2024ರಲ್ಲಿ ಬಿಡುಗಡೆಗೊಂಡು ಬಿರುಗಾಳಿ ಎಬ್ಬಿಸಿದ ಕಾರುಗಳು

ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಕಂಪನಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಹಾಗೂ ಎಂಪಿವಿಗಳನ್ನು ಮಾರಾಟ ಮಾಡುತ್ತಿವೆ. ಅದರಲ್ಲೂ ಟಾಟಾ, ಮಾರುತಿ ಸುಜುಕಿ ಹಾಗೂ ಮಹೀಂದ್ರಾ ಸೇರಿದಂತೆ ವಿವಿಧ ಕಾರು ತಯಾರಕರಿಗೆ ಈ ವರ್ಷ ಹೆಚ್ಚು ಮಹತ್ವದಾಗಿದೆ. ಈ ವರ್ಷದ ಹಲವು ಜನಪ್ರಿಯ ಕಾರುಗಳು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಇದರಲ್ಲಿ ಪ್ರಮುಖ ಐದು ಕಾರುಗಳ (cars) ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಮಹೀಂದ್ರಾ ಥಾರ್ ರಾಕ್ಸ್: ಮಹೀಂದ್ರಾ ಥಾರ್ ಯಾವಾಗಲೂ ಹಾರ್ಡ್‌ಕೋರ್ ಆಫ್-ರೋಡ್ ಎಂದೇ ಜನಪ್ರಿಯತೆಗಳಿಸಿದೆ. ಆಫ್-ರೋಡ್ ವಾಹನ ಎಂದಾಗ ಎಲ್ಲರ ಮನಸ್ಸಿಗೆ ಬರುವುದು ಮಹೀಂದ್ರಾ ಥಾರ್ (Mahindra Thar) ಆಗಿದೆ. ಭಾರತದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗುತ್ತಿರುವ ಜನಪ್ರಿಯ ಆಫ್ ರೋಡರ್ ಎಸ್‍ಯುವಿ. ಈ ಒರಟಾದ ಲೈಫ್ ಸ್ಟೈಲ್ ಎಸ್‍ಯುವಿಯು 5-ಡೊರಿನ ಆವೃತ್ತಿ ಥಾರ್ ರಾಕ್ಸ್ ಹೊಸ ಬದಲಾವಣೆಗಳೊಂದಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿತ್ತು

Thar Roxx

ಥಾರ್ ರಾಕ್ಸ್ 4X4 ಪ್ರತ್ಯೇಕವಾಗಿ 2.2-ಲೀಟರ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು, ಈ ಎಂಜಿನ್ 175 bhp ಪವರ್ ಮತ್ತು 370 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಅನ್ನು ಹೊಂದಿದೆ. ಇನ್ನು ಡೀಸೆಲ್ 4X2 ರೂಪಾಂತರಗಳು, 2.2-ಲೀಟರ್ TGDi ಪೆಟ್ರೋಲ್ ರೂಪಾಂತರವು 152hp ಮತ್ತು 330 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಮಾರುತಿ ಸುಜುಕಿ ಡಿಜೈರ್: ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ ಅತ್ಯಂತ ಸ್ಪರ್ಧಾತ್ಮಕ ಬೆಲೆಯಲ್ಲಿ ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡಿತು. ಈ ಕಾರಿನಲ್ಲಿ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ 3 ಸಿಲಿಂಡರ್ ಜಡ್ ಸೀರೀಸ್ ಪೆಟೋಲ್ ಎಂಜಿನ್, 82 ಪಿಎಸ್ ಪವರ್ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Dzire

5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.79 ರಿಂದ 25.71 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಪಡೆದಿದೆ. ಆದರೆ, 70 ಪಿಎಸ್ ಪವರ್ ಹಾಗೂ 102 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 33.73 ಕೆಎಂ/ಕೆಜಿ ವರೆಗೆ ಮೈಲೇಜ್‌ನ್ನು ಕೊಡುತ್ತದೆ.

ಸಿಟ್ರನ್ ಬಸಾಲ್ಟ್: ಹೊಸ ಬಸಾಲ್ಟ್ ಭಾರತೀಯ ಮಾರುಕಟ್ಟೆಗೆ ಕಂಪನಿಯ ಪೋರ್ಟ್‌ಫೋಲಿಯೊದಿಂದ 5ನೇ ಕಾರ್ ಆಗಿದೆ. ಹೊಸ ಸಿಟ್ರನ್ ಬಸಾಲ್ಟ್ (Citroen Basalt) ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಈ ವರ್ಷ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಾಯಿತು. ಬಸಾಲ್ಟ್ ಮಾದರಿಯಲ್ಲಿ 2 ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ ಒಂದು 1.2 ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಆಗಿದ್ದು, ಇದು 82 bhp ಮತ್ತು 115 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Tata curvv

ಟಾಟಾ ಕರ್ವ್: ಈ ಟಾಟಾ ಕರ್ವ್ ಕಾರನ್ನು ಈ ವರ್ಷ ಬಿಡುಗಡೆ ಮಾಡಿದೆ. ಈ ಟಾಟಾ ಕರ್ವ್ ಮಾದರಿಯು ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್ ಹಾಗೂ ಕ್ರಿಯೇಟಿವ್ ಪ್ಲಸ್ ಸೇರಿದಂತೆ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಟಾಟಾ ಕರ್ವ್ ಮಾದರಿಯು ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೊಂಡಿದೆ. ಈ 45kWh ರೂಪಾಂತರವು 150hp ನ ಪವರ್ ಔಟ್‌ಪುಟ್ ಮತ್ತು 215Nm ಟಾರ್ಕ್ ನೀಡುತ್ತದೆ.

ಎಂಜಿ ವಿಂಡ್ಸರ್ ಇವಿ: ಭಾರತೀಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ನಡುವೆ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸಿದೆ. ಇದರ ಭಾಗವಾಗಿ ಎಂಜಿ ಕಂಪನಿಯು ಎಂಜಿ ವಿಂಡ್ಸರ್ ಇವಿ ಮಾದರಿಯನ್ನು ಬಿಡುಗಡೆಗೊಳಿಸಿ ಹೊಸ ಸಂಚಲನವನ್ನು ಸೃಷ್ಟಿಸಿತು.

More from DriveSpark

Article Published On: Wednesday, December 18, 2024, 17:24 [IST]
English summary
Top five cars launched in india in 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+