ಪೆಟ್ರೋಲ್‌ ಹಾಕಿಸಿ ಜೇಬು ಖಾಲಿ ಮಾಡಬೇಡಿ: ಈ ಸಿಎನ್‌ಜಿ ಕಾರುಗಳನ್ನು ಖರೀದಿಸದಿದ್ದರೆ, ನಿಮಗೇ ನಷ್ಟ!

ಭಾರತೀಯರು ಒಂದು ಬೈಕ್‌ ಅಥವಾ ಕಾರು ಖರೀದಿ ಮಾಡುವಾಗ ಆ ಕಾರಿನ ಮೈಲೇಜ್‌ ಎಷ್ಟು ಎಂಬುದನ್ನು ಎಲ್ಲಕ್ಕಿಂತಲೂ ಮೊದಲೇ ಪರೀಕ್ಷಿಸುತ್ತಾರೆ. ಇವರಿಗೆ ಕಾರಿನ ಪರ್ಫಾಮೆನ್ಸ್‌, ಸೆಫ್ಟಿ, ಡಿಸೈನ್‌ ಹೀಗೆ ಇವೆಲ್ಲಕ್ಕಿಂತಲೂ ಹೆಚ್ಚಾಗಿ ಕಾರಿನ ಮೈಲೇಜ್‌ ಬಹಳ ಪ್ರಮುಖವಾಗಿರುತ್ತದೆ. ಇಂತಹವರಿಗಾಗಿಯೇ ಬಹುತೇಕ ಕಾರು ಕಂಪನಿಗಳು ತಮ್ಮ ಕಾರುಗಳಿಗೆ ಸಿಎನ್‌ಜಿ ಆಯ್ಕೆಯನ್ನು ನೀಡುತ್ತಾರೆ. ಅದರಲ್ಲಿ ಮಾರುತಿ, ಟಾಟಾ ಮತ್ತು ಹ್ಯುಂಡೈ ಕಂಪನಿಗಳು ಪ್ರಮುಖವಾದುದು. ಇಂದಿನ ಈ ಲೇಖನದಲ್ಲಿ ನಾವು ಹೆಚ್ಚು ಮೈಲೇಜ್‌ ಕೊಡುವ ಸಿಎನ್‌ಜಿ ಕಾರುಗಳ ಕುರಿತಾಗಿ ನೋಡೋಣ ಬನ್ನಿ.

ಮಾರುತಿ ಆಲ್ಟೋ ಕೆ10: ಇದು ಮಾರುತಿ ಸುಜುಕಿ ಭಾರತದಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡುವ ಕಾರುಗಳಲ್ಲಿ ಒಂದು. ಜನಪ್ರಿಯ ಮಾರುತಿ ಸುಜುಕಿ ಆಲ್ಟೋ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್‌ ಕುರಿತು ಮಾತನಾಡೋಣ. ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

Top 7 CNG cars which will help in your savings Maruti Brezza Exter Alto k10 And More

1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ (CNG cars) ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು 24.39 - 24.90 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 33.40 - 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಈ ಆಲ್ಟೋ ಪುಟ್ಟ ಕಾರಾಗಿರುವುದರಿಂದ 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ವಾಗನರ್‌: ಮಾರುತಿ ಕಂಪನಿಯ ಪ್ರಖ್ಯಾತ ಕಾರು ಮಾದರಿಗಳಲ್ಲಿ ಇದು ಸಹ ಒಂದು. ಈ ಮಾರುತಿ ಸುಜುಕಿ ವ್ಯಾಗನ್ಆರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಪವರ್ (ಶಕ್ತಿ), 89 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Top 7 CNG cars which will help in your savings Maruti Brezza Exter Alto k10 And More

ಮತ್ತೊಂದು, 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಹಾಗೂ 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲು ಶಕ್ತವಾಗಿದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 23.56 ಕೆಎಂಪಿಎಲ್ ನಿಂದ 25.19 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು ಪ್ರತಿ ಕೆಜಿಗೆ 34.05 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿವೆ.

ಮಾರುತಿ ಸುಜುಕಿ ಬಲೇನೋ: ಮಾರುತಿ ಬಲೇನೋ 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಇಂಧನ ದಕ್ಷತೆ ಕುರಿತು ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 22.35 ಕೆಎಂಪಿಎಲ್ - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

Top 7 CNG cars which will help in your savings Maruti Brezza Exter Alto k10 And More

ಮಾರುತಿ ಸುಜುಕಿ ಬ್ರೇಝಾ: ಇನ್ನು ಮಾರುತಿ ಸುಜುಕಿಯ ಮತ್ತೊಂದು ಪ್ರಮುಖ ಕಾರು ಮಾದರಿಯಾದ ಬ್ರೇಝಾ ಕುರಿತಾಗಿ ನೊಡುವುದಾದರೆ, ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 103 PS ಗರಿಷ್ಠ ಪವರ್, 137 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಆದರೆ, 88 PS ಪವರ್, 121.5 Nm ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಜೊತೆಯಲ್ಲಿ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17.38 kmpl - 19.8 kmpl, ಸಿಎನ್‌ಜಿ ರೂಪಾಂತರಗಳು 25.51 km/kg ಮೈಲೇಜ್ ನೀಡುತ್ತವೆ.

ಮಾರುತಿ ಸುಜುಕಿ ಎರ್ಟಿಗಾ: ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga), ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಮತ್ತು 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 kmpl ಹಾಗೂ ಸಿಎನ್‌ಜಿ ಮಾದರಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಹ್ಯುಂಡೈ ಎಕ್ಸ್‌ಟರ್‌: ಈ ಎಸ್‌ಯುವಿ, 1.2-ಲೀಟರ್, 4 ಸಿಲಿಂಡರ್ (ಪೆಟ್ರೋಲ್) ಎಂಜಿನ್ ಹೊಂದಿದ್ದು, 81.8 bhp ಗರಿಷ್ಠ ಪವರ್ ಹಾಗೂ 113.8 Nm ಪಿಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮೋಡ್ ನಲ್ಲಿ 67.7 bhp ಪವರ್ ಮತ್ತು 95.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಪೆಟ್ರೋಲ್ ಆವೃತ್ತಿಯು ಮ್ಯಾನ್ಯುವಲ್ ಮತ್ತು AMT ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಸಿಎನ್‌ಜಿ ಆವೃತ್ತಿಯು ಮ್ಯಾನ್ಯುವಲ್‌ (5 ಸ್ಪೀಡ್) ಗೇರ್‌ಬಾಕ್ಸ್ ಅನ್ನು ಪಡೆದಿದೆ. ಹ್ಯುಂಡೈ ಎಕ್ಸ್‌ಟರ್‌ (Hyundai Exter) ಕಾರಿನ ಮೈಲೇಜ್ ವಿಚಾರವಾಗಿ ಮಾತನಾಡುವದಾದರೆ, ಪೆಟ್ರೋಲ್ ಚಾಲಿತ ಕಾರು, 19.2km/l - 19.4km/l ಇಂಧನ ದಕ್ಷತೆಯನ್ನು ಹೊಂದಿದೆ. ಸಿಎನ್‌ಜಿ ಚಾಲಿತ ಕಾರು ಗರಿಷ್ಠ 27.1km/kg ಮೈಲೇಜ್ ನೀಡುತ್ತದೆ.

ಟಾಟಾ ಪಂಚ್‌: ಈ ಟಾಟಾ ಪಂಚ್ ಕಾರು ಸಿಎನ್‌ಜಿ ಆಯ್ಕೆಯಲ್ಲೂ ಲಭ್ಯವಿದ್ದು, 18.8 ರಿಂದ 26 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7-ಇಂಚಿನ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಎಸಿ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 18, 2024, 17:30 [IST]
English summary
Top 7 cng cars that will help in your savings maruti brezza exter alto k10 and more
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+