Tata: 275 Km ರೇಂಜ್, 7.99 ಲಕ್ಷ.. 5-ಸೀಟರ್.. ಈ ಪ್ರಖ್ಯಾತ ಎಲೆಕ್ಟ್ರಿಕ್ ಕಾರಿನಲ್ಲಿ ಮಹತ್ವದ ಬದಲಾವಣೆ!

ಟಾಟಾ ಮೋಟಾರ್ಸ್ (Tata Motors), ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಟಿಯಾಗೊ ಇವಿ (Tiago EV) ಅತ್ಯಂತ ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಲಭ್ಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಈ ವರ್ಷಾಂತ್ಯದಲ್ಲಿ ಟಾಟಾ ಇದೇ ಟಿಯಾಗೊ ಎಲೆಕ್ಟ್ರಿಕ್ ಕಾರಿನಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಟಾಟಾ ಮೋಟಾರ್ಸ್ ಟಿಯಾಗೊ ಇವಿಯನ್ನು ಪ್ರಿಸ್ಟಿನ್ ವೈಟ್, ಮಿಡ್‌ನೈಟ್‌ ಪ್ಲಮ್, ಟೀಲ್ ಬ್ಲೂ, ಡೇಟೋನಾ ಗ್ರೇ ಹಾಗೂ ಟ್ರಾಪಿಕಲ್ ಮಿಸ್ಟ್ ಎಂಬ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಮಾರಾಟ ಮಾಡುತ್ತಿತ್ತು. ಸದ್ಯ, 'ಮಿಡ್‌ನೈಟ್‌ ಪ್ಲಮ್' ಬಣ್ಣದೊಂದಿಗೆ ಗ್ರಾಹಕರ ಖರೀದಿಗೆ ದೊರೆಯುತ್ತಿದ್ದ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇನ್ಮುಂದೆ ಟಿಯಾಗೊ ಇವಿ 4 ಬಣ್ಣದ ಆಯ್ಕೆಯಲ್ಲಿ ಮಾತ್ರ ಸಿಗುತ್ತದೆ.

Tata Tiago Electric Car Get Update Midnight Plum Color Discontinued Details

ಈ ಮೊದಲು ಮಿಡ್‌ನೈಟ್‌ ಪ್ಲಮ್ (Midnight Plum) ಬಣ್ಣದ ಟಿಯಾಗೊ ಇವಿ ಆಯ್ಕೆ ಮಾಡಿದವರಿಗೆ ಬೇರೆ ಬಣ್ಣದ ಕಾರನ್ನು ತೆಗೆದುಕೊಳ್ಳಲು ಮನವೊಲಿಸುವಂತೆ ಎಲ್ಲ ಡೀಲರ್‌ಶಿಪ್‌ಗಳಿಗೆ ಕಂಪನಿಯು ಸಲಹೆ ನೀಡಿದೆ. ಇದರ ಹೊರತಾಗಿ ನೂತನ ಟಿಯಾಗೊ ಇವಿಯಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿಲ್ಲ.

ಸದ್ಯ, ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಚ್ಚ ಹೊಸ ಟಾಟಾ ಟಿಯಾಗೊ ಇವಿ (Tata Tiago EV), ರೂ.7.99 ಲಕ್ಷದಿಂದ ರೂ.11.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಕ್ಸ್ಇ, ಎಕ್ಸ್‌ಟಿ ಮತ್ತು ಎಕ್ಸ್‌ಝಡ್ ಪ್ಲಸ್ ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

Tata Tiago Electric Car Get Update Midnight Plum Color Discontinued Details

ಈ ಕಾರು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರ 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಹೊಂದುರುವ ಮಾಡೆಲ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 61 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 221 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಮತ್ತೊಂದು 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್‌ನಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 75 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 114 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ ಭರ್ತಿ ಚಾರ್ಜ್‌ನಲ್ಲಿ 275 ಕಿಲೋಮೀಟರ್ ಕ್ರಮಿಸುತ್ತದೆ.

Tata Tiago Electric Car Get Update Midnight Plum Color Discontinued Details

ನೂತನ ಟಾಟಾ ಟಿಯಾಗೊ ಇವಿಯಲ್ಲಿ 5 ಮಂದಿ ಓಡಾಟ ನಡೆಸಬಹುದು. ಈ ಕಾರಿನ ಬ್ಯಾಟರಿ ಪ್ಯಾಕ್ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಕೇವಲ 58 ನಿಮಿಷಗಳಲ್ಲಿ 10 ರಿಂದ 80% ಚಾರ್ಜ್ ಆಗುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಕ್ರೂಸ್ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, December 13, 2024, 10:11 [IST]
English summary
Tata tiago electric car get update midnight plum color discontinued details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+