Automatic Cars: ಟ್ರಾಫಿಕ್‌ನಲ್ಲಿ ಕಾರು ಓಡಿಸಲು ಆಗುತ್ತಿಲ್ಲವೇ.. ಈ ಹ್ಯಾಚ್‌ಬ್ಯಾಕ್‌ಗಳನ್ನು ಖರೀದಿಸಿ, ಜಸ್ಟ್ 3.99 ಲಕ್ಷ..!
ಬೆಂಗಳೂರು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತಾದಂತಹ ಮಹಾನಗರಗಳಲ್ಲಿ ಸಂಚಾರ ದಟ್ಟಣೆಯು ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ಹೊಸ ಕಾರು ಖರೀದಿಸುವವರೂ ಆಟೊಮೆಟಿಕ್ ಗೇರ್‌ಬಾಕ್ಸ್ ಹೊಂದಿರುವ ಹ್ಯಾಚ್‌ಬ್ಯಾಕ್ ಅಥವಾ ಎಸ್‌ಯುವಿಗಳ ಮೊರೆ ಹೋಗುತ್ತಾರೆ. ನೀವು ಬಜೆಟ್ ಬೆಲೆಯಲ್ಲಿ ಇಂತಹದ್ದೇ ನೂತನ ಕಾರನ್ನು ಕೊಂಡುಕೊಳ್ಳಲು ಯೋಚಿಸಿದ್ದರೆ, ಮಾರುತಿ ಸುಜುಕಿ ಆಲ್ಟೊ ಕೆ10, ಸೆಲೆರಿಯೊ, ಎಸ್-ಪ್ರೆಸ್ಸೊ, ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ಗಳು ಉತ್ತಮ ಆಯ್ಕೆಯಾಗಬಲ್ಲವು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.
ಮೊದಲಿಗೆ ಅತ್ಯಂತ ಕಡಿಮೆ ಬೆಲೆಗೆ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದಾಗ್ಯೂ ಪೆಟ್ರೋಲ್ ಮಾದರಿ (ಮಾಡೆಲ್)ಗಳು ಮಾತ್ರ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 24.90 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತವೆ.

ಈ ಆಲ್ಟೊ ಕೆ10 ಕಾರಿನಲ್ಲಿ 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಸೆಮಿ-ಡಿಜಿಟಲ್ ಇಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ.
ರೆನಾಲ್ಟ್ ಕ್ವಿಡ್ (Renault KWID) ಸಹ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಸಿಗಲಿದ್ದು, ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1.0-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 91 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಇದು ರೂ.4.26 ಲಕ್ಷದಿಂದ ರೂ.6.12 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. ಈ ಕಾರು ಸಹ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 25.30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಕೂಡ ಗ್ರಾಹಕರಿಗೆ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.4.99 ಲಕ್ಷದಿಂದ ರೂ.7.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 26 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ.

ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡುವುದಾದರೆ, ಇದು ರೂ.5.65 ಲಕ್ಷದಿಂದ ರೂ.8.90 ಲಕ್ಷ ದರವನ್ನು (ಎಕ್ಸ್ ಶೋರೂಂ) ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, ಇವೆರೆಡು ಪವರ್‌ಟ್ರೇನ್‌ನಲ್ಲಿಯೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಇದೆ. ಪೆಟ್ರೋಲ್ ಆಟೋಮೆಟಿಕ್ ಮಾದರಿಯು 19.43 ಕೆಎಂಪಿಎಲ್, ಸಿಎನ್‌ಜಿ ಆಟೋಮೆಟಿಕ್ ರೂಪಾಂತರವು 28.06 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications