Toyota: ಈ ಕಾರನ್ನು ಕೇವಲ 30 ದಿನಗಳ ಬಳಿಕ ನಿಮ್ಮ ಮನೆಗೆ ತರಬಹುದು, 6 ಲಕ್ಷ ಬೆಲೆ.. 30 ಕಿ.ಮೀ ಮೈಲೇಜ್
ದೇಶದ ಪ್ರಮುಖ ಕಾರು ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ದಶಕಗಳಿಂದ ಖ್ಯಾತಿಗಳಿಸಿದೆ. ಕಂಪನಿ ಮಾರಾಟಗೊಳಿಸುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಗ್ಲಾನ್ಜಾ (Glanza) ಈ ಫೆಬ್ರವರಿ ತಿಂಗಳು ಅತ್ಯಂತ ಕಡಿಮೆ ಕಾಯುವಿಕೆ ಅವಧಿಯನ್ನು ಹೊಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಫೆಬ್ರವರಿ.1, 2024ಕ್ಕೆ ಅನ್ವಯವಾಗುವಂತೆ ಗ್ಲಾನ್ಜಾ (Glanza) ಹ್ಯಾಚ್‌ಬ್ಯಾಕ್ ಪಡೆದಿರುವ ಕಾಯುವಿಕೆ ಅವಧಿ (Waiting Period) ಬಗ್ಗೆ ವಿವರವನ್ನು ಹಂಚಿಕೊಂಡಿದೆ. ನೀವು ಈ ಕಾರಿನ ಮ್ಯಾನುವಲ್ ಮತ್ತು ಆಟೋಮೆಟಿಕ್ ರೂಪಾಂತರಗಳನ್ನು ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 1 ತಿಂಗಳ ನಂತರ ವಿತರಣೆಯಾಗಲಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟೊಯೊಟಾ ಗ್ಲಾನ್ಜಾ (Toyota Glanza), ರೂ.6.81 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇ, ಎಸ್, ಜಿ, ವಿ ರೂಪಾಂತರ, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಸೇರಿದಂತೆ 5 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಟೊಯೊಟಾ ಗ್ಲಾನ್ಜಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್ 2 ಪವರ್‌ಟ್ರೇನ್ ನೊಂದಿಗೆ ಲಭ್ಯವಿದೆ. ಇದರ 1.2 - ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್, 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

ಸಿಎನ್‌ಜಿ ಪಡೆದಿರುವ ಕಾರು ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 77.5 ಪಿಎಸ್ ಪವರ್ ಹೊರಹಾಕಲಷ್ಟೇ ಶಕ್ತವಾಗಿದ್ದು, 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಮಾತ್ರ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 22.35 - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕಿ.ಮೀ/ಕೆಜಿ ಮೈಲೇಜ್ ನೀಡುತ್ತದೆ.
ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್ - ಅಪ್ ಡಿಸ್ಪ್ಲೇ, 360 - ಡಿಗ್ರಿ ಕ್ಯಾಮೆರಾ, ರೇರ್ ಎಸಿ ವೆಂಟ್ಸ್, ಆಟೋ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ಗ್ಲಾನ್ಜಾ ಸಹ ಸುರಕ್ಷಿತ ಕಾರಾಗಿದ್ದು, 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ - ಹೋಲ್ಡ್ ಅಸಿಸ್ಟ್ ಅನ್ನು ಪಡೆದಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರಿಗೆ ಮಾರುತಿ ಸುಜುಕಿ ಬಲೆನೊ, ಹ್ಯುಂಡೈ ಐ20 ಹಾಗೂ ಟಾಟಾ ಆಲ್ಟ್ರೋಜ್ ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications