ಟಾಟಾದ ಈ ಎಲೆಕ್ಟ್ರಿಕ್ ಕಾರು ಎಲ್ಲರಿಗೂ ಅಚ್ಚುಮೆಚ್ಚು.. ರೂ.7.99 ಲಕ್ಷ ಬೆಲೆ, 315 ಕಿ.ಮೀ ಓಡುತ್ತದೆ!
ಭಾರತದ ಎಲೆಕ್ಟ್ರಿಕ್ ವಾಹನ (ಇವಿ) ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors) ಮುಂಚೂಣಿಯಲ್ಲಿದೆ. ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ (ಎಫ್‌ಎಡಿಎ) ಪ್ರಕಾರ, 2024ರ ಆರ್ಥಿಕ ವರ್ಷದಲ್ಲಿ ಕಂಪನಿಯು ಶೇಕಡ 70.6% ಮಾರುಕಟ್ಟೆ ಪಾಲನ್ನು ಹೊಂದಿದೆ. ಅದರಲ್ಲೂ ಟಾಟಾ ಮಾರಾಟಗೊಳಿಸುವ 'ಟಿಯಾಗೊ ಇವಿ' ಜನಪ್ರಿಯ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ನೀವು ಈ ಕಾರನ್ನು ಖರೀದಿಸಲು ಯೋಚಿಸುತ್ತಿದ್ದೀರಾ.. ಇಲ್ಲಿ ನೂತನ ಟಿಯಾಗೊ ಇವಿ ಬೆಲೆ, ಕಾರ್ಯಕ್ಷಮತೆ ಮತ್ತು ವಿಶೇಷತೆ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು: ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಟಾಟಾ ಟಿಯಾಗೊ ಇವಿ (Tata Tiago EV) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಕ್ಸ್ಇ, ಎಕ್ಸ್‌ಟಿ, ಎಕ್ಸ್‌ಜಡ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಲಭ್ಯವಿದೆ.

ಬಣ್ಣಗಳು, ಆಸನ ಆಯ್ಕೆ: ಈ ಎಲೆಕ್ಟ್ರಿಕ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 240 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಪ್ರಿಸ್ಟಿನ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಕಾರ್ಯಕ್ಷಮತೆ: ಟಾಟಾ ಟಿಯಾಗೊ ಇವಿಯಲ್ಲಿ 19.2 ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಬಳಸಲಾಗಿದೆ. ಚಿಕ್ಕದಾದ ಬ್ಯಾಟರಿ ಪ್ಯಾಕ್ ಹೊಂದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 61 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ದೊಡ್ಡದಾದ ಬ್ಯಾಟರಿ ಪಡೆದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 75 ಪಿಎಸ್ ಶಕ್ತಿ ಮತ್ತು 114 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು ಬ್ಯಾಟರಿ ಪ್ಯಾಕ್‌ಗೆ ತಕ್ಕಂತೆ ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಉಪಯೋಗ ಮಾಡಿದಾಗ ಇದರ ಬ್ಯಾಟರಿ ಪ್ಯಾಕ್ ಶೇಕಡ 10 ರಿಂದ 80% ಚಾರ್ಜ್ ಆಗಲು ಕೇವಲ 57 ನಿಮಿಷ ತೆಗೆದುಕೊಳ್ಳುತ್ತದೆ. ಅದೇ 15ಎ ಸಾಕೆಟ್ ಚಾರ್ಜರ್ ಬಳಕೆಯಲ್ಲಿ ಶೇಕಡ 10-100% ಸರಿ ಸುಮಾರು 8 ಗಂಟೆ ಬೇಕಾಗುತ್ತದೆ.

ವೈಶಿಷ್ಟ್ಯಗಳು: ಟಾಟಾ ಟಿಯಾಗೊ ಇವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಹಾಗೂ ಕ್ರೂಸ್ ಕಂಟ್ರೋಲ್ ಅನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ರೈನ್ ಸೆನ್ಸಿಂಗ್ ವೈಪರ್ಸ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಕ್ಯಾಮೆರಾವನ್ನು ಪಡೆದಿದೆ. ಟಿಯಾಗೊ ಇವಿಗೆ ಸಿಟ್ರನ್ ಇಸಿ3 ಮತ್ತು ಎಂಜಿ ಕಾಮೆಟ್ ಇವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications