ಟೊಯೊಟಾ ಫಾರ್ಚೂನರ್ ಎಸ್‍ಯುವಿಗೆ ಮನಸೋತ ಗ್ರಾಹಕರು: ಶೋರೂಂ ಎದುರು ಕ್ಯೂ ನಿಂತ ಗ್ರಾಹಕರು!

ಫುಲ್ ಸೈಜ್ ಎಸ್‌ಯುವಿ (Full Size Suv) ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಎಂದಿನಂತೆ ಮುಂದುವರೆಸಿದೆ. ಪ್ರತಿ ತಿಂಗಳಿನಲ್ಲೂ, ಫುಲ್ ಸೈಜ್ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ. ಈ ನಡುವೆ ಟೊಯೊಟಾ ತನ್ನ ಟೊಯೊಟಾ ಫಾರ್ಚೂನರ್ (Toyota Fortuner) ಎಸ್‍ಯುವಿಯ ಕಾಯುವಿಕೆಯ ಅವಧಿ ಬಹಿರಂಗವಾಗಿದೆ. ಈ ಟೊಯೊಟಾ ಫಾರ್ಚೂನರ್ ಎಸ್‍ಯುವಿ 1 ರಿಂದ 2 ತಿಂಗಳವರೆಗೆ ಕಾಯಬೇಕಾಗುತ್ತದೆ. ಇದು ಪ್ರದೇಶ, ರಾಜ್ಯ, ಡೀಲರ್‌ಶಿಪ್, ರೂಪಾಂತರ, ಬಣ್ಣ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಬದಲಾಗುತ್ತದೆ.

ಟೊಯೊಟಾ ಫಾರ್ಚೂನರ್ ಎಸ್‍ಯುವಿ ಕಾಯುವಿಕೆಯ ಅವಧಿಯ ನಿಖರವಾದ ಮಾಹಿತಿಗಾಗಿ ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಿಮ್ಮ ಹತ್ತಿರದ ಡೀಲರ್‌ಶಿಪ್ ಅನ್ನು ಸಂಪರ್ಕಿಸಿ. 7-ಸೀಟುಗಳ ಪ್ರಸ್ತುತ ಜನರೇಷನ್ ಫಾರ್ಚೂನರ್ ಎಸ್‍ಯುವಿಯನ್ನು 2016 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಫಾರ್ಚೂನರ್ ಜಿಆರ್ ಸ್ಪೋರ್ಟ್ ರೂಪಾಂತರವನ್ನು ಶ್ರೇಣಿಗೆ ಸೇರಿಸಲಾಯಿತು. ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಲೆಜೆಂಡರ್ ಆವೃತ್ತಿಯು ಮಾರಾಟದಲ್ಲಿದೆ ಮತ್ತು ಇದು 4X4 ಆಯ್ಕೆಯೊಂದಿಗೆ ಸಹ ಲಭ್ಯವಿದೆ.

Toyota Fortuner

ಟೊಯೊಟಾ ಲೆಜೆಂಡರ್‌ನ 4×4 ರೂಪಾಂತರವನ್ನು ಫಾರ್ಚುನರ್‌ನ ಶ್ರೇಣಿಗೆ ಸೇರಿಸಿತು. ಈ ಟೊಯೊಟಾ ಫಾರ್ಚುನರ್‌ನ ಜಿಆರ್-ಸ್ಪೋರ್ಟ್ ರೂಪಾಂತರವನ್ನು ಕೂಡ ಬಿಡುಗಡೆಗೊಳಿಸಿತ್ತು. ಈ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಫಾರ್ಚುನರ್ ಎಸ್‍ಯುವಿಯಲ್ಲಿ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಈ ಎಸ್‍ಯುವಿಯಲ್ಲಿ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಹೊಂದಿವೆ. ಟೊಯೊಟಾ ಫಾರ್ಚುನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಹೊಂದಿದೆ.

Toyota Fortuner

ಫಾರ್ಚೂನರ್ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಕೂಡ ನೋಡಬಹುದು. ಇದರಲ್ಲಿ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಕೂಡ ನೀಡಿದೆ.

ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಬಹುಬೇಡಿಕೆಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ. ಈ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ.

Toyota Fortuner

ಈ ಫಾರ್ಚುನರ್ ಲೆಜೆಂಡರ್ 4X2 ಮಾದರಿಗೆ ಹೋಲಿಸಿದರೆ 4X4 ವೆರಿಯೆಂಟ್ ಯಾವುದೇ ವಿಶೇಷ ಬಾಹ್ಯ ಬಿಟ್‌ಗಳನ್ನು ಪಡೆಯುವುದಿಲ್ಲ. ಫಾರ್ಚುನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಟೊಯೊಟಾ ಲೆಜೆಂಡರ್ ಮರುವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ನೀಡಿರುವ ಡಿಆರ್‌ಎಲ್‌ಗಳನ್ನು ಟೊಯೊಟಾ ವಾಟರ್ ಫಾಲ್ ಡಿಆರ್‌ಎಲ್‌ಗಳು ಎಂದು ಕರೆಯಲಾಗುತ್ತದೆ.

ಇದರೊಂದಿಗೆ ಈ ಎಸ್‍ಯುವಿ ಹೆಡ್‌ಲ್ಯಾಂಪ್‌ಗಳ ಕೆಳಗೆ ಫಾಗ್ ಲ್ಯಾಂಪ್ ಗಳಿವೆ. ಇನ್ನು ಡೈನಾಮಿಕ್ ಟರ್ನ್ ಸಿಗ್ನಲ್ ಇಂಡೀಕೆಟರ್ ಗಳಿವೆ. ಫಾರ್ಚೂನರ್ ಲೆಜೆಂಡರ್ ಸುತ್ತಲೂ ಎಲ್ಇಡಿ ಲೈಟಿಂಗ್ ಹೊಂದಿದೆ. ಇನ್ನು ಇದರ ಸೈಡ್ ಪ್ರೊಫೈಲ್‌ ಬಗ್ಗೆ ಹೇಳುವುದಾದರೆ, ಇದರಲ್ಲಿ 18 ಇಂಚಿನ ಮೆಷಿನ್-ಕಟ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಲಾಗಿದೆ.

Article Published On: Wednesday, October 23, 2024, 8:30 [IST]
English summary
Toyota fortuner waiting period in october 2024 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+