ಟೊಯೊಟಾ ಗ್ಲಾನ್ಜಾ ಫೆಸ್ಟಿವಲ್ ಲಿಮಿಟೆಡ್ ಎಡಿಷನ್‌ ಬಿಡುಗಡೆ: ಕಡಿಮೆ ಬೆಲೆ.. 5-ಸೀಟರ್, ಅಕ್ಟೋಬರ್ 31 ರವರೆಗೆ ಮಾರಾಟ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಟೈಸರ್, ಅರ್ಬನ್ ಕ್ರೂಸರ್ ಹೈರಿಡರ್, ರೂಮಿಯನ್, ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್ ಮತ್ತು ಫಾರ್ಚೂನರ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ, ಪ್ರೀಮಿಯಂ ಹ್ಯಾಚ್‌ಬ್ಯಾಕ್ ಗ್ಲಾನ್ಜಾದ ವಿಶೇಷ ಮಾದರಿಯಾದ 'ಫೆಸ್ಟಿವಲ್ ಲಿಮಿಟೆಡ್ ಎಡಿಷನ್‌'ನ್ನು ಬಿಡುಗಡೆ ಮಾಡಿದೆ. ಈ ನೂತನ ಕಾರು, ಅಕ್ಟೋಬರ್ 31 ರವರೆಗೆ ಮಾತ್ರ ಗ್ರಾಹಕರಿಗೆ ಸಿಗಲಿದೆ.

ಟೊಯೊಟಾ ಕಂಪನಿಯು ಹೊಚ್ಚ ಹೊಸ ಗ್ಲಾನ್ಜಾ ಫೆಸ್ಟಿವಲ್ ಲಿಮಿಟೆಡ್ ಎಡಿಷನ್‌ (Glanza Festival Limited Edition) ಹ್ಯಾಚ್‌ಬ್ಯಾಕ್‌ನ ವಿನ್ಯಾಸ, ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆಯಲ್ಲಿ ಅಷ್ಟಾಗಿ ಯಾವುದೇ ಬದಲಾವಣಿಗಳನ್ನು ಮಾಡಿಲ್ಲ. ಆದರೆ, ಈ ಕಾರು ಹೆಚ್ಚುವರಿಯಾಗಿ ರೂ.20,567 ಮೌಲ್ಯದ ಆಕ್ಸಸರೀಸ್ ಪ್ಯಾಕೇಜ್‌ನೊಂದಿಗೆ ಖರೀದಿಗೆ ಲಭ್ಯವಿದೆ. ಅಂದರೆ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ನ ಅಂದ ಹೆಚ್ಚಿಸಲು ಬೇಕಾಗಿರುವ ಒಂದಷ್ಟು ಅಂಶಗಳನ್ನು ಸೇರಿಸಲಾಗಿದೆ.

Toyota Glanza Festival Limited Edition Launched Available Upto October 31 2024 For Buyers

ನೂತನ ಟೊಯೊಟಾ ಗ್ಲಾನ್ಜಾ ಫೆಸ್ಟಿವಲ್ ಲಿಮಿಟೆಡ್ ಎಡಿಷನ್‌ ಕಾರು ಆಕ್ಸಸರೀಸ್ ಪ್ಯಾಕೇಜ್‌ನ ಭಾಗವಾಗಿ ಬಾಡಿ ಸೈಡ್ ಮೋಲ್ಡಿಂಗ್, ಕ್ರೋಮ್ ಬ್ಯಾಕ್ ಡೋರ್ ಗಾರ್ನಿಶ್, ಕ್ರೋಮ್ ಒವಿಆರ್‌ಎಂ ಗಾರ್ನಿಶ್, ಡೋರ್ ವಿಸರ್‌ಗಳು, 3ಡಿ ಫ್ಲೋರ್ ಮಾಟ್ಸ್, ವೆಲ್ಕಮ್ ಡೋರ್ ಲ್ಯಾಂಪ್ ಮತ್ತು ನೆಕ್ ಕುಶನ್‌ಗಳನ್ನು ಒಳಗೊಂಡಿದೆ. ಇವುಗಳು ಗ್ರಾಹಕರನ್ನು ಸೆಳೆಯುವಂತಿವೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಸಾಮಾನ್ಯ ಟೊಯೊಟಾ ಗ್ಲಾನ್ಜಾ ರೂ.6.86 ರಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಸ್, ಜಿ & ವಿ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಮತ್ತು ಸ್ಪೋರ್ಟಿನ್ ರೆಡ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳನ್ನು ಹೊಂದಿದೆ.

ಈ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಸಿಎನ್‌ಜಿ ಚಾಲಿತ ರೂಪಾಂತರವು ಇದೇ 1.2-ಲೀಟರ್ ಎಂಜಿನ್‌ನ್ನು ಹೊಂದಿದೆ. ಆದರೆ 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಟೊಯೊಟಾ ಗ್ಲಾನ್ಜಾ (Toyota Glanza) ಕಾರು ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, October 19, 2024, 14:33 [IST]
English summary
Toyota glanza festival limited edition launched available upto october 31 2024 for buyers
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+