Tigor: ಶಕ್ತಿಯುತ ಟಾಟಾ ಟಿಗೂರ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು?, EMI ಏನು?
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಇಲ್ಲಿ ಟಿಗೂರ್ (Tigor) ಸೆಡಾನ್ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ವಿವರಿಸಿದ್ದೇವೆ.
ಬೆಂಗಳೂರಿನಲ್ಲಿ ಟಾಟಾ ಟಿಗೂರ್ (Tata Tigor) ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಎಕ್ಸ್ಇ (ಪೆಟ್ರೋಲ್) ರೂ.7.69 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಎಕ್ಸ್‌ಝಡ್ ಪ್ಲಸ್ (ಪೆಟ್ರೋಲ್) ರೂ.9.72 ಲಕ್ಷ, ಬೇಸ್ ವೇರಿಯೆಂಟ್ ಎಕ್ಸ್ಎಂ (ಸಿಎನ್‌ಜಿ) ರೂ.9.44 ಲಕ್ಷ, ಟಾಪ್ ಮಾಡೆಲ್ ಎಕ್ಸ್‌ಝಡ್ಎ ಪ್ಲಸ್ ಎಎಂಟಿ (ಸಿಎನ್‌ಜಿ) ರೂ.11.51 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಟಾಟಾ ಟಿಗೂರ್ ಸೆಡಾನ್‌ನ್ನು ಖರೀದಿಸಲು ರೂ.77,000 ಡೌನ್ ಪೇಮೆಂಟ್ ಪಾವತಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷ ಅವಧಿಗೆ ತಿಂಗಳಿಗೆ ರೂ.14,638 ಇಎಂಐ ಕಟ್ಟಬೇಕು. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಮ್ಯಾಗ್ನೆಟಿಕ್ ರೆಡ್, ಅರಿಜೋನಾ ಬ್ಲೂ, ಓಪಲ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ಟಾಟಾ ಟಿಗೂರ್ 2 ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 86 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಆದರೆ, 73.5 ಪಿಎಸ್ ಪವರ್ ಮತ್ತು 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದ್ದು, ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೂ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 19.28 ರಿಂದ 19.60 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.
ಟಾಟಾ ಟಿಗೂರ್ (Tata Tigor) ಸೆಡಾನ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ರೈನ್ ಸೆನ್ಸಿಂಗ್ ವೈಪರ್ಸ್, ಕೀಲೆಸ್ ಎಂಟ್ರಿ, ಆಟೋ ಎಸಿ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಗೂ ಈ ಕಾರು ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್ ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ. ಕಾರಿಗೆ ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ಔರಾ ಮತ್ತು ಹೋಂಡಾ ಅಮೇಜ್ ಸೆಡಾನ್ ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಟಾಟಾ ಟಿಗೂರ್ ಎಲೆಕ್ಟ್ರಿಕ್ ರೂಪದಲ್ಲಿ ಖರೀದಿಗೆ ಸಿಗಲಿದ್ದು, ರೂ.12.49 ಲಕ್ಷದಿಂದ ರೂ.13.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, 315 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಬಗ್ಗೆ ಮಾತ್ರ ವಿವರಿಸಲಾಗಿದ್ದು, ಈ ದರಗಳು ಮತ್ತು ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications