Toyota: ಟೊಯೊಟಾದ ಈ ಕಾರನ್ನು ಆದಷ್ಟು ಬೇಗನೆ ಮನೆಗೆ ತರಬಹುದು, ಒಮ್ಮೆಲೇ 7 ಜನ ಪ್ರಯಾಣಿಸಬಹುದು!
ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಟೊಯೊಟಾ (Toyota) ಗುರುತಿಸಿಕೊಂಡಿದೆ. ಕಂಪನಿಯ ಇನ್ನೋವಾ ಸರಣಿ ಎಂಪಿವಿಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. 7 ಜನ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದಾದ ಫಾರ್ಚುನರ್ (Fortuner) ಪುಲ್ - ಸೈಜ್ ಎಸ್‌ಯುವಿ ಹೆಚ್ಚಿನ ದೇಶೀಯ ಗ್ರಾಹಕರನ್ನು ಸೆಳೆದಿದೆ.
ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ 1 ಜನವರಿ 2024ಕ್ಕೆ ಅನ್ವಯವಾಗುವಂತೆ ಫಾರ್ಚುನರ್ ಎಸ್‌ಯುವಿ ಹೊಂದಿರುವ ಕಾಯುವಿಕೆ ಅವಧಿ (Waiting Period) ಕುರಿತು ವಿವರವನ್ನು ಪ್ರಕಟಿಸಿದೆ. ನೀವು ಈ ಕಾರನ್ನು ಇವತ್ತು ಬುಕ್ಕಿಂಗ್ ಮಾಡಿದರೂ 1 ರಿಂದ 2 ತಿಂಗಳ ನಂತರ ವಿತರಣೆಯಾಗಲಿದೆ.

ಸದ್ಯ ಭಾರತದಲ್ಲಿ ಖರೀದಿಗೆ ಸಿಗುವ ಟೊಯೊಟಾ ಫಾರ್ಚುನರ್ (Toyota Fortuner) ಎಸ್‌ಯುವಿ, ರೂ.33.43 ಲಕ್ಷದಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಲೆಜೆಂಡರ್, ಸ್ಟ್ಯಾಂಡರ್ಡ್, ಜಿಆರ್-ಎಸ್ ರೂಪಾಂತರ, ಪ್ಲಾಟಿನಂ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್, ಫ್ಯಾಂಟಮ್ ಬ್ರೌನ್ ಸೇರಿದಂತೆ 7 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಟೊಯೊಟಾ ಫಾರ್ಚುನರ್ ಎಸ್‌ಯುವಿ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 2.7 - ಲೀಟರ್ ಪೆಟ್ರೋಲ್ ಎಂಜಿನ್ 166 PS ಗರಿಷ್ಠ ಪವರ್, 245 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಮತ್ತೊಂದು, 2.8 - ಲೀಟರ್ ಟರ್ಬೊ ಡೀಸೆಲ್ ಎಂಜಿನ್ 204 PS ಪವರ್, 500 Nm ಹೊರಹಾಕುತ್ತದೆ. 6 - ಸ್ವೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಬ್ಯವಿದೆ. ಈ ಟೊಯೊಟಾ ಫಾರ್ಚುನರ್ ಎಸ್‌ಯುವಿ 2WD (ಟು ವೀಲ್ ಡ್ರೈವ್) 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. 10.0 kmpl ಮೈಲೇಜ್ ನೀಡುತ್ತದೆ.
ವಿನ್ಯಾಸದ ದೃಷ್ಟಿಯಿಂದ ಕೂಡ ಟೊಯೊಟಾ ಫಾರ್ಚುನರ್ ಅತ್ಯುತ್ತಮವಾಗಿದೆ. ವೈಶಿಷ್ಟ್ಯದ ವಿಚಾರಕ್ಕೆ ಬರುವುದಾದರೆ, 8 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 6 - ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್, ಡ್ಯುಯಲ್-ಜೋನ್ ಎಸಿ, ಕನೆಕ್ಟ್ದ್ ಕಾರ್ ಟೆಕ್, ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಟೊಯೊಟಾ ಫಾರ್ಚುನರ್ ಎಸ್‌ಯುವಿ, ಸುರಕ್ಷತೆಯಲ್ಲಿಯೂ ಅತ್ಯಾಧುನಿಕವಾಗಿದೆ. ಗ್ಲೋಬಲ್ ಎನ್‌ಸಿಎಪಿ (Global NCAP)ಯಿಂದ 4 ಸ್ಟಾರ್ ರೇಟಿಂಗ್ ಪಡೆದಿದೆ. 7-ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.
ಇನ್ನು, ಟೊಯೊಟಾದ ಗ್ಲಾನ್ಜಾ (Glanza) ಸಹ ಕಡಿಮೆ ಕಾಯುವಿಕೆ ಅವಧಿಯನ್ನು ಪಡೆದಿದ್ದು, ಮ್ಯಾನುವಲ್ ಹಾಗೂ ಆಟೋಮೆಟಿಕ್ ರೂಪಾಂತರಗಳನ್ನು ನೀವು ಇವತ್ತು ಆರ್ಡರ್ ಮಾಡಿದರೂ ಡಿಲೆವರಿಯಾಗಲು ಕೇವಲ 1 ತಿಂಗಳು ಸಮಯಾವಕಾಶ ಸಾಕು. ಈ ಕಾರು, ರೂ.6.81 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications