ಮಾರುತಿ ಸ್ವಿಫ್ಟ್‌ ಖರೀದಿಸಲು ಮನಸಿಲ್ಲವೇ: ಅದರಷ್ಟೇ ಚೆನ್ನಾಗಿರುವ ಇತರ ಕಾರುಗಳು ಯಾವುದು ಗೊತ್ತಾ!

ಭಾರತದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್‌ ಕಾರಿಗೆ ಇರುವಷ್ಟು ಅಭಿಮಾನಿ ಬಳಗ ಬೇರೆ ಕಾರಿಗೆ ಕಾಣಲು ಸಾಧ್ಯವಿಲ್ಲ ಎಂದರೆ ಅದು ಅತಿಶಯೋಕ್ತಿ ಆಗಲಾರದು. ಅದರಲ್ಲೂ ಇತ್ತೀಚೆಗೆ ಸ್ವಿಫ್ಬಟ್‌ನ ನಾಲ್ಕನೇ ತಲೆಮಾರು ಮಾರುಕಟ್ಟೆಗೆ ಬಂದಿದ್ದು, ಕಳೆದ ಬಾರಿಯ ಸ್ವಿಫ್ಟ್‌ಗಿಂತ ಹೆಚ್ಚಿನ ಬದಲಾವಣೆಗಳೊಂದಿಗೆ ಬಂದಿದೆ. ಇಂದು ನಾವು ಮಾರುತಿ ಸ್ವಿಫ್ಟ್‌ ಕಾರಿನ ಬೆಲೆಯಲ್ಲಿ, ಸ್ವಿಫ್ಟ್‌ನಷ್ಟೇ ಉತ್ತಮವಾದ ಇತರ ಯಾವ ಕಾರುಗಳನ್ನು ಖರೀದಿಸಬಹುದು ಎಂದು ನೋಡಲಿದ್ದೇವೆ. ನಮ್ಮ ಪ್ರಕಾರ ಈ ಲೇಖನ ನಿಮಗೆಲ್ಲರಿಗೂ ಸಾಕಷ್ಟು ಉಪಯೋಗವಾಗುವುದಂತೂ ಖಂಡಿತ ಎಂದರೆ, ಅದು ನಿಜಕ್ಕೂ ತಪ್ಪಾಗಲಾರದು.

ಹ್ಯುಂಡೈ ಎಕ್ಸ್‌ಟರ್‌: ಹ್ಯುಂಡೈ ಎಕ್ಸ್‌ಟರ್‌ ಕಾರಿನ ಬಗ್ಗೆ ನೋಡುವುದಾದರೆ, ಈ ಎಸ್‌ಯುವಿ, 1.2-ಲೀಟರ್, 4 ಸಿಲಿಂಡರ್ (ಪೆಟ್ರೋಲ್) ಎಂಜಿನ್ ಹೊಂದಿದ್ದು, 81.8 bhp ಗರಿಷ್ಠ ಪವರ್ ಹಾಗೂ 113.8 Nm ಪಿಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮೋಡ್ ನಲ್ಲಿ 67.7 bhp ಪವರ್ ಮತ್ತು 95.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಪೆಟ್ರೋಲ್ ಆವೃತ್ತಿಯು ಮ್ಯಾನ್ಯುವಲ್ ಮತ್ತು AMT ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ.

Top Cars To Buy Instead Of Maruti Suzuki Swift

ಸಿಎನ್‌ಜಿ ಆವೃತ್ತಿಯು ಮ್ಯಾನ್ಯುವಲ್‌ (5 ಸ್ಪೀಡ್) ಗೇರ್‌ಬಾಕ್ಸ್ ಅನ್ನು ಪಡೆದಿದೆ. ಹ್ಯುಂಡೈ ಎಕ್ಸ್‌ಟರ್‌ ಕಾರಿನ ಮೈಲೇಜ್ ವಿಚಾರವಾಗಿ ಮಾತನಾಡುವದಾದರೆ, ಪೆಟ್ರೋಲ್ ಚಾಲಿತ ಕಾರು, 19.2km/l - 19.4km/l ಇಂಧನ ದಕ್ಷತೆಯನ್ನು ಹೊಂದಿದೆ. ಸಿಎನ್‌ಜಿ ಚಾಲಿತ ಕಾರು ಗರಿಷ್ಠ 27.1km/kg ಮೈಲೇಜ್ ನೀಡುತ್ತದೆ. ಈ ಕಾರು ೬.೨ ಲಕ್ಷದಿಂದ ಆರಂಭವಾಗುತ್ತದೆ.

ಹ್ಯುಂಡೈ ಗ್ರ್ಯಾಂಡ್‌ ಐ10 ನಿಯೋಸ್‌: ಈ ಕಾರಿನ ಮ್ಯಾನುವಲ್ ಗೇರ್‌ಬಾಕ್ಸ್‌ ಹೊಂದಿರುವ ಆವೃತ್ತಿಯು ರೂ.6.93 ಲಕ್ಷ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ ಮಾದರಿಯು ರೂ.7.58 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿನ್ಯಾಸದ ದೃಷ್ಟಿಯಿಂದಲೂ ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರ್ಪೊರೇಟ್ ಮಾದರಿಯು ಅತ್ಯುತ್ತಮವಾಗಿದೆ. ಮುಂಭಾಗ (ಫ್ರಂಟ್)ದಲ್ಲಿರುವ ಗ್ರಿಲ್ ಪಿಯಾನೋ ಬ್ಲ್ಯಾಕ್ ಬಣ್ಣದ ಆಯ್ಕೆಯನ್ನು ಹೊಂದಿದೆ.

Top Cars To Buy Instead Of Maruti Suzuki Swift

ಹೊಸ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಹೊಂದಿದ್ದು, 82 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್ ಮತ್ತು 4-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಇದು 16 ಕೆಎಂಪಿಎಲ್ ಗಿಂತ ಹೆಚ್ಚಿನ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್‌: ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ (Maruti Suzuki Swift) ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು.

ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12ಬಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮಾರುತಿ ಸುಜುಕಿ ಇಗ್ನಿಸ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ, ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ.

ಟಾಟಾ ಪಂಚ್‌: ಟಾಟಾ ಪಂಚ್ (Tata Punch) ಎಸ್‌ಯುವಿಯ ಬೇಸ್ ಮಾಡೆಲ್ ಪ್ಯೂರ್ (ಪೆಟ್ರೋಲ್) ರೂ.7.49 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಅಡ್ವೆಂಚರ್ (ಪೆಟ್ರೋಲ್) ಮಾಡೆಲ್ ರೂ.8.95 ಲಕ್ಷ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖರೀದಿಸುವ ಮತ್ತು ಬೇಸ್ ವೇರಿಯೆಂಟ್ ಪ್ಯೂರ್ (ಸಿಎನ್‌ಜಿ) ರೂ.8.82 ಲಕ್ಷ ಮತ್ತು ಟಾಪ್ ಎಂಡ್ ಮಾಡೆಲ್ ಅಕಾಂಪ್ಲೀಶೆಡ್ ರೂ.11.96 ಆನ್-ರೋಡ್ ಬೆಲೆಯನ್ನು ಹೊಂದಿದೆ.

1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 18.8 ರಿಂದ 20.09 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.99 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 28, 2024, 16:27 [IST]
English summary
Top cars to buy instead of maruti suzuki swift
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+