ಈ ವರ್ಷದ ಜೂನ್‌ವರೆಗೂ ಬಿಡುಗಡೆಯಾದ ಕಾರುಗಳಿವು.. ಒಂದಕ್ಕಿಂತ ಒಂದು ಅದ್ಭುತ.. ಯಾವುವು?

ಭಾರತವು ವಿಶ್ವದಲ್ಲೇ ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದೆ. ಪ್ರತಿವರ್ಷ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಪರಿಚಯಿಸಲಾಗುತ್ತದೆ. 2024 ಬಿಡುವಿಲ್ಲದ ವರ್ಷವಾಗಿದ್ದು, ದೇಶೀಯ ಮಾರುಕಟ್ಟೆಗೆ ಹಲವು ಕಾರುಗಳು ಬಂದಿವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನಾವಿಲ್ಲಿ ಈ ವರ್ಷದ ಮೊದಲಾರ್ಧ (ಜನವರಿ-ಜೂನ್) ಬಿಡುಗಡೆಗೊಂಡ ಕಿಯಾ ಸೋನೆಟ್ ಫೇಸ್‌ಲಿಫ್ಟ್, ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್, ಟಾಟಾ ಪಂಚ್ ಇವಿ ಮತ್ತು ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರುಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಈ ವರ್ಷದ ಜನವರಿಯಲ್ಲಿ ಪರಿಚಯಿಸಲಾದ ಕಿಯಾ ಸೋನೆಟ್ ಫೇಸ್‌ಲಿಫ್ಟ್ (Kia Sonet Facelift) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top 4 Cars Launched In 2024 First Half Kia Sonet Hyundai Creta Tata Punch EV Mahindra XUV 3XO

ಈ ಕಿಯಾ ಸೋನೆಟ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta Facelift) ಎಸ್‌ಯುವಿ ಕೂಡ ವರ್ಷಾರಂಭದಲ್ಲೇ ಬಿಡುಗಡೆಯಾಗಿತ್ತು. ಈ ಕಾರು ರೂ.11 ಲಕ್ಷದಿಂದ ರೂ.20.15 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ಲಭ್ಯವಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Top 4 Cars Launched In 2024 First Half Kia Sonet Hyundai Creta Tata Punch EV Mahindra XUV 3XO

ನೂತನ ಕ್ರೆಟಾ ಕಾರಿನಲ್ಲಿಯೂ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಟಾಟಾ ಪಂಚ್ ಇವಿ (Tata Punch EV) ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಈ ವರ್ಷದ ಮೊದಲಾರ್ಧದಲ್ಲಿಯೇ ದೇಶೀಯ ಮಾರುಕಟ್ಟೆಗೆ ಬಂದಿತ್ತು. ಸದ್ಯ ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 25 ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ಕ್ರಮಿಸುತ್ತದೆ.

Top 4 Cars Launched In 2024 First Half Kia Sonet Hyundai Creta Tata Punch EV Mahindra XUV 3XO

ಈ ಪಂಚ್ ಇವಿಯಲ್ಲಿ 5 ಮಂದಿ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿಯನ್ನು ಏಪ್ರಿಲ್‌ನಲ್ಲಿ ಪರಿಚಯಿಸಲಾಗಿತ್ತು. ಈ ಕಾರು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top 4 Cars Launched In 2024 First Half Kia Sonet Hyundai Creta Tata Punch EV Mahindra XUV 3XO

ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರಿನಲ್ಲಿಯೂ 5 ಜನರು ಸಂಚರಿಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 17, 2024, 16:07 [IST]
English summary
Top 4 cars launched in 2024 first half kia sonet hyundai creta tata punch ev mahindra xuv 3xo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+