Upcoming 7-Seater Cars: ಫುಲ್ ಫ್ಯಾಮಿಲಿ ಒಂದೇ ಕಾರಿನಲ್ಲಿ ಹೋಗಬಹುದು: ಬರುತ್ತಿವೆ 7-ಸೀಟರ್ ಕಾರುಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ದಿನದಂದ ದಿನಕ್ಕೆ 7-ಸೀಟರ್ ಕಾರುಗಳ (7-Seater Cars) ಬೇಡಿಕೆ ಹೆಚ್ಚಾಗುತ್ತಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು 7-ಸೀಟರ್ ಕಾರುಗಳನ್ನು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಇದರಿಂದ ಭಾರತದಲ್ಲಿ 7-ಸೀಟರ್ ಮಾದರಿಗಳ ವಿಭಾಗದಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳಿವೆ. ಭಾರತದಲ್ಲಿ ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಹೊಸ 7-ಸೀಟರ್ ಬಿಡುಗಡೆಯಾಗಲಿವೆ. ಹೊಸದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಿಯಾ ಕಾರ್ನಿವಲ್, ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಮತ್ತು ಎಂಜಿ ಗ್ಲೋಸ್ಟರ್ ಫೇಸ್‌ಲಿಫ್ಟ್ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಕಿಯಾ ಕಾರ್ನಿವಲ್: ಕಿಯಾ ಇಂಡಿಯಾ ತನ್ನ ಜನಪ್ರಿಯ ಕಿಯಾ ಕಾರ್ನಿವಲ್ ಕಾರನ್ನು ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಜನರೇಷನ್ ಕಿಯಾ ಕಾರ್ನಿವಲ್ ( Kia Carnival) ಮಾದರಿಯು 2024ರ ಅಕ್ಟೋಬರ್ 3 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಕಾರಿನ ಜೊತೆಗೆ ಕಿಯಾ ತನ್ನ ಹೊಸ EV9 ಎಲೆಕ್ಟ್ರಿಕ್ ಕಾರನ್ನು ಕೂಡ ಬಿಡುಗಡೆಗೊಳಿಸಲಿದೆ. ಹೊಸ ಕಾರ್ನಿವಲ್ ಅನ್ನು 2023 ಆಟೋ ಎಕ್ಸ್‌ಪೋದಲ್ಲಿ KA4 ಕಾನ್ಸೆಪ್ಟ್ ಮಾದರಿಯಾಗಿ ಪ್ರದರ್ಶಿಸಿದ್ದರು.

Upcoming 7-seat SUVs

ಹೊಸ ಕಿಯಾ ಕಾರ್ನಿವಲ್ ಹಲವಾರು ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಕಾಲಿಡಲಿದೆ. ಹೊಸ ಕಿಯಾ ಕಾರ್ನಿವಲ್ ಕಾರಿನಲ್ಲಿ ಅದೇ 2.2 ಲೀಟರ್ ನಾಲ್ಕು ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 200 PS ಗರಿಷ್ಠ ಪವರ್ ಹಾಗೂ 440 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 8 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಹೊಸ ಮಾದರಿಯು ಒಟ್ಟಾರೆ 5,156mm ಉದ್ದದೊಂದಿಗೆ ಬರಲಿದೆ. 2024ರ ಕಿಯಾ ಕಾರ್ನಿವಲ್ ಕಾರಿನ ಒಳಭಾಗದಲ್ಲಿ, ಹೊಸ ಕಾರ್ನಿವಲ್ 12.3-ಇಂಚಿನ ಯುನಿಟ್ ಗಳೊಂದಿಗೆ ಡ್ಯುಯಲ್-ಸ್ಕ್ರೀನ್ ಸೆಟಪ್ ಅನ್ನು ಹೊಂದಿರುತ್ತದೆ. ಇದು ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೋಟರಿ ಡ್ರೈವ್ ಸೆಲೆಕ್ಟರ್ ಮತ್ತು ಪರಿಷ್ಕೃತ ಎಸಿ ಮತ್ತು ಆಡಿಯೊ ಕಂಟ್ರೋಲ್ ಗಳನ್ನು ಸೆಂಟ್ರಲ್ ಡಿಸ್ ಪ್ಲೇ ಕೆಳಗೆ ಇರಿಸಲಾಗುತ್ತದೆ.

Upcoming 7-seat SUVs

ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್: ಹ್ಯುಂಡೈ ಕಂಪನಿಯು ಸೆಪ್ಟೆಂಬರ್ 9ರಂದು ಹೊಚ್ಚ ಹೊಸ ನವೀಕರಿಸಿದ ಅಲ್ಕಾಜರ್ ಫ್ಯಾಮಿಲಿ ಎಸ್‌ಯುವಿ ಬಿಡುಗಡೆಗೆ ದಿನಾಂಕ ನಿಗದಿಪಡಿಸಿದೆ. ನೂತನ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಎಸ್‌ಯುವಿ ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ರೂ.25,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು.

ಅಲ್ಕಾಜರ್‌ನಂತೆ 6 - 7 ಆಸನ ಆಯ್ಕೆಯಲ್ಲಿ ದೊರೆಯಲಿದೆ. ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಕಾರು ಪ್ರಸ್ತುತವಿರುವ ಮಾದರಿಯಂತೆಯೇ (ಮಾಡೆಲ್) ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ನೂತನ ಎಸ್‌ಯುವಿ ಕೂಡ 1.5-ಲೀಟರ್ ಟರ್ಬೊ ಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್‌‌ನ್ನು ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Upcoming 7-seat SUVs

ಎಂಜಿ ಗ್ಲೋಸ್ಟರ್ ಫೇಸ್‌ಲಿಫ್ಟ್: ಎಂಜಿ ಮೋಟಾರ್ ಇಂಡಿಯಾ ಶೀಘ್ರದಲ್ಲೇ ಹೊಸ ಫುಲ್‌ಸೈಜ್ ಎಸ್‌ಯುವಿಯಾದ ಗ್ಲೋಸ್ಟರ್‌ನ ಫೇಸ್ ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ರಸ್ತೆ ಪರೀಕ್ಷೆಗಳನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಹೊಸ ಎಸ್‌ಯುವಿಯು ದೆಹಲಿ - ಜೈಪುರ ಹೆದ್ದಾರಿಯಲ್ಲಿ ಕಾಣಿಸಿಕೊಂಡಿದೆ. ಕಂಪನಿಯು ಫೇಸ್‌ಲಿಫ್ಟ್‌ ಆವೃತ್ತಿಯನ್ನು ಸೂಕ್ಷ್ಮ ಇಂಟೀರಿಯರ್ ಪರಿಷ್ಕರಣೆಗಳೊಂದಿಗೆ ಗಮನಾರ್ಹ ವಿನ್ಯಾಸ ನವೀಕರಣಗಳನ್ನು ನೀಡಿ ಬಿಡುಗಡೆ ಮಾಡಲಿದೆ.

ಈ ಎಂಜಿ ಗ್ಲೋಸ್ಟರ್ ಫೇಸ್‌ಲಿಫ್ಟ್ ಪವರ್‌ಟ್ರೇನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎನ್ನಲಾಗಿದೆ. ಅದೇ 2.0-ಲೀಟರ್ ಡೀಸೆಲ್ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರಲಿದೆ. ಈ ಎಂಜಿನ್ ಅನ್ನು ಟರ್ಬೊ ಮತ್ತು ಟ್ವಿನ್ ಟರ್ಬೊ ಎಂಬ ಎರಡು ರೂಪಾಂತರಗಳಲ್ಲಿ ನೀಡಲಾಗುವುದು, ಇದು 213 ಬಿಹೆಚ್‌ಪಿ ಪವರ್ ಮತ್ತು 478 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Article Published On: Friday, August 23, 2024, 13:09 [IST]
English summary
Top upcoming 7 seat cars in india details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+