ಪೆಟ್ರೋಲ್‌ಗೆ ಮಾಡಿ ಟಾಟಾ: ಪ್ರಖ್ಯಾತ ಎಲೆಕ್ಟ್ರಿಕ್ ಕಾರುಗಳಿವು.. ಆಕರ್ಷಕ ಬೆಲೆ, 500 ಕಿ.ಮೀವರೆಗೆ ಓಡಬಲ್ಲವು!

ಭಾರತದ ಕಾರು ಮಾರುಕಟ್ಟೆಯಲ್ಲಿ ಕಳೆದ ಮೂರು ವರ್ಷಗಳಿಂದ ಎಲೆಕ್ಟ್ರಿಕ್ ಕಾರುಗಳಿಗೆ ಶುಕ್ರದೆಸೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಪ್ರಮುಖ ವಾಹನ ತಯಾರಕ ಕಂಪನಿಗಳು ಸಹ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹಲವು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಕ್ಕೆ ತರುತ್ತವೆ. ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಟಾಟಾ ಮೋಟಾರ್ಸ್ (Tata Motors) ಮುಂಚೂಣಿಯಲ್ಲಿದ್ದು, ಪ್ರತಿವರ್ಷ ಒಂದೆರಡು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಬಿಡುಗಡೆಗೊಳಿಸುತ್ತಿದೆ. ಇಲ್ಲಿ ರೂ.20 ಲಕ್ಷದೊಳಗೆ ಖರೀದಿಗೆ ಲಭ್ಯವಿರುವ ಜನಪ್ರಿಯ ಟಾಟಾ ಕರ್ವ್ ಇವಿ, ಪಂಚ್ ಇವಿ, ನೆಕ್ಸಾನ್ ಇವಿ, ಎಂಜಿ ಝಡ್ ಇವಿ ಮತ್ತು ಮಹೀಂದ್ರಾ ಎಕ್ಸ್‌ಯುವಿ400 ಇವಿ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಟಾಟಾ ಕರ್ವ್ ಇವಿ (Tata Curvv EV): ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಾಗಿದ್ದ ಈ ಎಲೆಕ್ಟ್ರಿಕ್ ಕಾರು, ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 45 ಕೆಡಬ್ಲ್ಯೂಹೆಚ್ ಮತ್ತು 55 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 502 ಕಿಲೋಮೀಟರ್ ರಿಂದ 585 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

Top 5 Electric Cars Under Rs 20 Lakhs Highest Range Tata Curvv Ev Punch Ev Nexon Ev Mg Zs Ev Mahindra Xuv400 Ev

ಈ ಕರ್ವ್ ಇವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಕರ್ವ್ ಇವಿ (Tata Nexon EV): ಈ ಎಲೆಕ್ಟ್ರಿಕ್ ಕಾರು ರೂ.14.49 ಲಕ್ಷದಿಂದ ರೂ.19.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 30 ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 325 ಕಿಲೋಮೀಟರ್ ರಿಂದ 465 ಕಿಲೋಮೀಟರ್ ಓಡುತ್ತದೆ. 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Top 5 Electric Cars Under Rs 20 Lakhs Highest Range Tata Curvv Ev Punch Ev Nexon Ev Mg Zs Ev Mahindra Xuv400 Ev

ಟಾಟಾ ಪಂಚ್ ಇವಿ (Tata Punch EV): ಇದು ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. 25 ಹಾಗೂ 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ಕ್ರಮಿಸುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಎಂಜಿ ಝಡ್ ಇವಿ (MG ZS EV): ಈ ಎಲೆಕ್ಟ್ರಿಕ್ ಕಾರು ರೂ.18.98 ಲಕ್ಷದಿಂದ ರೂ.25.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 50.3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 461 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Top 5 Electric Cars Under Rs 20 Lakhs Highest Range Tata Curvv Ev Punch Ev Nexon Ev Mg Zs Ev Mahindra Xuv400 Ev

ಮಹೀಂದ್ರಾ ಎಕ್ಸ್‌ಯುವಿ400 ಇವಿ (Mahindra XUV400 EV): ಇದು ಕೂಡ ಜನಪ್ರಿಯ ಎಲೆಕ್ಟ್ರಿಕ್ ಕಾರಾಗಿ ಗುರುತಿಸಿಕೊಂಡಿದೆ. ರೂ.15.49 ಲಕ್ಷದಿಂದ ರೂ.19.39 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 34.5 ಮತ್ತು 39.4 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, 375 ರಿಂದ 456 ಕಿಲೋಮೀಟರ್‌ವರೆಗೆ ಓಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, August 20, 2024, 17:20 [IST]
English summary
Top 5 electric cars under rs 20 lakhs highest range tata curvv ev to mahindra xuv400 ev
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+