ಮಳೆಗಾಲದಲ್ಲಿ ಓಡಾಡಲು ಈ ಕಾರುಗಳು ಉತ್ತಮ.. ಬಜೆಟ್ ದರ.. ಭರ್ಜರಿ ಮೈಲೇಜ್!
ಮಳೆಗಾಲದಲ್ಲಿ ಓಡಾಟ ನಡೆಸಲು ದ್ವಿಚಕ್ರ ವಾಹನಗಳಿಗೆ ಹೋಲಿಸಿದರೆ ಕಾರುಗಳು ಉತ್ತಮ ಆಯ್ಕೆಯಾಗಬಲ್ಲವು. ಇವು ಮಳೆಯಾಗುವಾಗ ಮಾತ್ರವಲ್ಲದೆ, ಚಳಿಗಾಲ ಹಾಗೂ ಬೇಸಿಗೆಗಾಲದಲ್ಲೂ ಸಹ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತವೆ. ನೀವು ಬಜೆಟ್ ಬೆಲೆಗೆ ಒಳ್ಳೆಯ ಮೈಲೇಜ್ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ಕಾರನ್ನು ಖರೀದಿಸಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ ಮಹೀಂದ್ರಾ ಥಾರ್, ಮಾರುತಿ ಸುಜುಕಿ ಜಿಮ್ನಿ, ಫೋರ್ಸ್ ಗೂರ್ಖಾ, ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್ ಎಸ್‌ಯುವಿಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಈ ನೂತನ ಕಾರುಗಳ ವಿಶೇಷತೆ ತಿಳಿಯೋಣ.
ಮಹೀಂದ್ರಾ ಥಾರ್ (Mahindra Thar): ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದ್ದು, 3-ಡೋರ್ ಆಯ್ಕೆಯಲ್ಲಿ ದೊರೆಯುತ್ತದೆ. ರೂ.11.35 ಲಕ್ಷದಿಂದ ರೂ.17.60 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 2-ಲೀಟರ್ ಟರ್ಬೊ ಪೆಟ್ರೋಲ್, 2.2-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 13 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ 3-ಡೋರ್ ಥಾರ್‌ನಲ್ಲಿ 4 ಜನರು ಆರಾಮದಾಯಕವಾಗಿ ದೂರದ ಊರುಗಳಿಗೆ ಸಂಚರಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ. ಆಗಸ್ಟ್ 15ರಂದು ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಬಿಡುಗಡೆಯಾಗಲಿದೆ.
ಮಾರುತಿ ಸುಜುಕಿ ಜಿಮ್ನಿ (Maruti Suzuki Jimny): ಈ ಆಫ್-ರೋಡ್ ಎಸ್‌ಯುವಿ 5-ಡೋರ್‌ನ್ನು ಹೊಂದಿದ್ದು, ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 16.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇನಂತಹ ವಿವಿಧ ವೈಶಿಷ್ಟ್ಯಗಳಿದ್ದು, 4 ಮಂದಿ ಪ್ರಯಾಣಿಯಬಹುದು.

ಫೋರ್ಸ್ ಗೂರ್ಖಾ (Force Gurkha): ಇದು ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದೆ. 3-ಡೋರ್ ಮತ್ತು 5-ಡೋರ್ ವಿಧದಲ್ಲಿ ದೊರೆಯುತ್ತದೆ. ರೂ.16.75 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. 2.6-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 15 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಎಂಜಿ ಹೆಕ್ಟರ್ (MG Hector): ಈ ಕಾರು ರೂ.13.99 ಲಕ್ಷದಿಂದ ರೂ.22.24 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 15.58 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 14-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕಿಯಾ ಸೆಲ್ಟೋಸ್ (Kia Seltos): ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಪ್ರಮುಖ ಎಸ್‌ಯುವಿಗಳಲ್ಲಿ 'ಸೆಲ್ಟೋಸ್' ಕೂಡ ಒಂದಾಗಿದೆ. ರೂ.10.90 ಲಕ್ಷದಿಂದ ರೂ.20.37 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications