ಯಾವುದೇ ಕಾರು ಬಂದರೂ ಇನೋವಾ ಕ್ರಿಸ್ಟಾವನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಈ ಕಾರಿಗಾಗಿ ಕ್ಯೂ ನಿಂತ ಜನ!

ಟೊಯೊಟಾ ಇನೋವಾ ಕಾರು ಬಿಡುಗಡೆಯಾದಗಿನಿಂದಲೂ ಬಹುಬೇಡಿಕೆಯ ಎಂಪಿವಿಯಾಗಿದೆ. ಈ ಕಾರಿಗೆ ಸರಿಯಾದ ಪೈಪೋಟಿಗೆ ಯಾವುದು ಇಲ್ಲ ಎಂದು ಹೇಳಬಹುದು. ಟೋಯೊಟಾ ಇನೋವಾ ಲಕ್ಷಾಂತರ ಕಿ.ಮೀ ಚಲಿಸಿದರೂ ಎಂಜಿನ್ ಉತ್ತಮ ಸ್ಥಿತಿಯಲ್ಲಿರುತ್ತದೆ. ಅಲ್ಲದೇ ಟೊಯೊಟಾ ಇನೋವಾ ಉತ್ತಮ ಫ್ಯಾಮಿಲಿ ಕಾರ್ ಆಗಿದೆ. ನಂತರದಲ್ಲಿ ಬಂದ ಇನೋವಾ ಕ್ರಿಸ್ಟಾ ಎಂಪಿವಿ ಕೂಡ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಈ ಜನಪ್ರಿಯ ಟೂಯೊಟಾ ಇನೋವಾ ಕ್ರಿಸ್ಟಾ (Toyota Innova Crysta) ಎಂಪಿವಿ G, GX, GX+, VX ಮತ್ತು ZX ಎಂಬ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ.

ಟೊಯೊಟಾ ದೇಶೀಯ ಮಾರುಕಟ್ಟೆಯಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆ, ಕಳೆದ ತಿಂಗಳು (ಅಕ್ಟೋಬರ್ - 2024) ಸರಿ ಸುಮಾರು 28,138 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 20,542 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 37% ಬೆಳವಣಿಗೆಯಾಗಿದೆ. ಟೊಯೊಟಾ ಕಂಪನಿಯು ಈ ಪರಿಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಇನ್ನೋವಾ ಎಂಪಿವಿ ಪ್ರಮುಖವಾದ ಕಾರಣವಾಗಿವೆ.

Toyota Innova Crysta

ಟೊಯೊಟಾ ಕಂಪನಿ ಮಾರಾಟಗೊಳಿಸುವ ಇನ್ನೋವಾ ಕ್ರಿಸ್ಟಾ ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದ್ದು, ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿದೆ. ಅಕ್ಟೋಬರ್‌ನಲ್ಲಿ 11,007 ಯುನಿಟ್ ಇನ್ನೋವಾ ಕಾರುಗಳನ್ನು ದೇಶೀಯ ಗ್ರಾಹಕರು ಖರೀದಿ ಮಾಡಿದ್ದಾರೆ. 2023ರ ಅಕ್ಟೋಬರ್‌ ತಿಂಗಳಲ್ಲಿ ಮಾರಲಾಗಿದ್ದ 8,183 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) 35% ಬೆಳವಣಿಯಾಗಿದೆ.

ಇನ್ನು ಈ ಊಇನೋವಾ ಕ್ರಿಸ್ಟಾ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿರುವುದರಿಂದ ಇದಕ್ಕೆ ಕಾಯುವಿಕೆ ಅವಧಿ ಕೂಡ ಹೊಂದಿದೆ. ಈ ಇನೋವಾ ಕ್ರಿಸ್ಟಾ ಕಾರಿಗೆ 3 ರಿಂದ 4 ತಿಂಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ. 2005ರಲ್ಲಿ ಹೆಚ್ಚು ಜನಪ್ರಿಯವಾದ ಕ್ವಾಲಿಸ್ ಅನ್ನು ಬದಲಾಯಿಸಿ ಪ್ರೀಮಿಯಂ ಎಂಪಿವಿಯಾಗಿ ಟೊಯೊಟಾ ಇನೋವಾ ಕಾರನ್ನು ಪರಿಚಯಿಸಿದರು. ಅಂದಿನಿಂದ ಇಂದಿನವರೆಗೂ ಈ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿದೆ.

Toyota Innova Crysta

ಇದೇ ಕಾರಣದಿಂದಾಗಿ ಟೊಯೊಟಾ ಕಂಪನಿಯು ಇನ್ನೋವಾ ಕ್ರಿಸ್ಟಾವನ್ನು ಸ್ಥಗಿತಗೊಳಿಸಿ ನಂತರ ಡೀಸೆಲ್ ಎಂಜಿನ್ ನೊಂದಿಗೆ ಕಾರನ್ನು ಮರಳಿ ತರಲಾಯಿತು. ಈ ಟೊಯೊಟಾ ಇನೋವಾ ಕ್ರಿಸ್ಟಾ ಭಾರತೀಯರ ಮೆಚ್ಚಿದ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ಈ ನೂತನ ಟೂಯೊಟಾ ಇನ್ನೋವಾ ಕ್ರಿಸ್ಟಾ ರೂ.19.99 ರಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 7, 8 ಸೀಟುಗಳ ಕಾನ್ಫಿಗರೇಶನ್‌ಗಳನ್ನು ಹೊಂದಿದೆ.

ಈ ಜನಪ್ರಿಯ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ 2.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಅನ್ನು ಆರ್‌ಡಿಇ ಹೊರಸೂಸುವಿಕೆ ಮಾನದಂಡಗಳನ್ನು ಪೂರೈಸುತ್ತದೆ ಎಂದು ಕಾರು ತಯಾರಕರು ಖಚಿತಪಡಿಸಿದ್ದಾರೆ. ಈ ಎಂಜಿನ್ 147.9 ಬಿಹೆಚ್‍ಪಿ ಪವರ್ ಮತ್ತು 343 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

Toyota Innova Crysta

ಇನೋವಾ ಕ್ರಿಸ್ಟಾ ಎಂಪಿವಿಯು ಇಕೋ ಮತ್ತು ಪವರ್ ಎಂಬ ಎರಡು ಡ್ರೈವ್ ಮೋಡ್‌ಗಳನ್ನು ಒಳಗೊಂಡಿದೆ. ಇನೋವಾ ಕ್ರಿಸ್ಟಾ ಕಾರಿನ ZX ರೂಪಾಂತರದಲ್ಲಿ 7-ಸೀಟುಗಳ ಲೇಔಟ್‌ನಲ್ಲಿ 8-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹೊಂದಿದೆ. ಈ ಕಾರಿನಲ್ಲಿ ಹೀಟ್ ರಿಜೆಕ್ಟಿಂಗ್ ಫ್ರಂಟ್ ಮತ್ತು ಸೈಡ್ ಗ್ಲಾಸ್, 2 ಎನ್‌ಡಿ ರೋ ಆರ್ಮ್‌ರೆಸ್ಟ್, 'ಕ್ರಿಸ್ಟಾ' ಚಿಹ್ನೆಯೊಂದಿಗೆ ಸಜ್ಜುಗೊಳಿಸಲಾದ ಬ್ಲ್ಯಾಕ್ ಅಥವಾ ಕ್ಯಾಮೆಲ್ ಟ್ಯಾನ್ ಲೆದರ್ ಸೀಟ್‌ಗಳಂತಹ ಫೀಚರ್ಸ್ ಗಳನ್ನು ಹೊಂದಿವೆ.

ಇನ್ನೋವಾ ಕ್ರಿಸ್ಟಾದ G ಎಂಬ ಮೂಲ ರೂಪಾಂತರದಲ್ಲಿ 7 ಮತ್ತು 8-ಸೀಟುಗಳ ವಿನ್ಯಾಸದಲ್ಲಿ ಮುಂಭಾಗದ ಪ್ರತ್ಯೇಕ ಸೀಟುಗಳು ಮತ್ತು ಸ್ಲೈಡ್ ಮತ್ತು ರಿಕ್ಲೈನ್ ಫಂಕ್ಷನ್ ನೊಂದಿಗೆ ಬಂದಿದೆ. ಇದು ಬ್ಲ್ಯಾಕ್ ಲೈನ್ ನೊಂದಿಗೆ ಇನ್‌ಸ್ಟ್ರುಮೆಂಟ್ ಪೇನ್, ಡ್ರೈವರ್ ಮಾಹಿತಿಯೊಂದಿಗೆ ಡಾಟ್ ಟೈಪ್ MID, 4 ಸ್ಪೀಕರ್‌ಗಳು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಅನ್ನು ಒಳಗೊಂಡಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ VX ರೂಪಾಂತರದಲ್ಲಿ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಸ್ಟೀರಿಂಗ್ ವೀಲ್, 6-ಸ್ಪೀಕರ್‌ಗಳು, ಸೀಟ್ ಬ್ಯಾಕ್ ಟೇಬಲ್, ಕ್ರೂಸ್ ಕಂಟ್ರೋಲ್, ಸ್ಪೀಡ್ & ಇಂಪ್ಯಾಕ್ಟ್ ಸೆನ್ಸಿಂಗ್ ಡೋರ್ ಅನ್‌ಲಾಕ್, 1 USB ಫಾಸ್ಟ್ ಚಾರ್ಜಿಂಗ್ ಪವರ್, MID ಮುಂಭಾಗದ ಕ್ಲಿಯರೆನ್ಸ್ ಸೋನಾರ್, Isofix X2 ಮುಂತಾದ ಫೀಚರ್ಸ್ ಗಳನ್ನು ಹೊಂದಿವೆ.

ಇದರೊಂದಿಗೆ ಟೆಥರ್ ಆಂಕರ್, ಸೈರನ್‌ನೊಂದಿಗೆ ಆಂಟಿ-ಥೆಫ್ಟ್ ಸಿಸ್ಟಮ್ ಇಮೊಬಿಲೈಸರ್, ಅಲ್ಟ್ರಾಸಾನಿಕ್ ಮತ್ತು ಗ್ಲಾಸ್ ಬ್ರೇಕ್ ಸೆನ್ಸಾರ್, TFT MID ಯುನಿಟ್, ಸಿಲ್ವರ್ ಮತ್ತು ವುಡ್ ಫಿನಿಶ್‌ನೊಂದಿಗೆ ಯುರೆಥೇನ್‌ನೊಂದಿಗೆ ಸ್ಟೀರಿಂಗ್, ಆಟೋಮ್ಯಾಟಿಕ್ LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಎಲ್ಇಡಿ ಕ್ಲಿಯರೆನ್ಸ್ ಲ್ಯಾಂಪ್ ಅನ್ನು ಹೊಂದಿದೆ. ಈ ಎಂಪಿವಿಯು ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್, ಅವಂತ್-ಗಾರ್ಡ್ ಕಂಚು, ಸಿಲ್ವರ್ ಮತ್ತು ವೈಟ್ ಪರ್ಲ್ ಕ್ರಿಸ್ಟಲ್ ಶೈನ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

More from DriveSpark

Article Published On: Wednesday, November 13, 2024, 19:09 [IST]
English summary
Toyota innova crysta sales in october 2024 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+