Tata: ಶ್ರೀಸಾಮಾನ್ಯರ ಐರಾವತ ಈ ಟಾಟಾ ಕಾರು.. ರೂ.6.30 ಲಕ್ಷ ಬೆಲೆ, 28 ಕಿ.ಮೀ ಮೈಲೇಜ್
ಭಾರತದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯ ಪಡೆದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಟಿಗೂರ್ (Tigor) ಪ್ರಖ್ಯಾತ ಸೆಡಾನ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳುತ್ತಿದ್ದಾರೆ. ನೀವು ಈ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಇಲ್ಲಿ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯ (Features)ಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಟಾಟಾ ಟಿಗೂರ್ (Tata Tigor) ಅತ್ಯಂತ ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ರೂ.6.30 ಲಕ್ಷದಿಂದ ರೂ.9.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಜಡ್ ಮತ್ತು ಎಕ್ಸ್‌ಜಡ್ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ಜೊತೆಗೆ ಓಪಲ್ ವೈಟ್, ಮ್ಯಾಗ್ನೆಟಿಕ್ ರೆಡ್ ಹಾಗೂ ಡೇಟೋನಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ನೋಡುಗರನ್ನು ಸೆಳೆಯುವಂತಹ ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಅಚ್ಚುಕಟ್ಟಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 419 ಸಾಮರ್ಥ್ಯದ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಟಾಟಾ ಟಿಗೂರ್ ಸೆಡಾನ್ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ 86 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದಾಗ್ಯೂ 73.5 ಪಿಎಸ್ ಶಕ್ತಿ ಮತ್ತು 95 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 19.28 ರಿಂದ 19.60 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ ಬರೋಬ್ಬರಿ 26.49 ರಿಂದ 28.06 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.
ಟಾಟಾ ಟಿಗೂರ್ ಸೆಡಾನ್ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8 ಸ್ಪೀಕರ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕ್ರೂಸ್ ಕಂಟ್ರೋಲ್ ಹಾಗೂ ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್ ಅನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ. ಟಿಗೂರ್‌ಗೆ ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ಔರಾ ಹಾಗೂ ಹೋಂಡಾ ಅಮೇಜ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications