Toyota: ಟೊಯೊಟಾದ ಪ್ರಮುಖ ಕಾರುಗಳಿಗಾಗಿ ಶೋರೂಂ ಎಡತಾಕಿದ ಗ್ರಾಹಕರು.. ಮನಸೆಳೆಯುವ ವೈಶಿಷ್ಟ್ಯಗಳು
ಭಾರತದಲ್ಲಿ ದಶಕಗಳಿಂದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಪ್ರಖ್ಯಾತ ಕಾರು ತಯಾರಕ ಸಂಸ್ಥೆಯಾಗಿದೆ. ಕಂಪನಿ ಮಾರಾಟಗೊಳಿಸುವ ಗ್ಲಾನ್ಜಾ, ರೂಮಿಯನ್, ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ ಹಾಗೂ ಅರ್ಬನ್ ಕ್ರೂಸರ್ ಹೈರೈಡರ್ ಕಾರುಗಳು ಹೆಚ್ಚಿನ ಬೇಡಿಕೆಯನ್ನು ಪಡೆದುಕೊಂಡಿವೆ.
ಟೊಯೊಟಾ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ 1, 2024ಕ್ಕೆ ಅನ್ವಯವಾಗುವಂತೆ ಪ್ರಕಟಿಸಿರುವ ಕಾಯುವಿಕೆ ಅವಧಿಯ ಪ್ರಕಾರ, ಇನ್ನೋವಾ ಹೈಕ್ರಾಸ್ ಎಂಪಿವಿ ವಿತರಣೆಯಾಗಲು ತಿಂಗಳುಗಳೇ ಬೇಕಾಗುತ್ತದೆ. ಅದೇ ಗ್ಲಾನ್ಜಾ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕೇವಲ 1 ತಿಂಗಳಲ್ಲಿ ಗ್ರಾಹಕರ ಮನೆ ಸೇರುತ್ತದೆ. ಭಾರೀ ಬೇಡಿಕೆಯಿರುವುದರಿಂದ ಕೈಗೆಟುಕುವ ಬೆಲೆಯ ರೂಮಿಯನ್ ಕಾರಿನ ಸಿಎನ್‌ಜಿ ರೂಪಾಂತರದ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜನಪ್ರಿಯ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ಗರಿಷ್ಠ ಕಾಯುವಿಕೆ ಅವಧಿಯನ್ನು ಹೊಂದಿದೆ. ಇದರ ಪೆಟ್ರೋಲ್ ರೂಪಾಂತರಗಳನ್ನು ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 5-6 ನಂತರ ವಿತರಣೆಯಾಗುತ್ತವೆ. ಹೈಬ್ರಿಡ್ ರೂಪಾಂತರಗಳು 11 ರಿಂದ 12 ತಿಂಗಳ ಬಳಿಕ ಡಿಲೆವರಿಯಾಗುತ್ತವೆ. ಭಾರೀ ಬೇಡಿಕೆಯಿರುವುದರಿಂದ ಝಡ್ಎಕ್ಸ್ ಮತ್ತು ಝಡ್ಎಕ್ಸ್(ಒ) ರೂಪಾಂತರಗಳಿಗೆ ಆರ್ಡರ್ ಪಡೆಯುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಇನ್ನೋವಾ ಹೈಕ್ರಾಸ್ ಕಾರು ರೂ.19.77 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಎಂಪಿವಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಫೋನ್ ಚಾರ್ಜಿಂಗ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ ಅನ್ನು ಹೊಂದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಎಂಪಿವಿ ಸುಮಾರು 6 ನಂತರ ವಿತರಣೆಯಾಗುತ್ತದೆ. ಈ ಕಾರು ರೂ.19.99 ಲಕ್ಷದಿಂದ ರೂ.26.30 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಕೇವಲ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕಡಿಮೆ ಬೆಲೆಯ ಟೊಯೊಟಾ ರೂಮಿಯನ್ (Toyota Rumion) ಕಾರು ಕೊಂಚ ಅಧಿಕ ಕಾಯುವಿಕೆ ಅವಧಿಯನ್ನು ಹೊಂದಿದೆ. ಭಾರೀ ಬೇಡಿಕೆಯಿರುವುದರಿಂದ ಸಿಎನ್‌ಜಿ ರೂಪಾಂತರದ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪೆಟ್ರೋಲ್ ರೂಪಾಂತರಗಳು ಸುಮಾರು 7 ರಿಂದ 8 ತಿಂಗಳ ಬಳಿಕ ವಿತರಣೆಯಾಗಲಿವೆ. ಈ ಕಾರು ರೂ.10.44 ಲಕ್ಷದಿಂದ ರೂ.13.73 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ಗ್ಲಾನ್ಜಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಇದರ ಮ್ಯಾನುವಲ್ ಮತ್ತು ಆಟೋಮೆಟಿಕ್ ರೂಪಾಂತರಗಳು ಸುಮಾರು 1 ತಿಂಗಳ ನಂತರ ಡೆಲೆವರಿಯಾಗುತ್ತವೆ. ದೇಶದಲ್ಲಿ ಗ್ಲಾನ್ಜಾ ರೂ.6.81 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 360-ಡಿಗ್ರಿ ಕ್ಯಾಮೆರಾ, ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳಿವೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಕೂಡ ಡಿಲೆವರಿಯಾಗಲು ಹೆಚ್ಚಿನ ಸಮಯಾವಕಾಶ ಬೇಕಾಗುತ್ತದೆ. ಈ ಕಾರಿನ ಹೈಬ್ರಿಡ್ ರೂಪಾಂತರಗಳು ಸುಮಾರು 3-4 ತಿಂಗಳ ನಂತರ ವಿತರಣೆಯಾಗುತ್ತವೆ. ಪೆಟ್ರೋಲ್ ಮಾದರಿಗಳು 8-9 ತಿಂಗಳ ನಂತರ ಗ್ರಾಹಕರಿಗೆ ಸಿಗುತ್ತವೆ. ಸಿಎನ್‌ಜಿ ರೂಪಾಂತರ 6-7 ತಿಂಗಳ ನಂತರ ಡಿಲೆವರಿಯಾಗುತ್ತದೆ. ಈ ಕಾರು ರೂ.11.14 ಲಕ್ಷ ಆರಂಭಿಕ ಬೆಲೆಯೊಂದಿಗೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications