ಆಕರ್ಷಕ ಬೆಲೆಗೆ ಈ ಬೊಂಬಾಟ್ ಕಾರುಗಳು.. ಕಣ್ಣು ಕುಕ್ಕುವ ವೈಶಿಷ್ಟ್ಯ, ಸುರಕ್ಷತೆಯಲ್ಲಿಯೂ ಉತ್ತಮ!
ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ ಯಾವ ಹ್ಯಾಚ್‌ಬ್ಯಾಕ್ ಅಥವಾ ಎಸ್‌ಯುವಿಗಳು ಕೈಗೆಟುಕುವ ಬೆಲೆಗೆ ಸಿಗುತ್ತವೆ.. ಮೈಲೇಜ್ ಎಷ್ಟು.. ವೈಶಿಷ್ಟ್ಯಗಳೇನು ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ನೀವು ಕೂಡ ಹೊಸ ಕಾರನ್ನು ಮನೆ ತರಲು ಯೋಚಿಸುತ್ತಿದ್ದೀರಾ.. ಇಲ್ಲಿ ರೂ.15 ಲಕ್ಷದೊಳಗೆ ದೊರೆಯುವ ಜನಪ್ರಿಯ ಹೋಂಡಾ ಎಲಿವೇಟ್, ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಹೋಂಡಾ ಎಲಿವೇಟ್ (Honda Elevate) ಕಾರಿನ ಕುರಿತಂತೆ ತಿಳಿಯೋಣ. ಇದು ರೂ.11.69 ಲಕ್ಷದಿಂದ ರೂ.16.51 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 121 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 145 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಹೋಂಡಾ ಎಲಿವೇಟ್ ಎಸ್‌ಯುವಿಯು 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ
ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಈ ಕಾರು ರೂ.11.00 ಲಕ್ಷದಿಂದ ರೂ.20.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹ್ಯುಂಡೈ ಕ್ರೆಟಾದಲ್ಲಿಯೂ 5 ಜನರು ಸುಲಭವಾಗಿ ಓಡಾಟವನ್ನು ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್ ಝೋನ್ ಎಸಿ, ಸನ್‌ರೂಫ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಎಸ್‌ಯುವಿಯು ಗ್ರಾಹಕರಿಗೆ ರೂ.13.62 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 7 ಅಥವಾ 9 ಆಸನ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಎಸ್‌ಯುವಿಯು ರೂ.11.14 ಲಕ್ಷದಿಂದ ರೂ.20.19 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. 1.5-ಲೀಟರ್ ಪೆಟ್ರೋಲ್, ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications