ರೂ.10 ಲಕ್ಷದೊಳಗೆ ಎಸ್‌ಯುವಿ ತೆಗೆದುಕೊಳ್ಳಬೇಕೇ.. ಇವೇ ಟಾಪ್-5 ಪವರ್ ಫುಲ್ ಮಾಡೆಲ್‌ಗಳು!
ಇವತ್ತಿನ ದಿನಮಾನದಲ್ಲಿ ಅನೇಕರು ಎಸ್‌ಯುವಿಗಳನ್ನು ಖರೀದಿಸಲು ಬಯಸುತ್ತಾರೆ. ಹಾಗಾಗಿ, ಅವುಗಳಿಗೆ ಭಾರೀ ಬೇಡಿಕೆಯಿದೆ. 2023ರ ಏಪ್ರಿಲ್‍ಗೆ ಹೋಲಿಸಿದರೆ 2024ರ ಏಪ್ರಿಲ್ ತಿಂಗಳಲ್ಲಿ ಈ ಎಸ್‌ಯುವಿಗಳ ಮಾರಾಟವು ಶೇಕಡ 63% ಹೆಚ್ಚಳವಾಗಿದೆ. ನೀವು ಸಹ ಉತ್ತಮ ಎಸ್‌ಯುವಿಯನ್ನು ಖರೀದಿಸಲು ಬಯಸುವಿರಾ?.. ಇಲ್ಲಿ ರೂ.10 ಲಕ್ಷದೊಳಗೆ ಸಿಗುವ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಬ್ರೆಝಾ, ನಿಸ್ಸಾನ್ ಮ್ಯಾಗ್ನೈಟ್ ಹಾಗೂ ರೆನಾಲ್ಟ್ ಕಿಗರ್ ಎಸ್‌ಯುವಿಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಬಗ್ಗೆ ಮಾತನಾಡೋಣ. ಈ ಕಾರು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಎಕ್ಸ್‌ಯುವಿ 3ಎಕ್ಸ್ಒ ಕಾರು 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ವ್ಯೂ ಕ್ಯಾಮೆರಾ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿ ಕುರಿತು ಹೇಳುವುದಾದರೆ, ಇದು ರೂ.8 ಲಕ್ಷದಿಂದ ರೂ.15.80 ಲಕ್ಷ ಬೆಲೆಯಲ್ಲಿ (ಎಕ್ಸ್ ಶೋರೂಂ) ಖರೀದಿಗೆ ಲಭ್ಯವಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5 ಆಸನದೊಂದಿಗೆ ಸಿಗುವ ಈ ಕಾರು, 17ರಿಂದ 24 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ನೂತನ ನೆಕ್ಸಾನ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯು ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತದೆ. ಈ ಕಾರು ರೂ.8.34 ಲಕ್ಷದಿಂದ ರೂ.14.14 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಕೂಡ ಎಸ್‌ಯುವಿಯಾಗಿದ್ದು, ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 17.40 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ರೆನಾಲ್ಟ್ ಕಿಗರ್ (Renault Kiger) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.6 ಲಕ್ಷದಿಂದ ರೂ.11.23 ಲಕ್ಷ ಬೆಲೆಯಲ್ಲಿ (ಎಕ್ಸ್ ಶೋರೂಂ) ದೊರೆಯುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications