Tata: ಪೆಟ್ರೋಲ್ ಕಾರಿನ ಬೆಲೆಗೆ ಸಿಗುತ್ತದೆ ಟಾಟಾ ಟಿಯಾಗೊ ಇವಿ.. ರೂ.70,000 ಇಳಿಕೆ, ಯಾವ ರೂಪಾಂತರಕ್ಕೆ ಎಷ್ಟು?
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಮಂಗಳವಾರ ತನ್ನ ಎಲೆಕ್ಟ್ರಿಕ್ ಕಾರುಗಳ ಬೆಲೆಯನ್ನು ದೊಡ್ಡಮಟ್ಟದಲ್ಲಿ ಕಡಿತಗೊಳಿಸಿದೆ. ಅದರಲ್ಲೂ ಟಿಯಾಗೊ ಇವಿ (Tiago EV) ದರವನ್ನು ರೂ.70,000 ವರೆಗೆ ಇಳಿಸಿದ್ದು, ಯಾವ ರೂಪಾಂತರಕ್ಕೆ ಎಷ್ಟು ಬೆಲೆ ಕಡಿಮೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಟಾಟಾ ಟಿಯಾಗೊ ಇವಿ (Tata Tiago EV) ಕಾರಿನ ಎಕ್ಸ್ಇ ಮೀಡಿಯಂ ರೇಂಜ್ ರೂಪಾಂತರದ ಬೆಲೆ ಭಾರೀ ಇಳಿಕೆಯಾಗಿದ್ದು, ರೂ.70,000 ಕಡಿಮೆಯಾಗಿದೆ. ಎಕ್ಸ್‌ಟಿ ಮೀಡಿಯಂ ರೇಂಜ್ ಮತ್ತು ಎಕ್ಸ್‌ಟಿ ಲಾಂಗ್ ರೇಂಜ್ ರೂಪಾಂತರಗಳ ದರ ಕ್ರಮಕಾಗಿ ರೂ.35,000 ಮತ್ತು ರೂ.30,000 ಕಡಿತವಾಗಿದೆ. ಉಳಿದಂತೆ ಎಲ್ಲ ರೂಪಾಂತರಗಳ (Variants) ದರವನ್ನು ರೂ.20,000 ಇಳಿಸಲಾಗಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಇವಿ, ರೂ.7.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ಈ ಕಾರು, ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಜೊತೆಗೆ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ.
ಟಾಟಾ ಟಿಯಾಗೊ ಇವಿ, 2 ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಚಿಕ್ಕದಾದ 19.2 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪಡೆದಿರುವ ಕಾರಿನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 61 ಪಿಎಸ್ ಗರಿಷ್ಠ ಪವರ್ (ಶಕ್ತಿ), 110 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಹಾಗೆಯೇ ಭರ್ತಿ ಚಾರ್ಜ್ ನಲ್ಲಿ 250 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ದೊಡ್ಡದಾದ 24 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಹೊಂದಿರುವ ಕಾರಿನಲ್ಲಿ ಉಪಯೋಗಿಸಿರುವ ಎಲೆಕ್ಟ್ರಿಕ್ ಮೋಟಾರ್, 75 ಪಿಎಸ್ ಗರಿಷ್ಠ ಪವರ್, 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ಕ್ರಮಿಸುತ್ತದೆ. ಈ ಟಿಯಾಗೊ ಇವಿ ಕೊಂಚ ಹತ್ತಿರದ ನಗರಗ ಪ್ರಯಾಣಕ್ಕೆ ಹೆಚ್ಚು ಸೂಕ್ತವೆಂದು ಹೇಳಬಹುದು.
ಚಾರ್ಜಿಂಗ್ ಆಯ್ಕೆ ಕುರಿತು ಹೇಳುವುದಾದರೆ, ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಈ ಕಾರಿನ ಬ್ಯಾಟರಿ ಪ್ಯಾಕ್, ಶೇಕಡ 10-80% ಚಾರ್ಜ್ ಆಗಲು ಕೇವಲ 57 ನಿಮಿಷ ಸಾಕು. 15 ಎ ಸಾಕೆಟ್ ಚಾರ್ಜರ್ ಉಪಯೋಗಿಸಿದಾಗ 19.2 ಕೆಡಬ್ಲ್ಯೂಹೆಚ್ ಬ್ಯಾಟರಿ ಹೊಂದಿರುವ ಕಾರು 6.9 ಗಂಟೆ, 24 ಕೆಡಬ್ಲ್ಯೂಹೆಚ್ ಪಡೆದಿರುವ ಕಾರು 8.7 ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಆಗುತ್ತದೆ.
ಟಾಟಾ ಟಿಯಾಗೊ ಇವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ರೈನ್ ಸೆನ್ಸಿಂಗ್ ವೈಪರ್ ಅನ್ನು ಒಳಗೊಂಡಿದೆ.
ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಿಟ್ರಸ್ ಇಸಿ3 ಮತ್ತು ಎಂಜಿ ಕಾಮೆಟ್ ಇವಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications