Toyota Cars: ಸದ್ದಿಲ್ಲದೇ ಟೊಯೊಟಾದಿಂದ ಈ ಜನಪ್ರಿಯ ಕಾರುಗಳು ದರ ಹೆಚ್ಚಳ

ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಟೊಯೊಟಾ (Toyota) ಗುರುತಿಸಿಕೊಂಡಿದೆ. 2024ರ ವರ್ಷಾರಂಭದಲ್ಲಿಯೇ ಜನಪ್ರಿಯ ಇನ್ನೋವಾ, ಅರ್ಬನ್ ಕ್ರೂಸರ್ ಹೈರಿಡರ್ ಬೆಲೆಯನ್ನು ಹೆಚ್ಚಿಸಿದೆ. ಈ ಮೂಲಕ ತನ್ನ ಗ್ರಾಹಕರ ಜೇಬಿಗೆ ಒಂದಷ್ಟು ಕತ್ತರಿ ಹಾಕಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೊದಲಿಗೆ ಬಹುಬೇಡಿಕೆಯ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ದರ ಏರಿಕೆ ಬಗ್ಗೆ ಮಾತನಾಡೋಣ. ಇದರ ಆರಂಭಿಕ ಆವೃತ್ತಿ ಜಿಎಕ್ಸ್ (GX) ಬೆಲೆ ರೂ.10,000 ಏರಿಕೆಯಾಗಿದ್ದು, ಉಳಿದಂತೆ ಎಲ್ಲ ರೂಪಾಂತರಗಳ ದರ ರೂ.42,000ವರೆಗೆ ಹೆಚ್ಚಳವಾಗಿದೆ. ಬೆಲೆ ಏರಿಕೆಯಾಗಿರುವುದರಿಂದ ಇನ್ನೋವಾ ಹೈಕ್ರಾಸ್, ರೂಪಾಂತರಗಳಿಗೆ ಅನುಗುಣವಾಗಿ ರೂ.19.77- ರೂ.30.68 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ.

Toyota Cars: ಸದ್ದಿಲ್ಲದೇ ಟೊಯೊಟಾದಿಂದ ಈ ಜನಪ್ರಿಯ ಕಾರುಗಳು ದರ ಹೆಚ್ಚಳ

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ದರಗಳು ಸಹ ಹೆಚ್ಚಳಗೊಂಡಿದೆ. ಜಿಕ್ಸ್ ರೂಪಾಂತರ ಹೊರತುಪಡಿಸಿ, ವಿಎಕ್ಸ್ ಹಾಗೂ ಝಡ್ಎಕ್ಸ್ ರೂಪಾಂತರಗಳ ಬೆಲೆ ರೂ.25,000 ದರ ಏರಿಕೆಯಾಗಿದ್ದು, ಈ ಮೂಲಕ ಇನ್ನೋವಾ ಕ್ರಿಸ್ಟಾ ಎಂಪಿವಿ ರೂ.19,99,000 ದಿಂದ ರೂ. 26,05,000 ಎಕ್ಸ್ ಶೋರೂಂ ದರವನ್ನು ಪಡೆದಿದೆ.

ಇನ್ನೋವಾ ಹೈಕ್ರಾಸ್ (Innova Hycross), ಕ್ರಿಸ್ಟಾ (Crysta) ಜೊತೆಯೆಲ್ಲಿ ಪ್ರಮುಖ ಎಸ್‌ಯುವಿ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder), ಬೆಲೆಯೂ ಏರಿಕೆಯಾಗಿದ್ದು, ಒಟ್ಟು 28,000ವರೆಗೆ ದರ ಅಧಿಕಗೊಂಡಿದೆ. ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ದುಬಾರಿಯಾಗಿರುವುದರಿಂದ ಆರಂಭಿಕ ಬೆಲೆ 11.14 ಲಕ್ಷವಾಗಿದೆ (ಎಕ್ಸ್ ಶೋರೂಂ).

Toyota Cars: ಸದ್ದಿಲ್ಲದೇ ಟೊಯೊಟಾದಿಂದ ಈ ಜನಪ್ರಿಯ ಕಾರುಗಳು ದರ ಹೆಚ್ಚಳ

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು 7, 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 2.0-ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 2.0-ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಜೊತೆಯಲ್ಲಿ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, 21 kmpl ಮೈಲೇಜ್ ನೀಡುತ್ತದೆ.

ಇನ್ನೋವಾ ಹೈಕ್ರಾಸ್, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

Toyota Cars: ಸದ್ದಿಲ್ಲದೇ ಟೊಯೊಟಾದಿಂದ ಈ ಜನಪ್ರಿಯ ಕಾರುಗಳು ದರ ಹೆಚ್ಚಳ

ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಬಗ್ಗೆ ಮಾತನಾಡುವುದಾದರೆ, ಇದು 2.4 - ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 150 PS ಪವರ್ 343 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ವೈಟ್ ಪರ್ಲ್ ಕ್ರಿಸ್ಟಲ್ ಶೈನ್, ಸೂಪರ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಈ ಇನ್ನೋವಾ ಕ್ರಿಸ್ಟಾ, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ. ಸುರಕ್ಷತೆ ಸಲುವಾಗಿ , 7 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ABS (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಹೊಂದಿದೆ.

Toyota Cars: ಸದ್ದಿಲ್ಲದೇ ಟೊಯೊಟಾದಿಂದ ಈ ಜನಪ್ರಿಯ ಕಾರುಗಳು ದರ ಹೆಚ್ಚಳ

ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ (ನಿಯೋ ಡ್ರೈವ್) 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೂ ಲಭ್ಯವಿದೆ.

ಈ ಅರ್ಬನ್ ಕ್ರೂಸರ್ ಹೈರಿಡರ್, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌, ಸ್ಮಾರ್ಟ್‌ಫೋನ್ ಮತ್ತು ಸ್ಮಾರ್ಟ್‌ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸೇಫ್ಟಿಗಾಗಿ 6 ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿದೆ.

Article Published On: Wednesday, January 3, 2024, 16:36 [IST]
English summary
Toyota innova crysta innova hycross urban cruiser hyryder price hike india details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+