ಈ ಕಾರಿಗೆ ಸಖತ್ ಡಿಮ್ಯಾಂಡ್: ತಿಂಗಳಿಗೆ 17,441 ಕಾರುಗಳ ಮಾರಾಟ: ಭಾರತದ ನಂ.1 ಕಾರು

ಭಾರತದಲ್ಲಿ ಕಾರು ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ, ಸೆಪ್ಟೆಂಬರ್ 2024 ರಲ್ಲಿ ಕಾರುಗಳ ಮಾರಾಟದಲ್ಲಿ ಬಲವಾದ ಬದಲಾವಣೆ ಕಂಡುಬಂದಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೋಟಿವ್ ಮ್ಯಾನುಫ್ಯಾಕ್ಚರರ್ಸ್‌ನ ಮಾಹಿತಿಯ ಪ್ರಕಾರ, ಮಾರಾಟ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಮಾರುತಿ ಸುಜುಕಿ ಎರ್ಟಿಗಾ ಪಡೆದುಕೊಂರೆ ನಂತರದ ಸ್ಥಾನವನ್ನು ಸ್ವಿಫ್ಟ್ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ ಮುನ್ನುಗ್ಗುತ್ತಿದೆ. ಅತಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಮೊದಲೆರಡು ಸ್ಥಾನಗಳಲ್ಲಿ ಮಾರುತಿ ಸುಜುಕಿ ವಾಹನಗಳು ಇರುವುದು ವಿಶೇಷ. ಈ ಮೂರು ಕಾರುಗಳ ಮಾರಾಟ ವಿವರಗಳನ್ನು ಇಲ್ಲಿ ನೋಡೋಣ.

ಮಾರುತಿ ಸುಜುಕಿ ಎರ್ಟಿಗಾ: ಮಾರುತಿ ಸುಜುಕಿಯ ಎರ್ಟಿಗಾ ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಮಾರಾಟ ಕಾಣುತ್ತಿರುವ ಕಾರಾಗಿದ್ದು, ಮಾರಾಟ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಸೆಪ್ಟೆಂಬರ್ 2024 ರಲ್ಲಿ ಬರೋಬ್ಬರಿ 17,441 ಯುನಿಟ್ ಕಾರುಗಳ ಮಾರಾಟವನ್ನು ದಾಖಲಿಸಿದೆ. ಕಳೆದ ವರ್ಷ ಸೆಪ್ಟೆಂಬರ್ 2023ರ ಮಾರಾಟಕ್ಕೆ ಹೋಲಿಸಿದರೆ ಈ ಬಾರಿ 3,913 ಕಾರುಳು ಹೆಚ್ಚಾಗಿ ಮಾರಾಟವಾಗಿವೆ.

top-3-best-selling-cars-in-india-maruti-ertiga-swift-hyundai-creta

ಮಾರುತಿ ಎರ್ಟಿಗಾ ಬೆಲೆಯು ಸದ್ಯ ರೂ. 8.69 ಲಕ್ಷದಿಂದ ರೂ. 13.03 ಲಕ್ಷವಾಗಿದ್ದು, ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. 1.5 ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ, 5 ಸ್ವೀಡ್ ಮ್ಯಾನುವಲ್/ 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನೊಂದಿಗೆ ಬರುತ್ತದೆ. 20.51 ಕಿ.ಮೀ ನಿಂದ 26.11 ಕಿ.ಮೀ ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್: ಸೆಪ್ಟೆಂಬರ್ ತಿಂಗಳಲ್ಲಿ ಅತಿಹೆಚ್ಚು ಮಾರಾಟವಾದ ಕಾರುಗಳಲ್ಲಿ ಎರಡನೇ ಸ್ಥಾನವನ್ನು ಮಾರುತಿ ಸ್ವಿಫ್ಟ್ ಪಡೆದುಕೊಂಡಿದೆ. ಸ್ವಿಫ್ಟ್ ಒಟ್ಟು 16,241 ಯುನಿಟ್ ಕಾರುಗಳ ಮಾರಾಟವನ್ನು ದಾಖಲಿಸಿದೆ. ಸೆಪ್ಟೆಂಬರ್ 2023ರಲ್ಲಿ ಮಾರಾಟವಾದ ಕಾರುಗಳಿಗಿಂತ ಈ ಬಾರಿ 1,538 ಕಾರುಗಳು ಹೆಚ್ಚಾಗಿ ಮಾರಾಟವಾಗಿವೆ.

top-3-best-selling-cars-in-india-maruti-ertiga-swift-hyundai-creta

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಮಾರುತಿ ಸುಜುಕಿ ಸ್ವಿಫ್ಟ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಹ್ಯುಂಡೈ ಕ್ರೆಟಾ: ಹ್ಯುಂಡೈ ಕ್ರೆಟಾ ಮಾರಾಟ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಕ್ರೆಟಾ ಸೆಪ್ಟೆಂಬರ್ 2024 ರಲ್ಲಿ ಒಟ್ಟು 15,902 ಯುನಿಟ್ ಕಾರುಗಳ ಮಾರಾಟವನ್ನು ದಾಖಲಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ಗೆ ಹೋಲಿಸಿದರೆ ಈ ಬಾರಿ 3,185 ಯುನಿಟ್ ಕಾರುಗಳು ಹೆಚ್ಚಾಗಿ ಮಾರಾಟವಾಗಿವೆ. ವರ್ಷದಿಂದ ವರ್ಷಕ್ಕೆ ಶೇಕಡಾ 25.05 ರಷ್ಟು ಬೆಳವಣಿಗೆಯನ್ನು ಕಂಡಿದೆ.

top-3-best-selling-cars-in-india-maruti-ertiga-swift-hyundai-creta

ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಹ್ಯುಂಡೈ ಕ್ರೆಟಾ 3 ಪವರ್‌ಟ್ರೇನ್ ನೊಂದಿಗೆ ಸಿಗುತ್ತದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಸಿಗಲಿದೆ.

ರೂಪಾಂತರಗಳಿಗೆ ಅನುಗುಣವಾಗಿ 6 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್, ಸಿವಿಟಿ, 7 - ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಚಾಲಿತ ಮಾದರಿಗಳು 17.4 ರಿಂದ 18.4 ಕೆಎಂಪಿಎಲ್ ಮೈಲೇಜ್, ಡೀಸೆಲ್ ಚಾಲಿತ ಮಾದರಿಗಳು 19.1 ರಿಂದ 21.8 ಕಿ.ಮೀ ಮೈಲೇಜ್ ಕೊಡುತ್ತವೆ.

Article Published On: Monday, October 14, 2024, 12:03 [IST]
English summary
Top 3 best selling cars in india maruti ertiga swift hyundai creta
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+