ಅದ್ಭುತ ಪವರ್, ಭರ್ಜರಿ ಮೈಲೇಜ್ ಬೇಕೇ?: ಈ ಕಡಿಮೆ ಬೆಲೆಯ ಡೀಸೆಲ್ ಎಂಜಿನ್ SUV ಕಾರುಗಳನ್ನು ಖರೀದಿಸಿ
ಭಾರತದಲ್ಲಿ ಪೆಟ್ರೋಲ್ ಎಂಜಿನ್‌ಗಳು ಸದ್ಯಕ್ಕೆ ಅಬ್ಬರಸಿಸುತ್ತಿದ್ದರೂ, ಪೆಟ್ರೋಲ್ ಎಂಜಿನ್ ಹೆಚ್ಚು ರಿಫೈನ್ ಆಗಿದೆ ಎಂದರೂ, ಡೀಸೆಲ್ ಎಂಜಿನ್ ಕಾರುಗಳನ್ನು ಇಷ್ಟಪಡುವವರೇ ಹೆಚ್ಚು. ಪೆಟ್ರೋಲ್ ಕಾರುಗಳಿಗಿಂತ ಡೀಸೆಲ್ ಕಾರುಗಳ ಬೆಲೆ ಜಾಸ್ತಿಯಿದ್ದರೂ, ಡೀಸೆಲ್ ಎಂಜಿನ್‌ಗಳ ಮೈಲೇಜ್ ಮತ್ತು ಆ ಎಂಜಿನ್‌ಗಳು ಉತ್ಪಾದನೆ ಮಾಡುವ ಪವರ್ ಮತ್ತು ಟಾರ್ಕ್ ಎಲ್ಲರನ್ನೂ ಅತ್ತ ಆಕರ್ಷಿಸುತ್ತದೆ. ಇಂದು ನಾವು ಸದ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿರುವ ಡೀಸೆಲ್ ಎಸ್‌ಯುವಿಗಳ ಕುರಿತಾಗಿ ನೋಡಲಿದ್ದು, ಈ ಕಾರುಗಳ ಕುರಿತಾಗಿನ ಸಂಪೂರ್ಣ ಮಾಹಿತಿಗೆ ಈ ಲೇಖನವನ್ನು ಕೊನೆಯವರೆಗೆ ಓದಿ.
1. ಕಿಯಾ ಸಾನೆಟ್: ಕಿಯಾ ಸೋನೆಟ್ ಫೇಸ್‌ಲಿಫ್ಟ್ ಎಸ್‌ಯುವಿಯ ಡೀಸೆಲ್ ಪವರ್ ಟ್ರೈನ್ ಕೊಂಚ ಶಕ್ತಿಯುತವಾಗಿದೆ. 1.5 - ಲೀಟರ್ ಟರ್ಬೊ ಡಿಸೇಲ್ ಎಂಜಿನ್ 114 bhp ಪವರ್ ಮತ್ತು 250 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಐಎಂಟಿ ಹಾಗೂ 6 - ಸ್ವೀಡ್ ಟಾರ್ಕ್ ಕನ್ವರ್ಟರ್ ಆಟೋಮೆಟಿಕ್ ಟ್ರಾನ್ಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ಒಳಗೊಂಡಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಕಿಯಾ ಸೋನೆಟ್ ಎಸ್‌ಯುವಿ, ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್‌ಟಿಇ, ಎಕ್ಸ್‌ಟಿಇ (ಒ), ಎಕ್ಸ್‌ಟಿಕೆ, ಎಕ್ಸ್‌ಟಿಕೆ (ಒ) ಎಕ್ಸ್‌ಟಿಕೆ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್) ಹಾಗೂ ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.
2. ಟಾಟಾ ನೆಕ್ಸಾನ್: ನೆಕ್ಸಾನ್ ಕಾರು (TATA Nexon), 6 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಫಿಯರ್‌ಲೆಸ್ ಪರ್ಪಲ್, ಕ್ರಿಯೇಟಿವ್ ಓಷನ್, ಪ್ರಿಸ್ಟಿನ್ ವೈಟ್, ಪ್ಯೂರ್ ಗ್ರೇ, ಡೇಟೋನಾ ಗ್ರೇ ಮತ್ತು ಫ್ಲೇಮ್ ರೆಡ್. ಮುಖ್ಯವಾಗಿ, ಫ್ಲೇಮ್ ರೆಡ್ ಮತ್ತು ಡೇಟೋನಾ ಗ್ರೇ ಬಣ್ಣಗಳನ್ನು ಹೊಂದಿರುವ ಕಾರು, ವೈಟ್ ಅಥವಾ ಬ್ಲ್ಯಾಕ್ ಬಣ್ಣದ ರೂಫ್ ಆಯ್ಕೆಯಲ್ಲಿ ಸಿಗುತ್ತದೆ.

1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿರುವ ಕಾರು, 113.3 bhp ಪವರ್ ಮತ್ತು 260 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಒಳಗೊಂಡಿದೆ. 6 ಸ್ವೀಡ್ ಮ್ಯಾನುವಲ್ ಅಥವಾ 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಈ ಮೂಲಕ ಅತ್ಯಂತ ಪವರ್ ಫುಲ್ ಆಗಿದೆ.
3. ಮಹೀಂದ್ರಾ XUV 3XO: ದೇಶೀಯವಾಗಿ ಖರೀದಿಗೆ ದೊರೆಯುವ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಂಎಕ್ಸ್1, ಎಂಎಕ್ಸ್2, ಎಂಎಕ್ಸ್2 ಪ್ರೊ, ಎಂಎಕ್ಸ್3, ಎಂಎಕ್ಸ್3 ಪ್ರೊ ಸೇರಿದಂತೆ 9 ರೂಪಾಂತರ (ವೇರಿಯೆಂಟ್)ಗಳು ಹಾಗೂ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

1.5-ಲೀಟರ್ ಡೀಸೆಲ್ ಎಂಜಿನ್ 117 ಪಿಎಸ್ ಪವರ್ ಹಾಗೂ 300 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲು ಶಕ್ತವಾಗಿದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಪಡೆದಿದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ಮಾದರಿಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 20.6 ರಿಂದ 21.2 ಕೆಎಂಪಿಎಲ್ ಇಂಧನ ದಕ್ಷತೆ (Fuel Efficiency)ಯನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications