Toyota: ಭಾರೀ ವೇಗದಲ್ಲಿ ಮುನ್ನುಗ್ಗುತ್ತಿದೆ ಟೊಯೊಟಾ.. ಫಾರ್ಚೂನರ್, ಇನ್ನೋವಾಗಳಿಗೆ ಮುಗಿಬಿದ್ದ ಗ್ರಾಹಕರು!
ದೇಶದ ಪ್ರಮುಖ ಕಾರು ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಜನಮನ್ನಣೆ ಗಳಿಸಿದೆ. ಶುಕ್ರವಾರ ಫೆಬ್ರವರಿ ತಿಂಗಳ ಮಾರಾಟ ವರದಿಯನ್ನು ಪ್ರಕಟಗೊಂಡಿದ್ದು, ಕಂಪನಿಯು ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಕಳೆದ ತಿಂಗಳು (ಫೆಬ್ರವರಿ - 2024) ಟೊಯೊಟಾ ಕಂಪನಿಯು ಒಟ್ಟು 25,220 ಯುನಿಟ್ ವಾಹನಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಗೆ ಹೋಲಿಕೆ ಮಾಡಿದರೆ (15,685 ಯುನಿಟ್) ವರ್ಷದಿಂದ ವರ್ಷಕ್ಕೆ ಶೇಕಡ 61% ಪ್ರಗತಿ ಸಾಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ 23,300 ಯುನಿಟ್ ವಾಹನಗಳು ಮಾರಿದ್ದು, ವಿದೇಶಗಳಿಗೆ 1,920 ಯುನಿಟ್ ರಫ್ತು ಮಾಡಿದೆ.

ಟೊಯೊಟಾ ಈ ಮಟ್ಟದಲ್ಲಿ ಬೆಳವಣಿಗೆ ಕಾಣಲು ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್ ಹಾಗೂ ಫಾರ್ಚೂನರ್ ಕಾರುಗಳ ಮಾರಾಟವು ಪ್ರಮುಖ ಕಾರಣವಾಗಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ 50,000 ಯುನಿಟ್ ಇನ್ನೋವಾ ಹೈಕ್ರಾಸ್ (Innova Hycross) ಎಂಪಿವಿ ಮಾರಾಟಗೊಳಿಸುವ ಮೂಲಕ ಟೊಯೊಟಾ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿತ್ತು. 2022ರ ನವೆಂಬರ್‌ನಲ್ಲಿ ಇನ್ನೋವಾ ಹೈಕ್ರಾಸ್ ಬಿಡುಗಡೆಗೊಂಡಿತ್ತು.
ಸದ್ಯ ಭಾರತದಲ್ಲಿ ಟೊಯೊಟಾ ಮಾರಾಟಗೊಳಿಸುವ ವಿವಿಧ ಕಾರುಗಳ ಬಗ್ಗೆ ಮಾನತಾಡುವುದಾದರೆ, ಕಂಪನಿ ಜನಪ್ರಿಯ ಕಾರಾಗಿರುವ ಇನ್ನೋವಾ ಹೈಕ್ರಾಸ್ ರೂ.19.77 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 2-ಲೀಟರ್ ಹೈಬ್ರಿಡ್, 2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ, ರೂ.9.99 ಲಕ್ಷದಿಂದ ರೂ.26.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್, ಹಿಲ್-ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್ ಅನ್ನು ಪಡೆದಿದೆ.
ಟೊಯೊಟಾ ಫಾರ್ಚುನರ್ ಫುಲ್-ಸೈಜ್ ಎಸ್‌ಯುವಿಯಾಗಿದ್ದು, ರೂ.33.44 ಲಕ್ಷದಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್, 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 10.0 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟೊಯೊಟಾ ಅತ್ಯಂತ ಕಡಿಮೆ ಬೆಲೆಗೆ ರೂಮಿಯನ್ (Rumion) ಎಂಪಿವಿಯನ್ನು ಮಾರಾಟಗೊಳಿಸುತ್ತದೆ. ಇದು ರೂ.10.29 ಲಕ್ಷದಿಂದ ರೂ.13.68 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, ಪೆಟ್ರೋಲ್ ರೂಪಾಂತರಗಳು 20.51 ಕೆಎಂಪಿಎಲ್ ವರೆಗೆ, ಸಿಎನ್‌ಜಿ ರೂಪಾಂತರ 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಇವು ಮಾತ್ರವಲ್ಲದೆ, ಟೊಯೊಟಾ (Toyota) ದೇಶೀಯ ಮಾರುಕಟ್ಟೆಯಲ್ಲಿ ಗ್ಲಾನ್ಜಾ (Glanza), ಅರ್ಬನ್ ಕ್ರೂಸರ್ ಹೈರಿಡರ್ (Urban Cruiser Hyryder) ಸೇರಿದಂತೆ ವಿವಿಧ ಕಾರುಗಳನ್ನು ಮಾರುತ್ತದೆ. ವಿಶೇಷವಾಗಿ ಕರ್ನಾಟಕದ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಟೊಯೊಟಾ ಉತ್ಪಾದನಾ ಘಟನಾವನ್ನು ಹೊಂದಿದ್ದು, ಇಲ್ಲಿ ತಯಾರಾಗುವ ವಾಹನಗಳು ದೇಶ, ವಿದೇಶದಲ್ಲಿ ಮಾರಾಟವಾಗುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications