ಎಸ್‌ಯುವಿಗಳಿಗೆ ಸವಾಲ್.. ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಮಾರುತಿ ಸ್ವಿಫ್ಟ್ ನಂಬರ್ 1, ರೂ.6.49 ಲಕ್ಷ ಬೆಲೆ
ಕಳೆದ ಕೆಲವು ವರ್ಷಗಳಿಂದ ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಎಸ್‌ಯುವಿಗಳು ಅಧಿಕ ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿವೆ. ಇವುಗಳಿಗೆ ಗ್ರಾಹಕರು ಕೂಡ ಮನಸೋತಿದ್ದಾರೆ. ಇದರಿಂದ ಹ್ಯಾಚ್‌ಬ್ಯಾಕ್ (ಸಣ್ಣ ಕಾರು) ಮಾರಾಟವು ಕ್ಷೀಣಿಸಿದ್ದು, ಕಡಿಮೆ ಸಂಖ್ಯೆಯಲ್ಲಿ ಖರೀದಿಗೆ ಲಭ್ಯವಿವೆ. ಆದಾಗ್ಯೂ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಹೆಚಾಗುತ್ತಲೇ ಇದ್ದು, ಎಸ್‌ಯುವಿಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ನಿಂತಿದೆ. ಇಲ್ಲಿ ಮೇ ತಿಂಗಳಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ 5 ಪ್ರಮುಖ ಹ್ಯಾಚ್‌ಬ್ಯಾಕ್‌ಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ನಂಬರ್ 1 ಸ್ಥಾನದಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಮಾರಾಟದ ಅಂಕಿಅಂಶಗಳ ಕುರಿತಂತೆ ಮಾತನಾಡೋಣ. ಹೋದ ತಿಂಗಳು 19,393 ಯುನಿಟ್ ಕಾರುಗಳನ್ನು ಮಾರಲಾಗಿದೆ. ಅದೇ 2023ರ ಮೇ ತಿಂಗಳಿಗೆ ಹೋಲಿಸಿದರೆ (17,346 ಯುನಿಟ್) ಶೇಕಡ 12% ಪ್ರಗತಿಯಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ನಾಲ್ಕನೇ ತಲೆಮಾರಿನ 'ಸ್ವಿಫ್ಟ್' ಮಾದರಿ(ಮಾಡೆಲ್)ಯಿಂದ ಮಾರಾಟ ಪ್ರಮಾಣವು ಈ ಮಟ್ಟಿಗೆ ಹೆಚ್ಚಳವಾಗಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ರೂ.6.49 ಲಕ್ಷದಿಂದ ರೂ.9.64 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಇದ್ದು, ಆದರೂ ಈ ಹ್ಯಾಚ್‌ಬ್ಯಾಕ್ ಮಾರಾಟ ಪ್ರಮಾಣವು ಕುಸಿತ ಕಂಡಿದೆ. 2024ರ ಮೇನಲ್ಲಿ 14,492 ಯುನಿಟ್ ಮಾರಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ (16,258 ಯುನಿಟ್) ಶೇಕಡ -11% ಇಳಿಕೆಯಾಗಿದೆ. ಹೊಸ ವ್ಯಾಗನ್ಆರ್ ಕಾರು ರೂ.5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ.

ಮೂರನೇ ಸ್ಯಾನವನ್ನು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಬಲೆನೊ (Maruti Suzuki Baleno) ತನ್ನದಾಗಿಸಿಕೊಂಡಿದೆ. ಎಸ್‌ಯುವಿಗಳ ಪ್ರಭಾವದಿಂದ ಈ ಕಾರಿನ ಮಾರಾಟವು ಇಳಿಕೆಯಾಗಿದೆ. ಹೋದ ತಿಂಗಳು 12,842 ಯುನಿಟ್ ಮಾರಲಾಗಿದ್ದು, 2023ರ ಮೇಗೆ ಹೋಲಿಸಿದರೆ (18,733 ಯುನಿಟ್) ಶೇಕಡ -31% ಕುಸಿತವಾಗಿದೆ. ನೂತನ ಬಲೆನೊ ಹ್ಯಾಚ್‌ಬ್ಯಾಕ್ ರೂ.6.66 ಲಕ್ಷದಿಂದ ರೂ.9.83 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ.
ಅತ್ಯಂತ ಕಡಿಮೆ ಬೆಲೆಗೆ ಸಿಗುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ನಾಲ್ಕನೇ ಸ್ಥಾನದಲ್ಲಿದ್ದು, ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. 2024ರ ಮೇನಲ್ಲಿ 7,675 ಯುನಿಟ್ ಹ್ಯಾಚ್‌ಬ್ಯಾಕ್‌ಗಳನ್ನು ಮಾರಲಾಗಿದೆ. ಹೋದ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ (9,368 ಯುನಿಟ್) ಶೇಕಡ -13% ಕುಸಿತವಾಗಿದೆ. ಈ ಆಲ್ಟೊ ಕೆ10 ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ.

ಐದನೇ ಸ್ಥಾನದಲ್ಲಿ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಇದ್ದು, ಕಳೆದ ತಿಂಗಳು 5,927 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಮೇನಲ್ಲಿ ಮಾರಲಾಗಿದ್ದ 8,133 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡ -27% ಹಿನ್ನಡೆಯಾಗಿದೆ. ಸದ್ಯ ದೇಶೀಯ ಖರೀದಿಗೆ ಲಭ್ಯವಿರುವ ಟಿಯಾಗೊ ಹ್ಯಾಚ್‌ಬ್ಯಾಕ್ ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications