ಸಖತ್ ಮೈಲೇಜ್.. ಕೈಗೆಟುಕುವ ಬೆಲೆ.. ಮಹಿಳೆಯರು ಸುಲಭವಾಗಿ ಓಡಿಸಬಹುದಾದ ಕಾರುಗಳಿವು!
ಹೊಸ ಕಾರುಗಳನ್ನು ಮಹಿಳೆಯರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಅದರಲ್ಲೂ ಬಹುತೇಕ ಮಹಿಳೆಯರು ಆಟೋಮೆಟಿಕ್ ಗೇರ್‌ಬಾಕ್ಸ್ ಹೊಂದುರುವ ಕಾರುಗಳನ್ನು ಕೊಂಡುಕೊಳ್ಳಲು ಹೆಚ್ಚು ಆದ್ಯತೆ ನೀಡುತ್ತಾರೆ. ಆದರೆ, ಯಾವ ಕಾರನ್ನು ತೆಗೆದುಕೊಂಡರೆ ಒಳಿತು ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ನಾವಿಲ್ಲಿ ಆಟೋಮೆಟಿಕ್ ಹಾಗೂ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಸಿಗುವ ಮಾರುತಿ ಸುಜುಕಿ ಆಲ್ಟೊ ಕೆ10, ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ, ಸಿಟ್ರನ್ ಸಿ3 ಹಾಗೂ ಟೊಯೊಟಾ ಗ್ಲಾನ್ಜಾ ಕಾರುಗಳ ಬಗ್ಗೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (maruti suzuki alto k10) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಈ ಕಾರು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios) ಸಹ ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ಈ ಗ್ರಾಂಡ್ ಐ10 ನಿಯೋಸ್ ಕಾರು 16 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಇದು ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.01 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಸಿಟ್ರನ್ ಸಿ3 (Citroen C3) ಸಹ ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು, ರೂ.6.16 ಲಕ್ಷದಿಂದ ರೂ.10.15 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೋ ಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಕಡೆಯದಾಗಿ ಟೊಯೋಟಾ ಗ್ಲಾನ್ಜಾ (Toyota Glanza) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.6.86 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications