ಬೈಕ್‌ನಂತೆ ಮೈಲೇಜ್ ನೀಡುವ 2024ರ ಪ್ರಸಿದ್ಧ ಕಾರುಗಳಿವು.. 5-ಸೀಟರ್.. ಕಡಿಮೆ ಬೆಲೆ!

ಭಾರತವು ವಿಶ್ವದಲ್ಲಿಯೇ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಈ ವರ್ಷ (2024) ವಾಹನ ತಯಾರಕ ಕಂಪನಿಗಳಿಗೆ ಬಹುಮುಖ್ಯ ವರ್ಷವಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಕಾರುಗಳನ್ನು ಮಾರಾಟಕ್ಕೆ ತಂದಿವೆ. ಅದರಲ್ಲೂ ಅತಿ ಕಡಿಮೆ ಬೆಲೆ ಹಾಗೂ ಬೈಕ್‌ನಂತೆ ಹೆಚ್ಚಿನ ಮೈಲೇಜ್ ನೀಡುವ ಕಾರುಗಳು ಸಹ ಬಿಡುಗಡೆಯಾದವು. ನಾವಿಲ್ಲಿ, ಅಂತಹದ್ದೇ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್, ಸಿಟ್ರನ್ ಬಸಾಲ್ಟ್, ಹೋಂಡಾ ಅಮೇಜ್ ಮತ್ತು ಮಾರುತಿ ಸುಜುಕಿ ಡಿಜೈರ್ ಕಾರುಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift): ಈ ಕಾರು ರೂ.6.49 ರಿಂದ ರೂ.9.59 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದರ ಪೆಟೋಲ್ ಚಾಲಿತ ರೂಪಾಂತರ (ವೇರಿಯೆಂಟ್), 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.80 ರಿಂದ 25.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top Mileage Cars In 2024 Maruti Suzuki Swift Dzire Citroen Basalt And Honda Amaze

ಈ ಮಾರುತಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ 1.2-ಲೀಟರ್ ಸಿಎನ್‌ಜಿ ರೂಪಾಂತರ, 69 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 32.85 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಹೋಂಡಾ ಅಮೇಜ್ (Honda Amaze): ಇದು ರೂ.7.99 ಲಕ್ಷದಿಂದ ರೂ.10.90 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 89 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top Mileage Cars In 2024 Maruti Suzuki Swift Dzire Citroen Basalt And Honda Amaze

ನೂತನ ಹೋಂಡಾ ಅಮೇಜ್ ಸೆಡಾನ್‌ನಲ್ಲಿ 5 ಜನರು ಪ್ರಯಾಣಿಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.

ಸಿಟ್ರನ್ ಬಸಾಲ್ಟ್ (Citroen Basalt): ಇದು ರೂ.7.99 ರಿಂದ ರೂ.13.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 205 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Top Mileage Cars In 2024 Maruti Suzuki Swift Dzire Citroen Basalt And Honda Amaze

ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. ಈ ಕಾರು, 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಮಂದಿ ಪ್ರಯಾಣಿಸಬಹುದು.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire): ಜನಪ್ರಿಯ ಸೆಡಾನ್ ಆಗಿದ್ದು, ರೂ.6.79 ಲಕ್ಷದಿಂದ ರೂ.10.14 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಈ ಕಾರಿನ 1.2-ಲೀಟರ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.79 ರಿಂದ 25.71 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಡಿಜೈರ್ ಕಾರಿನ 1.2-ಲೀಟರ್ ಸಿಎನ್‌ಜಿ ಎಂಜಿನ್, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 33.73 ಕೆಎಂ/ಕೆಜಿವರೆಗೂ ಮೈಲೇಜ್ ಕೊಡುತ್ತದೆ. ಈ ಸೆಡಾನ್‌ನಲ್ಲಿ ಕೂಡ 5 ಜನರು ಓಡಾಟ ನಡೆಸಬಹುದು.

More from DriveSpark

Article Published On: Tuesday, December 24, 2024, 12:50 [IST]
English summary
Top mileage cars in 2024 maruti suzuki swift dzire citroen basalt and honda amaze
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+