ಭಾರತೀಯರ ಮೆಚ್ಚಿನ ಫ್ಯಾಮಿಲಿ ಕಾರ್ ಟೊಯೊಟಾ ಇನೋವಾ ಕ್ರಿಸ್ಟಾ ನಿಮಗೆ ಬೇಕು ಅಂದ್ರೆ ಕಾಯಲೇಬೇಕು!

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ದೇಶಿಯ ಮಾರುಕಟ್ಟೆಯಲ್ಲಿ ಟೂಯೊಟಾ ಇನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಯನ್ನು ಈಗಲೂ ಭರ್ಜರಿಯಾಗಿ ಮಾರಾಟ ಮಾಡುತ್ತಿದೆ. ಈ ಜನಪ್ರಿಯ ಟೂಯೊಟಾ ಇನೋವಾ ಕ್ರಿಸ್ಟಾ ಎಂಪಿವಿ G, GX, GX+, VX ಮತ್ತು ZX ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿರುವುದರಿಂದ ಇದಕ್ಕೆ ಕಾಯುವಿಕೆ ಅವಧಿ (Waiting Period) ಕೂಡ ಹೊಂದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

2005ರಲ್ಲಿ ಹೆಚ್ಚು ಜನಪ್ರಿಯವಾದ ಕ್ವಾಲಿಸ್ ಅನ್ನು ಬದಲಾಯಿಸಿ ಪ್ರೀಮಿಯಂ ಎಂಪಿವಿಯಾಗಿ ಟೊಯೊಟಾ ಇನೋವಾ ಕಾರನ್ನು ಪರಿಚಯಿಸಿದರು. ಅಂದಿನಿಂದ ಇಂದಿನವರೆಗೂ ಈ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿದೆ. ಇದೇ ಕಾರಣದಿಂದ ಟೊಯೊಟಾ ಕಂಪನಿಯು ಡೀಸೆಲ್ ಎಂಜಿನ್ ನೊಂದಿಗೆ ಇನ್ನೋವಾ ಕ್ರಿಸ್ಟಾ ಕಾರನ್ನು ಮರಳಿ ತರಲಾಯಿತು. ಈ ಕಾರಿಗೆ ನಮೆಚ್ಚಿದ ಎಂಪಿವಿ ಎಂದೇ ಹೆಸರುವಾಸಿಯಾಗಿದೆ.

Toyota Innova Crysta

ಟೂಯೊಟಾ ಇನೋವಾ ಕ್ರಿಸ್ಟಾ ಕಾರಿಗೆ 3 ರಿಂದ 4 ತಿಂಗಳ ಬಳಿಕ ವಿತರಣೆ ಪಡೆಯಬಹುದು. ಈ ನೂತನ ಟೂಯೊಟಾ ಇನ್ನೋವಾ ಕ್ರಿಸ್ಟಾ ರೂ.19.99 ರಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 7, 8 ಸೀಟುಗಳ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಈ ಜನಪ್ರಿಯ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ 2.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ ಅನ್ನು ಆರ್‌ಡಿಇ ಹೊರಸೂಸುವಿಕೆ ಮಾನದಂಡಗಳನ್ನು ಪೂರೈಸುತ್ತದೆ ಎಂದು ಕಾರು ತಯಾರಕರು ಖಚಿತಪಡಿಸಿದ್ದಾರೆ. ಈ ಎಂಜಿನ್ 147.9 ಬಿಹೆಚ್‍ಪಿ ಪವರ್ ಮತ್ತು 343 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

Toyota Innova Crysta

ಈ ಟೂಯೊಟಾ ಇನೋವಾ ಕ್ರಿಸ್ಟಾ ಎಂಪಿವಿಯು ಇಕೋ ಮತ್ತು ಪವರ್ ಎಂಬ ಎರಡು ಡ್ರೈವ್ ಮೋಡ್‌ಗಳನ್ನು ಒಳಗೊಂಡಿಎ ಇನೋವಾ ಕ್ರಿಸ್ಟಾ ಕಾರಿನ ZX ರೂಪಾಂತರದಲ್ಲಿ 7-ಸೀಟುಗಳ ಲೇಔಟ್‌ನಲ್ಲಿ 8-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಅನ್ನು ಹೊಂದಿದೆ. ಟೊಯೊಟಾ ಇನೋವಾ ಕ್ರಿಸ್ಟಾ ಕಾರು 7 ಮತ್ತು 8 ಸೀಟುಗಳ ಕಾನ್ಫಿಗರೇಶನ್‌ಗಳಲ್ಲಿ ಬರಲಿದೆ.

ಹೀಟ್ ರಿಜೆಕ್ಟಿಂಗ್ ಫ್ರಂಟ್ ಮತ್ತು ಸೈಡ್ ಗ್ಲಾಸ್, 2 ಎನ್‌ಡಿ ರೋ ಆರ್ಮ್‌ರೆಸ್ಟ್, 'ಕ್ರಿಸ್ಟಾ' ಚಿಹ್ನೆಯೊಂದಿಗೆ ಸಜ್ಜುಗೊಳಿಸಲಾದ ಬ್ಲ್ಯಾಕ್ ಅಥವಾ ಕ್ಯಾಮೆಲ್ ಟ್ಯಾನ್ ಲೆದರ್ ಸೀಟ್‌ಗಳಂತಹ ಫೀಚರ್ಸ್ ಗಳನ್ನು ಹೊಂದಿವೆ. ಅದರಲ್ಲಿ ಇನ್ನೋವಾ ಕ್ರಿಸ್ಟಾದ G ಎಂಬ ಮೂಲ ರೂಪಾಂತರದಲ್ಲಿ 7 ಮತ್ತು 8-ಸೀಟುಗಳ ವಿನ್ಯಾಸದಲ್ಲಿ ಮುಂಭಾಗದ ಪ್ರತ್ಯೇಕ ಸೀಟುಗಳು ಮತ್ತು ಸ್ಲೈಡ್ ಮತ್ತು ರಿಕ್ಲೈನ್ ಫಂಕ್ಷನ್ ನೊಂದಿಗೆ ಬಂದಿದೆ.

Toyota Innova Crysta

ಇದು ಬ್ಲ್ಯಾಕ್ ಲೈನ್ ನೊಂದಿಗೆ ಇನ್‌ಸ್ಟ್ರುಮೆಂಟ್ ಪೇನ್, ಡ್ರೈವರ್ ಮಾಹಿತಿಯೊಂದಿಗೆ ಡಾಟ್ ಟೈಪ್ MID, 4 ಸ್ಪೀಕರ್‌ಗಳು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿದೆ. ಈ ಇನ್ನೋವಾ ಕ್ರಿಸ್ಟಾ ಎಂಪಿವಿಯು ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್, ಅವಂತ್-ಗಾರ್ಡ್ ಕಂಚು, ಸಿಲ್ವರ್ ಮತ್ತು ವೈಟ್ ಪರ್ಲ್ ಕ್ರಿಸ್ಟಲ್ ಶೈನ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಇನ್ನು ಇನೋವಾ ಕ್ರಿಸ್ಟಾ ಕಾರಿನ VX ರೂಪಾಂತರದಲ್ಲಿ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಸ್ಟೀರಿಂಗ್ ವೀಲ್, 6-ಸ್ಪೀಕರ್‌ಗಳು, ಸೀಟ್ ಬ್ಯಾಕ್ ಟೇಬಲ್, ಕ್ರೂಸ್ ಕಂಟ್ರೋಲ್, ಸ್ಪೀಡ್ & ಇಂಪ್ಯಾಕ್ಟ್ ಸೆನ್ಸಿಂಗ್ ಡೋರ್ ಅನ್‌ಲಾಕ್, 1 USB ಫಾಸ್ಟ್ ಚಾರ್ಜಿಂಗ್ ಪವರ್, MID ಮುಂಭಾಗದ ಕ್ಲಿಯರೆನ್ಸ್ ಸೋನಾರ್, Isofix X2 ಮುಂತಾದ ಫೀಚರ್ಸ್ ಗಳನ್ನು ಒಳಗೊಂಡಿವೆ.

ಇದರೊಂದಿಗೆ ಟೆಥರ್ ಆಂಕರ್, ಸೈರನ್‌ನೊಂದಿಗೆ ಆಂಟಿ-ಥೆಫ್ಟ್ ಸಿಸ್ಟಮ್ ಇಮೊಬಿಲೈಸರ್, ಅಲ್ಟ್ರಾಸಾನಿಕ್ ಮತ್ತು ಗ್ಲಾಸ್ ಬ್ರೇಕ್ ಸೆನ್ಸಾರ್, ಡ್ರೈವರ್;ಗೆ ಮಾಹಿತಿ ನೀಡುವ TFT MID ಯುನಿಟ್ ಅನ್ನು ಹೊಂದಿದೆ. ಇದರೊಂದಿಗೆ ಸಿಲ್ವರ್ ಮತ್ತು ವುಡ್ ಫಿನಿಶ್‌ನೊಂದಿಗೆ ಯುರೆಥೇನ್‌ನೊಂದಿಗೆ ಸ್ಟೀರಿಂಗ್, ಆಟೋಮ್ಯಾಟಿಕ್ LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಎಲ್ಇಡಿ ಕ್ಲಿಯರೆನ್ಸ್ ಲ್ಯಾಂಪ್ ಮತ್ತು ಬ್ಲ್ಯಾಕ್ ಮತ್ತು ಕ್ರೋಮ್ ಗ್ರಿಲ್ ನೊಂದಿಗೆ ಬರುತ್ತದೆ.

Article Published On: Sunday, October 20, 2024, 12:00 [IST]
English summary
Toyota innova crysta waiting period in october 2024 details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+