ದಿನನಿತ್ಯದ ಬಳಕೆಗೆ ಉತ್ತಮ ಕಾರುಗಳಿವು.. ಕೈಗೆಟುಕುವ ದರ, ಬೈಕ್‌ನ್ನು ಮೀರಿಸುವ ಮೈಲೇಜ್
ಬೇಸಿಗೆಯಲ್ಲಿ ಬಿಸಿಲಿನ ಝಳ ಹೆಚ್ಚಿದೆ. ತಂಪಾಗಿ ಕಚೇರಿಗೆ ಹೋಗಲು ಅಥವಾ ಮಕ್ಕಳನ್ನು ಶಾಲೆಗೆ ಬಿಟ್ಟುಬರಲು ನೀವು ಹೊಸ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ ಆಲ್ಟೊ, ಸೆಲರಿಯೊ, ಕ್ವಿಡ್, ಟಿಯಾಗೊ ಹಾಗೂ ಗ್ರ್ಯಾಂಡ್ ಐ10 ನಿಯೋಸ್ ಉತ್ತಮ ಆಯ್ಕೆಯಾಗಬಲ್ಲವು. ಇವು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರೊಂದಿಗೆ ಗರಿಷ್ಠ ಮೈಲೇಜ್ ಸಹ ನೀಡಲಿವೆ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಬಗ್ಗೆ ಮಾತನಾಡೋಣ. ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನೂ ಹೊಂದಿದ್ದು, ರೂಪಾಂತರಗಳಿಗೆ ತಕ್ಕಂತೆ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ.

ಆಲ್ಟೊ ಕೆ10 ಕಾರಿನ ಪೆಟ್ರೋಲ್ ರೂಪಾಂತರಗಳು 24.39 ರಿಂದ 24.90 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 33.40 ರಿಂದ 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್ ಬ್ಯಾಗ್ ಅನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಕಾರು ರೂ.5.37 ಲಕ್ಷದಿಂದ ರೂ.7.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದು ಕೂಡ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 24.97 ರಿಂದ 26 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರ 34.43 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಸೆಲರಿಯೊ ಕಾರು 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, ಡುಯಲ್ ಫ್ರಂಟ್ ಏರ್ ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಒಳಗೊಂಡಿದೆ.
ರೆನಾಲ್ಟ್ ಕ್ವಿಡ್ (Renault KWID) ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುವ ಈ ಕಾರು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು91 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಮತ್ತು 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೂ ಲಭ್ಯವಿದೆ.

ಈ ರೆನಾಲ್ಟ್ ಕ್ವಿಡ್ ಕಾರು 21.46 ರಿಂದ 22.3 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.
ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಗ್ರಾಹಕರಿಗೆ ದೊರೆಯುತ್ತದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೊಂದಿದೆ. ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 19.43 - 20.01 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಹ್ಯಾಚ್‌ಬ್ಯಾಕ್, ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಷ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ. ಈ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಮಾದರಿಗಳು 16 ರಿಂದ 18 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 27 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








