Second Hand Suvs: ಕಾರು ತೆಗೆದುಕೊಳ್ಳಬೇಕೆಂಬ ಕನಸು ನನಸು, ಅಗ್ಗದ ಬೆಲೆಗೆ ದೊರೆಯುವ ಸೆಕೆಂಡ್ ಹ್ಯಾಂಡ್ ಎಸ್‌ಯುವಿಗಳಿವು!
ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಬಹುತೇಕರಿಗೆ ಹೊಸ ಕಾರು ಖರೀದಿಸಬೇಕೆಂಬುದು ದೊಡ್ಡ ಆಸೆಯಾಗಿರುತ್ತದೆ. ಆದರೆ, ಮನೆಯ ಹಣಕಾಸಿನ ಪರಿಸ್ಥಿತಿಯಿಂದ ನೂತನ ಕಾರು ಕೊಂಡುಕೊಳ್ಳುವ ಕನಸು ನನಸಾಗುವುದಿಲ್ಲ. ಇಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಸೆಕೆಂಡ್ ಹ್ಯಾಂಡ್ ಎಸ್‌ಯುವಿ (Second Hand Suvs)ಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಹೊಂದಿರುವ ಮಾರುತಿ ಸುಜುಕಿ ಬ್ರೆಜ್ಜಾ (Maruti Suzuki Brezza) ಕುರಿತು ಮಾತನಾಡೋಣ. ಈ ಎಸ್‌ಯುವಿಯ ಹಳೆಯ ಮಾದರಿಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತವೆ. ಅದಕ್ಕೆ ಹೋಲಿಕೆ ಮಾಡಿದರೆ, ನೂತನ ಬ್ರೆಜ್ಜಾ ಕಾರೇ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇದು ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಮಾರುತಿ ಸುಜುಕಿ ಬ್ರೆಜ್ಜಾ, ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್, ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ500 (Mahindra XUV500) ಎಸ್‌ಯುವಿ ಮಾರಾಟವನ್ನು ಸ್ಥಗಿತಗೊಳಿಸಿದ್ದರೂ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ವಿಪರೀತ ಡಿಮ್ಯಾಂಡ್ ಹೊಂದಿದೆ. ಈಗಲೂ ಹೆಚ್ಚಿನ ಮಂದಿ ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ಈ ಎಕ್ಸ್‌ಯುವಿ500, ರೂ.12 ಲಕ್ಷದಿಂದ ರೂ.20.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತಿದ್ದ ಈ ಕಾರು, 16 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತಿತ್ತು.

ಟೊಯೊಟಾ ಕಂಪನಿಯ ಫಾರ್ಚುನರ್ (Fortuner) ಪುಲ್-ಸೈಜ್ ಎಸ್‌ಯುವಿಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆದಿದೆ. ಹಳೆಯ ಫಾರ್ಚುನರ್ ಕಾರುಗಳಿಗೆ ದೊಡ್ಡಮಟ್ಟದ ಬೇಡಿಕೆಯಿದೆ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ಟೊಯೊಟಾ ಫಾರ್ಚುನರ್ ಎಸ್‌ಯುವಿ, ರೂ.33.43 ಲಕ್ಷದಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದ್ದು, ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ.
ಟೊಯೊಟಾ ಫಾರ್ಚುನರ್, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. 2WD (ಟು ವೀಲ್ ಡ್ರೈವ್) 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದ್ದು, 10 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 7 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು.

ವಿನ್ಯಾಸದ ದೃಷ್ಟಿಯಿಂದಲೂ ಫಾರ್ಚುನರ್ ಅತ್ಯುತ್ತಮವಾಗಿದ್ದು, 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ನು, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವವರೂ ಅದರ ದಾಖಲೆಗಳು, ಇನ್ಸೂರೆನ್ಸ್, ಕ್ರಮಿಸಿರುವ ಮೈಲೇಜ್, ಡೆಂಟ್ ಆಗಿರುವುದು ಒಳಗೊಂಡಂತೆ ವಿವಿಧ ವಿವರಗಳನ್ನು ಪರಿಶೀಲಿಸಬೇಕು. ಜೊತೆಗೆ ಕಾರಿನ ಬೆಲೆ ನಿರ್ಧರಿಸುವ ವಿಚಾರದಲ್ಲಿ ಪರಿಣಿತರ ಅಭಿಪ್ರಾಯ ಪಡೆಯುವುದು ಹೆಚ್ಚು ಸೂಕ್ತ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








