ಜೇಬಲ್ಲಿ ದುಡ್ಡಿಲ್ಲ ಎಂದು ಚಿಂತೆ ಮಾಡಬೇಡಿ: ಕಡಿಮೆ ಬೆಲೆಗೆ ಸಿಗುವ ಅದ್ಭುತ ಎಲೆಕ್ಟ್ರಿಕ್‌ ಕಾರುಗಳಿವು!

ಸದ್ಯಕ್ಕೆ ಭಾರತದಲ್ಲಿ ಎಲೆಕ್ಟ್ರಿಕ್‌ ಕಾರುಗಳ ಹವಾ ಸಿಕ್ಕಾಪಟ್ಟೆ ಜೋರಾಗಿದೆ. ಪ್ರತಿಯೊಂದು ಕಂಪನಿಗಳು ಸಹ ಪೈಪೋಟಿಗೆ ಬಿದ್ದಂತೆ ಸ್ಪರ್ಧಾತ್ಮ ಬೆಲೆಯಲ್ಲಿ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡುತ್ತಿದ್ದಾರೆ. ಕಾರು ನಿರ್ಮಾಣ ಕಂಪನಿಗಳು ಈ ಪಾಟಿ ಪೈಪೋಟಿಗೆ ಬಿದ್ದ ಪರಿಣಾಮವಾಗಿ ಲಾಭ ಪಡೆದುಕೊಳ್ಳುತ್ತಿರುವುದು ಮಾತ್ರ ಗ್ರಾಹಕ.

ಇಂದು ನಾವು ಈ ಲೇಖನದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಲಭ್ಯವಿರುವ ಕಡಿಮೆ ಬೆಲೆಯ ಎಲೆಕ್ಟ್ರಿಕ್‌ ಕಾರುಗಳು ( Electric Cars) ಯಾವುದೆಂದು ನೋಡಲಿದ್ದೇವೆ. ನಮ್ಮ ಪ್ರಕಾರ, ಸದ್ಯಕ್ಕೆ ಯಾವ ಎಲೆಕ್ಟ್ರಿಕ್‌ ಕಾರು ಖರೀದಿಸುವುದು ಎಂದು ತೋಚದೆ, ದಿಕ್ಕೆಟ್ಟು ಕುಳಿತವರಿಗೆ ಈ ಲೇಖನ ಖಂಡಿತಾ ಸಹಾಯ ಮಾಡಬಹುದು. ಇವುಗಳ ಕುರಿತಾದ ಸಂಪೂರ್ಣ ಮಾಹಿತಿಗೆ ಲೇಖನವನ್ನು ಕೊನೆಯವರೆಗೆ ಓದಿ.

Top Five Budget Electric Cars In India TATA Punch MG Comet And More

ಎಂಜಿ ಕಾಮೆಟ್ (Rs 6.99 ಲಕ್ಷ-9.14 ಲಕ್ಷ): ಈ ಕಾರು 17.3 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 42 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರುವ ಕಾಮೆಟ್ ಇವಿ, ಸಂಪೂರ್ಣ ಚಾರ್ಜ್ ನಲ್ಲಿ 230 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

ಎಂಜಿ ಕಾಮೆಟ್ ಇವಿ 3.3 ಕೆಡಬ್ಲ್ಯೂ (kW) ಚಾರ್ಜರ್ ಬಳಕೆಯಲ್ಲಿ 0 ಯಿಂದ 100% ಬ್ಯಾಟರಿ ಚಾರ್ಜ್ ಆಗಲು 7 ಗಂಟೆ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ 7.4 ಕೆಡಬ್ಲ್ಯೂ (kW) ಚಾರ್ಜರ್ ಉಪಯೋಗ ಮಾಡಿದಾಗ 0 ಯಿಂದ 100% ಬ್ಯಾಟರಿ ಚಾರ್ಜ್ ಆಗುವುದಕ್ಕೆ ಕೇವಲ 3.5 ಗಂಟೆ ಸಾಕಾಗುತ್ತದೆ.

Top Five Budget Electric Cars In India TATA Punch MG Comet And More

ಟಾಟಾ ಟಿಯಾಗೋ (Rs 7.99 ಲಕ್ಷ-11.89 ಲಕ್ಷ): ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಇವಿ (Tata Tiago EV) ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ವಿನ್ಯಾಸದ ವಿಚಾರದಲ್ಲೂ ಈ ಕಾರು ಅತ್ಯುತ್ತಮವಾಗಿದ್ದು, ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಪ್ರಿಸ್ಟಿನ್ ವೈಟ್ ಹಾಗೂ ಮಿಡ್‌ನೈಟ್ ಪ್ಲಮ್ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು.

ಈ ಕಾರಿನಲ್ಲಿ 19.2 ಕೆಡಬ್ಲ್ಯೂಹೆಚ್ (kWh) ಮತ್ತು 24 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಉಪಯೋಗ ಮಾಡಲಾಗಿದೆ. ಚಿಕ್ಕದಾದ ಬ್ಯಾಟರಿಯಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 61 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 110 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ದೊಡ್ಡದಾದ ಬ್ಯಾಟರಿ ಹೊಂದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 75 ಪಿಎಸ್ ಪವರ್ ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Top Five Budget Electric Cars In India TATA Punch MG Comet And More

ಟಾಟಾ ಟಿಗೋರ್‌ ಇವಿ: ಟಾಟಾ ಟಿಗೂರ್ ಇವಿ ವಾಣಿಜ್ಯ ಬಳಕೆಗೆ ಮಾತ್ರ ಲಭ್ಯವಿದ್ದು, ರೂ.12.49 ಲಕ್ಷದಿಂದ ರೂ.13.75 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 26 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 315 ಕಿಲೋಮೀಟರ್ ಕ್ರಮಿಸುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಸ್ಪೀಕರ್ ಸೌಂಡ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಪಂಚ್‌ ಇವಿ (Rs 10.99 ಲಕ್ಷ-15.49 ಲಕ್ಷ): ಟಾಟಾ ಪಂಚ್ ಇವಿ ರೂ.10.99 ಲಕ್ಷದಿಂದ ರೂ.15.49 ಲಕ್ಷ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 25 ಕೆಡಬ್ಲ್ಯೂಹೆಚ್ ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 315 ರಿಂದ 421 ಕಿ.ಮೀ ಓಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, May 20, 2024, 10:19 [IST]
English summary
Top five budget electric cars in india tata punch mg comet and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+