ಪ್ರತಿಸ್ಪರ್ಧಿಗಳಿಗೆ ನಿದ್ದೆಯಿಲ್ಲದಂತೆ ಮಾಡಿವೆ ಮಾರುತಿ ಕಾರುಗಳು: ತಿಂಗಳಿಗೆ 1 ಲಕ್ಷ ಕಾರುಗಳ ಮಾರಾಟ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ (Maruti Suzuki) ತನ್ನ ಸರಣಿಯಲ್ಲಿ ಒಟ್ಟು 17 ಕಾರುಗಳನ್ನು ಒಳಗೊಂಡಿದೆ. ಇದು ಭಾರತದಲ್ಲಿ ಯಾವುದೇ ತಯಾರಕರಿಗೆ ಹೋಲಿಸಿದರೆ ಅತ್ಯಧಿಕವಾಗಿದೆ. ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಪೆಟ್ರೋಲ್, ಸ್ಟ್ರಾಂಗ್ ಹೈಬ್ರಿಡ್ ಮತ್ತು CNG ಸೇರಿದಂತೆ ವಿವಿಧ ಮಾದರಿಗಳನ್ನು ಮಾರಾಟ ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ, ಮಾರುತಿ ಸುಜುಕಿ ತನ್ನ ಎಂಟ್ರಿ ಲೆವೆಲ್ ಕಾರುಗಳ ಜೊತೆ ಎಸ್‍ಯುವಿ ಪೋರ್ಟ್‌ಫೋಲಿಯೊವನ್ನು ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗೆ ಭಾರತದಲ್ಲಿ ಎಸ್‍ಯುವಿಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಹೊಸ ಎಸ್‍ಯುವಿಗಳನ್ನು ಪರಿಚಯಿಸುತ್ತಿದೆ.

ಹೊಸ ಬ್ರೆಝಾ, ಗ್ರ್ಯಾಂಡ್ ವಿಟಾರಾ ಮತ್ತು ಫ್ರಾಂಕ್ಸ್ ಆಗಮನದಿಂದ ದೇಶದ ಅತಿದೊಡ್ಡ ಕಾರು ತಯಾರಕರಾದ ಮಾರುತಿ ಸುಜುಕಿಯು ಎಸ್‍ಯುವಿ ಮಾರಾಟದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಹೊರಹೊಮ್ಮಿದೆ. 2024ರ ಏಪ್ರಿಲ್ ತಿಂಗಳಿನಲ್ಲಿ ಒಟ್ಟು ಎಂಟು ಮಾರುತಿ ಸುಜುಕಿ ಕಾರುಗಳ 10,000 ಯುನಿಟ್ ಗಳು ಮಾರಾಟವಾಗಿವೆ. ಈ ಎಸ್‍ಯುವಿಗಳ ಪಟ್ಟಿಯಲ್ಲಿ ಬ್ರೆಝಾ ಮುನ್ನಡೆ ಸಾಧಿಸಿದೆ.

Maruti Suzuki

ಕಳೆದ ತಿಂಗಳು ಮಾರುತಿ ಸುಜುಕಿ ಬ್ರೆಝಾದ ಒಟ್ಟು 19,190 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ 14,572 ಯುನಿಟ್‌ಗನ್ನು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.32 ಪ್ರತಿಶತದಷ್ಟು ಬೆಳವಣಿಗೆಯನ್ನು ಹೊಂದಿದೆ. ಇನ್ನು ಮಾರುತಿ ಸುಜುಕಿ ಎರ್ಟಿಗಾ ಕಳೆದ ತಿಂಗಳು 18,580 ದೇಶೀಯ ಮಾರಾಟವನ್ನು ದಾಖಲಿಸಿದೆ.

ಇನ್ನು ಒಂದು ವರ್ಷದ ಹಿಂದೆ ಆಗಸ್ಟ್ ತಿಂಗಳಿನಲ್ಲಿ ಮಾರುತಿ ಸುಜುಕಿ ಎರ್ಟಿಗಾದ 12,315 ಯುನಿಟ್‌ಗಳನ್ನು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ. 51 ಪ್ರತಿಶತದಷ್ಟು ಹೆಚ್ಚಳವಾಗಿದೆ. ನಂತರ 2024 ಆಗಸ್ಟ್ ತಿಂಗಳಿನಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಮಾದರಿಯ 16,450 ಯುನಿಟ್‌ಗಳನ್ನು ಮಾರಾಟವಾಗಿವೆ.

Maruti Suzuki

ಇನ್ನು ಕಳೆದ ವರ್ಷದ ಇದೇ ಅವಧಿಯಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ ಮಾದರಿಯ 15,578 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.6 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಆದರೆ ಜನಪ್ರಿಯ ಮತ್ತು ಮಾರಾಟದಲ್ಲಿ ಹಲವು ವರ್ಷಗಳಿಂದ ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಮಾರಾಟದಲ್ಲಿ ಗಮನಾರ್ಹ ಕುಸಿತವನ್ನು ಅನುಭವಿಸಿದೆ.

2024ರ ಆಗಸ್ಟ್‌ನಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಮಾದರಿಯ 12,844 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್‌ ತಿಂಗಳಿನಲ್ಲಿ 18,653 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.31 ರಷ್ಟು ಕುಸಿತವನ್ನು ಕಂಡಿದೆ. ಅದೇ ರೀತಿ, ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಳೆದ ತಿಂಗಳು 12,485 ಯುನಿಟ್‌ಗಳು ಮಾರಾಟವಾಗಿದ್ದರೂ, ವರ್ಷದಿಂದ ವರ್ಷದ ಮಾರಾಟದಲ್ಲಿ 33 ಶೇಕಡಾ ಕುಸಿತವನ್ನು ಕಂಡಿದೆ.

Maruti Suzuki

ಮತ್ತೊಂದೆಡೆ, ಮಾರುತಿ ಸುಜುಕಿ ಫ್ರಾಂಕ್ಸ್ 12,387 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ 2 ಶೇಕಡಾ ಬೆಳವಣಿಗೆಯನ್ನು ತೋರಿಸಲು ಯಶಸ್ವಿಯಾಗಿದೆ, ಕಳೆದ ವರ್ಷ 12,164 ಯುನಿಟ್‌ಗಳಿಂದ ಸ್ವಲ್ಪ ಹೆಚ್ಚಾಗಿದೆ. ಇನ್ನು ಇಕೋ 10,985 ಯುನಿಟ್ ಮಾರಾಟವನ್ನು 11,859 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 7 ರಷ್ಟು ಕುಸಿತವನ್ನು ಕಂಡಿದೆ. ಇನ್ನು ಮಾರುತಿ ಸುಜುಕಿ ಡಿಜೈರ್ ಸಹ 10,000 ಮಾರ್ಕ್ ಅನ್ನು ದಾಟಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 24, 2024, 18:26 [IST]
English summary
Top maruti cars cross 10000 units sales in august 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+