'ಬಾಹುಬಲಿ' ಟೊಯೊಟಾ ಪಿಕ್‌ಟಪ್‌ ಟ್ರಕ್‌ಗೆ ಮನಸೋತು ಶೋರೂಂ ಎದುರು ಸಾಲುಗಟ್ಟಿ ನಿಂತ ಜನ!

ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ (Toyota) ದಶಕಗಳಿಂದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮನೆಮಾತಾಗಿದೆ. ಕಂಪನಿ ಮಾರಾಟಗೊಳಿಸುವ ಇನ್ನೋವಾ, ರೂಮಿಯನ್ ಸೇರಿದಂತೆ ಇತರೆ ಕಾರುಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಅದರಲ್ಲೂ ಟೊಯೊಟಾ ಕಂಪನಿಯು ಹೈಲಿಕ್ಸ್‌ ಪಿಕ್‌ಟಪ್‌ ಟ್ರಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿ ಆಫ್-ರೋಡ್ ಮತ್ತು ಕ್‌ಟಪ್‌ ಟ್ರಕ್ ಪ್ರೇಮಿಗಳನ್ನು ಸೆಳೆಯುವಲ್ಲಿ ಯಶಸ್ಬಿಯಾದರು. ಟೊಯೊಟಾ ಹೈಲಿಕ್ಸ್‌ (Toyota Hilux) ಪಿಕ್‌ಟಪ್‌ ಟ್ರಕ್ನ ಕಳೆದ ತಿಂಗಳಿನ ಮಾರಾಟ ವರದಿಯನ್ನು ಬಹಿರಂಗವಾಗಿದೆ.

ಈ ವರದಿ ಪ್ರಕಾರ 2024ರ ಅಕ್ಟೋಬರ್ ತಿಂಗಳಿನಲ್ಲಿ ಹೈಲಿಕ್ಸ್‌ ಪಿಕ್‌ಟಪ್‌ ಟ್ರಕ್ನ 342 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಹೈಲಿಕ್ಸ್‌ ಪಿಕ್‌ಟಪ್‌ ಟ್ರಕ್‌ನ 181 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.89 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ಟೊಯೊಟಾ ಹೈಲಿಕ್ಸ್‌ ಪಿಕ್‌ಟಪ್‌ ಟ್ರಕ್ ಮಾದರಿಯು ಸ್ಟ್ಯಾಂಡರ್ಡ್ (Standard) ಹಾಗೂ ಹೈ (High) ಎಂಬ 2 ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

Toyota Hilux

ಟೊಯೊಟಾ ಹೈಲಿಕ್ಸ್‌ ಪಿಕ್-ಅಪ್ ಟ್ರಕ್ ಆಗಿದ್ದರೂ 5 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದಾಗಿದೆ. ಈ ಪಿಕ್-ಅಪ್ ಟ್ರಕ್ ವಿನ್ಯಾಸದ ದೃಷ್ಟಿಯಿಂದ ಕೂಡ ಅತ್ಯುತ್ತಮವಾಗಿದ್ದು, ಮುಂಭಾಗ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, ದೊಡ್ಡದಾದ ಗ್ರಿಲ್, ಎಲ್ಇಡಿ ಫಾಗ್ ಲ್ಯಾಂಪ್ಸ್ ಹೊಂದಿದೆ. ಜೊತೆಗೆ 18 - ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವೀಲ್ಸ್, ಆಕರ್ಷಕ ಡೋರ್ ಹ್ಯಾಂಡಲ್‌ನ್ನು ಪಡೆದಿದೆ. ಹಿಂಭಾಗದ ವಿನ್ಯಾಸವು ಚೆನ್ನಾಗಿದ್ದು, ಅತ್ಯಾಧುನಿಕ ಟೈಲ್‌ಗೇಟ್‌ನ್ನು ಒಳಗೊಂಡಿದೆ.

ಟೊಯೊಟಾ ಹೈಲಿಕ್ಸ್‌, ಫಾರ್ಚುನರ್ ಎಸ್‌ಯುವಿ ರೀತಿಯಲ್ಲಿಯೇ ವೈಶಿಷ್ಟ್ಯ (Features)ಗಳನ್ನು ಪಡೆದಿದೆ. 8 - ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ ಪುಶ್ - ಬಟನ್ ಸ್ಟಾರ್ಟ್/ ಸ್ಟಾಪ್, ಡುಯಲ್ - ಝೋನ್ ಆಟೋ ಕ್ಲೈಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

Toyota Hilux

ಇದರೊಂದಿಗೆ 7 ಏರ್‌ಬ್ಯಾಗ್‌, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಬ್ರೇಕ್ ಅಸಿಸ್ಟ್, ಫ್ರಂಟ್, ರೇರ್ ಪಾರ್ಕಿಂಗ್ ಸೇನಾರ್ಸ್, ರಿವರ್ಸಿಂಗ್ ಕ್ಯಾಮೆರಾನಂತಹ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿದೆ. ಇನ್ನು ಈ ಟೊಯೊಟಾ ಹೈಲಿಕ್ಸ್ ಪಿಕ್‌ಟಪ್‌ ಟ್ರಕ್ ಮಾದರಿಯು ಭರ್ಜರಿ ಬೇಡಿಕೆಯೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಟೊಯೊಟಾ ಹೈಲಿಕ್ಸ್ ಮಾದರಿಯು ಎಮೋಷನಲ್ ರೆಡ್, ವೈಟ್ ಪರ್ಲ್ ಕ್ರಿಸ್ಟಲ್ ಶೈನ್, ಸೂಪರ್ ವೈಟ್ ಒಳಗೊಂಡಂತೆ 5 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಟೊಯೊಟಾ ಹೈಲಿಕ್ಸ್‌, 2.8 - ಲೀಟರ್ ಟರ್ಬೊ ಡಿಸೇಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. 6 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಮಾದರಿ 204 PS ಗರಿಷ್ಠ ಪವರ್, 420 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಪಡೆದಿರುವ ಮಾದರಿಯು 204 PS ಪವರ್, 500 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸುರಕ್ಷತೆಯಲ್ಲಿಯೂ ಈ ಹೈಲಿಕ್ಸ್‌ ಪಿಕ್-ಅಪ್ ಟ್ರಕ್ ಸರಿ ಸಾಟಿಯೇ ಇಲ್ಲ ಎಂದು ಹೇಳಬಹುದು. ಈ ಟೊಯೊಟಾ ಹಿಲಕ್ಸ್ 12 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, November 24, 2024, 15:00 [IST]
English summary
Toyota hilux sales in october 2024 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+