಯೇ ಇಂಧನ ದಕ್ಷತೆಯನ್ನು ಹೊಂದಿದ್ದು, 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತವೆ. ಈ ಕಾರು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಖರೀದಿಗೆ ಲಭ್ಯವಿದ್ದು, ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದು ಪ್ರೀಮಿಯಂ ಬೈಕ್‌ಗಳ ದರಕ್ಕಿಂತ ಅಗ್ಗವಾಗಿದೆ. ನಿಮಗೆ ಗೊತ್ತಿರಲಿ.. ಪ್ರಖ್ಯಾತ ಕವಾಸಕಿ ಝಡ್900ಆರ್‌ಎಸ್ ಮೋಟಾರ್‌ಸೈಕಲ್ ರೂ.16.80 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ.
ನೂತನ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ (ಒ), ಎಕ್ಸ್‌ಟಿ, ಎಕ್ಸ್‌ಝಡ್ ಮತ್ತು ಎಕ್ಸ್‌ಝಡ್ ಪ್ಲಸ್ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, ಮಿಡ್‌ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ ಸೇರಿದಂತೆ ಹಲವು ಬಣ್ಣಗಳನ್ನು ತನ್ನದಾಗಿಸಿಕೊಂಡಿದ್ದು, ನಿಮಿಷ್ಟದ ಹ್ಯಾಚ್‌ಬ್ಯಾಕ್‌ನ್ನು ಖರೀದಿಸಬಹುದು. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಟಿಯಾಗೊ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ 86 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್ ಪಡೆದಿದೆ. ಆದರೆ, 73.5 ಪಿಎಸ್ ಪವರ್ ಮತ್ತು 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಹೊಸ ಟಿಯಾಗೊ ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 242 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಟಾಟಾ ಟಿಯಾಗೊ ಗ್ಲೋಬಲ್ ಎನ್‌ಸಿಎಪಿಯಿಂದ 4 ಸ್ಟಾರ್ ಸೇಫ್ಟಿ ರೇಟಿಂಗ್ ಸಹ ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಕಾರ್ನರಿಂಗ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಹೊಂದಿದೆ. ಈ ಕಾರಿಗೆ ಮಾರುತಿ ಸುಜುಕಿ ಸೆಲೆರಿಯೊ, ವ್ಯಾಗನ್ ಆರ್ ಹಾಗೂ ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ಗಳು ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications