ಟಾಟಾ, ಮಹೀಂದ್ರಾಗೆ ಟಕ್ಕರ್: ಬೆಂಗಳೂರಿಗರ ಮೆಚ್ಚಿನ ಹ್ಯುಂಡೈ ಕಾರು ನಂಬರ್ 1.. ಶೋರೂಂ ಮುಂದೆ ಜನವೋ ಜನ!

ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಹತ್ತಾರು ಕಾರುಗಳು ಮಾರಾಟಕ್ಕೆ ಬರುತ್ತಿರುತ್ತವೆ. ಅದರಲ್ಲೂ ಹ್ಯಾಚ್‌ಬ್ಯಾಕ್ ಮತ್ತು ಸೆಡಾನ್‌ಗಳಿಗೆ ಹೋಲಿಕೆ ಮಾಡಿದರೆ, ಎಸ್‌ಯುವಿಗಳು ದೊಡ್ಡಮಟ್ಟದಲ್ಲಿ ಜನಪ್ರಿಯವಾಗಿವೆ. ಇತ್ತೀಚೆಗೆ ಪ್ರಮುಖ ಕಾರು ತಯಾರಕ ಕಂಪನಿಗಳು ಸೆಪ್ಟೆಂಬರ್ (2024) ತಿಂಗಳ ಎಸ್‌ಯುವಿ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಟಾಪ್ 5 ಎಸ್‌ಯುವಿ ಪಟ್ಟಿಯಲ್ಲಿ ಮಾರುತಿ ಸುಜುಕಿ, ಹ್ಯುಂಡೈ, ಟಾಟಾ ಹಾಗೂ ಮಹೀಂದ್ರಾ ಕಂಪನಿಯ ಕಾರುಗಳು ಕೂಡ ಸ್ಥಾನ ಪಡೆದಿವೆ.

ಹ್ಯುಂಡೈ ಕ್ರೆಟಾ (Hyundai Creta) ಪ್ರಖ್ಯಾತ ಮಿಡ್-ಸೈಜ್ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಮೊದಲ ಸ್ಥಾನದಲ್ಲಿದೆ. ಕಳೆದ ತಿಂಗಳು (ಸೆಪ್ಟೆಂಬರ್ - 2024), ಬರೋಬ್ಬರಿ 15,902 ಯುನಿಟ್‌ ಕ್ರೆಟಾ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 12,717ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 21% ಬೆಳವಣಿಗೆಯಾಗಿದೆ.

Top 5 SUV Sales in September 2024 Creta Brezza Scorpio Fronx Punch

ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿ ರೂ.11 ರಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ಈ ಕಾರು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡುಯಲ್ ಡಿಸ್ಪ್ಲೇಗಳು (10.25-ಇಂಚು), ಮತ್ತು ಡುಯಲ್ ಝೋನ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಎಸ್‌ಯುವಿಯಿದೆ. ಈ ಸೆಪ್ಟೆಂಬರ್‌ನಲ್ಲಿ 15,322 ಯುನಿಟ್ ಬ್ರೆಝಾ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಸೆಪ್ಟೆಂಬರ್‌ ತಿಂಗಳಲ್ಲಿ ಮಾರಾಟಗೊಳಿಸಿದ 15,001 ಯುನಿಟ್‌ಗೆ ಹೋಲಿಕೆ ಮಾಡಿದರೆ, ಶೇಕಡ 2% ಪ್ರಗತಿ ಸಾಧಿಸಲಾಗಿದೆ. ನೂತನ ಬ್ರೆಝಾ ಎಸ್‌ಯುವಿ, ರೂ.8.34 ಲಕ್ಷದಿಂದ ರೂ.13.98 ಲಕ್ಷ ಬೆಲೆಯನ್ನು ಹೊಂದಿದೆ.

Top 5 SUV Sales in September 2024 Creta Brezza Scorpio Fronx Punch

ಜನಪ್ರಿಯ ಎಸ್‌ಯುವಿ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಮೂರನೇ ಸ್ಥಾನದಲ್ಲಿದೆ. ಹೋದ ತಿಂಗಳು (ಸೆಪ್ಟೆಂಬರ್) 14,438 ಯುನಿಟ್‌ ಸ್ಕಾರ್ಪಿಯೋ ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 11,846 ಯುನಿಟ್‌ಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 22% ಬೆಳವಣಿಗೆಯಾಗಿದೆ. ಇದು ಸ್ಕಾರ್ಪಿಯೋ ಎನ್ ಹಾಗೂ ಕ್ಲಾಸಿಕ್ ಎಂಬ 2 ವಿಧದಲ್ಲಿ ಖರೀದಿಗೆ ಸಿಗುತ್ತದೆ.

ನಾಲ್ಕನೇ ಸ್ಥಾನದಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಇದ್ದು, ಈ ಸೆಪ್ಟೆಂಬರ್‌ನಲ್ಲಿ ಸರಿ ಸುಮಾರು 13,874 ಯುನಿಟ್ ಫ್ರಾಂಕ್ಸ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಸೆಪ್ಟೆಂಬರ್‌ ತಿಂಗಳಲ್ಲಿ 11,455 ಯುನಿಟ್‌ನ್ನು ಮಾರಾಟಗೊಳಿಸುವ ಮೂಲಕ ಶೇಕಡ 21% ಅಧಿವೃದ್ಧಿ ಸಾಧಿಸಲಾಗಿದೆ. ಈ ಕಾರು, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Top 5 SUV Sales in September 2024 Creta Brezza Scorpio Fronx Punch

ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿ ಐದನೇ ಸ್ಥಾನದಲ್ಲಿದೆ. ಕಳೆದ ತಿಂಗಳು 13,711 ಯುನಿಟ್‌ ಪಂಚ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 11,846 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 5% ಬೆಳವಣಿಗೆಯಾಗಿದೆ. ನೂತನ ಪಂಚ್ ರೂ.6.13 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 10, 2024, 8:30 [IST]
English summary
Top 5 suv sales in september 2024 creta brezza scorpio fronx punch
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+