Toyota: ಟೊಯೊಟಾದಿಂದ ದೊಡ್ಡ ಸಿಹಿಸುದ್ದಿ 1 ಲಕ್ಷ ರಿಯಾಯಿತಿ.. 6.86 ಲಕ್ಷಕ್ಕೆ ಹೊಸ ಕಾರು!
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ನವೆಂಬರ್‌ನಲ್ಲಿಯೂ ಟೊಯೊಟಾದ ಜನಪ್ರಿಯ ಕಾರುಗಳಾದ ಗ್ಲಾನ್ಜಾ ಮತ್ತು ಟೈಸರ್ ಭಾರೀ ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಂಗಳೂರಿನಲ್ಲಿ ಆಯ್ದ ಟೊಯೊಟಾ ಡೀಲರ್‌ಶಿಪ್‌ಗಳಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿರುವ ಗ್ಲಾನ್ಜಾ (Glanza) ಬರೋಬ್ಬರಿ ರೂ.1 ಲಕ್ಷವರೆಗೆ ರಿಯಾಯತಿ ಹೊಂದಿದೆ. ಅದೇ ರೀತಿಯಲ್ಲಿ ಕೆಲವೇ ತಿಂಗಳ ಹಿಂದೆ ಬಿಡುಗಡೆಯಾಗಿದ್ದ ಟೈಸರ್ (Taisor) ಎಸ್‌ಯುವಿ ಸರಿ ಸುಮಾರು ರೂ.30,000 ರಿಂದ ರೂ.35,000 ಡಿಸ್ಕೌಂಟ್ ಆಫರ್‌ನ್ನು ಪಡೆದಿದೆ.

ಸದ್ಯ ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ ಟೊಯೊಟಾ ಗ್ಲಾನ್ಜಾ (Toyota Glanza) ಹ್ಯಾಚ್‌ಬ್ಯಾಕ್, ಕನಿಷ್ಠ ರೂ.6.86 ಲಕ್ಷ ಮತ್ತು ಗರಿಷ್ಠ ರೂ.10 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ ಮತ್ತು ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ಈ ಗ್ಲಾನ್ಜಾ ಹ್ಯಾಚ್‌ಬ್ಯಾಕ್ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 22.35 ರಿಂದ 22.94 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರಗಳು 30.61 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತವೆ.

ನೂತನ ಟೊಯೊಟಾ ಗ್ಲಾನ್ಜಾ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕ್ರೂಸ್ ಕಂಟ್ರೋಲ್ ಎಂಜಿನ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟೊಯೊಟಾ ಟೈಸರ್ (Toyota Taisor) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ಕನಿಷ್ಠ ರೂ.7.74 ಲಕ್ಷ ಮತ್ತು ಗರಿಷ್ಠ ರೂ.13.08 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇ, ಎಸ್ ಹಾಗೂ ಎಸ್ ಪ್ಲಸ್ ಒಳಗೊಂಡಂತೆ ವಿವಿಧ ರೂಪಾಂತರಗಳೊಂದಿಗೂ ಸಿಗುತ್ತದೆ. ಈ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು.
ಈ ಟೈಸರ್ ಕಾರು 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಟೊಯೊಟಾ ಟೈಸರ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications