Tata: ಟಾಟಾ ಎಲೆಕ್ಟ್ರಿಕ್ ಕಾರುಗಳಿಗಾಗಿ ಶೋರೂಂ ಎದುರು ಕ್ಯೂ ನಿಂತ ಜನರು.. ಕೈಗೆಟುಕುವ ಬೆಲೆ, ಜಾಸ್ತಿ ಓಡುತ್ತವೆ!
ಭಾರತದ ಎಲೆಕ್ಟ್ರಿಕ್ ವಾಹನ (ಇವಿ) ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors) ಮುಂಚೂಣಿಯಲ್ಲಿದೆ. ಕಂಪನಿಯು ಮಾರಾಟಗೊಳಿಸುವ ಟಿಯಾಗೂ, ಟಿಗೂರ್, ಪಂಚ್ ಮತ್ತು ನೆಕ್ಸಾನ್ ಇವಿಗಳಿಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಪ್ರಮುಖ ನಗರಗಳಲ್ಲಿ ಈ ಕಾರುಗಳು ವಿತರಣೆಯಾಗಲು ತಿಂಗಳುಗಟ್ಟಲೇ ಸಮಯಾವಕಾಶಬೇಕು.
ಬೆಂಗಳೂರಿನಲ್ಲಿ ಟಿಯಾಗೂ ಇವಿ (Tiago EV), ಟಿಗೂರ್ ಇವಿ (Tigor EV), ಪಂಚ್ ಇವಿ (Punch EV) ಹಾಗೂ ನೆಕ್ಸಾನ್ ಇವಿ (Nexon EV)ಗಳು ವಿತರಣೆಯಾಗಲು ಸರಿ ಸುಮಾರು 2 ರಿಂದ 3 ತಿಂಗಳು ಬೇಕಾಗುತ್ತದೆ. ನವದೆಹಲಿಯಲ್ಲಿ ಟಿಯಾಗೂ ಇವಿ, ಟಿಗೂರ್ ಇವಿ ಮತ್ತು ಪಂಚ್ ಇವಿಗಳು 2 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿವೆ. ನೆಕ್ಸಾನ್ ಇವಿಯು 2-3 ತಿಂಗಳಲ್ಲಿ ಗ್ರಾಹಕರ ಮನೆ ಸೇರುತ್ತದೆ.

ಮುಂಬೈನಲ್ಲಿ ಟಿಯಾಗೂ ಇವಿ, ಟಿಗೂರ್ ಇವಿ ಮತ್ತು ನೆಕ್ಸಾನ್ ಇವಿಗಳು 2 ತಿಂಗಳಲ್ಲಿ ಡಿಲೆವರಿಯಾಗುತ್ತವೆ. ಅದೇ ರೀತಿಯಲ್ಲಿ ಪಂಚ್ ಇವಿ 1.5ರಿಂದ 2.5 ತಿಂಗಳು ಕಾಯುವಿಕೆ ಅವಧಿಗೆ ಪಡೆದಿದೆ. ಹೈದರಬಾದ್ ನಲ್ಲಿ ಟಿಯಾಗೂ ಇವಿ, ಟಿಗೂರ್ ಇವಿ ಹಾಗೂ ಪಂಚ್ ಇವಿಗಳು 2 ತಿಂಗಳಲ್ಲಿ ವಿತರಣೆಯಾಗುತ್ತವೆ. ನೆಕ್ಸಾನ್ ಇವಿಯು 2-3 ತಿಂಗಳಲ್ಲಿ ಖರೀದಿದಾರರ ಮನೆ ಸೇರುತ್ತದೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು, ರೂ.14.74 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 325 ರಿಂದ 465 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಪಂಚ್ ಇವಿ ರೂ.10.99 ಲಕ್ಷದಿಂದ ರೂ.15.49 ಲಕ್ಷ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 25 ಕೆಡಬ್ಲ್ಯೂಹೆಚ್ ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 315 ರಿಂದ 421 ಕಿ.ಮೀ ಓಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಟಾಟಾ ಟಿಯಾಗೊ ಇವಿಯು ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 19.2 ಕೆಡಬ್ಲ್ಯೂಹೆಚ್ ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿದ್ದು, ಪೂರ್ತಿ ಚಾರ್ಜ್ ನಲ್ಲಿ 250 ಕಿಲೋಮೀಟರ್ ರಿಂದ 315 ಕಿಲೋಮೀಟರ್ ಓಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಟಿಗೂರ್ ಇವಿ ವಾಣಿಜ್ಯ ಬಳಕೆಗೆ ಮಾತ್ರ ಲಭ್ಯವಿದ್ದು, ರೂ.12.49 ಲಕ್ಷದಿಂದ ರೂ.13.75 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 26 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ಕ್ರಮಿಸುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಸ್ಪೀಕರ್ ಸೌಂಡ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications