Toyota: ಇನ್ನೋವಾ ಹೈಕ್ರಾಸ್ ಕಾರಿಗಾಗಿ ಕ್ಯೂ ನಿಂತ ಜನರು.. 50,000 ಯುನಿಟ್ ಮಾರಾಟ, ರೂ.19 ಲಕ್ಷ ಬೆಲೆ

ಭಾರತದ ಪ್ರಸಿದ್ಧ ವಾಹನ ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಜನಮನ್ನಣೆ ಗಳಿಸಿದೆ. ಕಂಪನಿಯ ಇನ್ನೋವಾ ಸರಣಿ ಕಾರುಗಳಿಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಿಕರಿಯಾಗುತ್ತಿವೆ. ಸದ್ಯ ಇನ್ನೋವಾ ಹೈಕ್ರಾಸ್ (Innova Hycross) ಮಾರಾಟದಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಕಂಪನಿಯು 50,000 ಯುನಿಟ್ ಇನ್ನೋವಾ ಹೈಕ್ರಾಸ್ ಎಂಪಿವಿ ಮಾರುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. 2022ರ ನವೆಂಬರ್ ತಿಂಗಳಲ್ಲಿ ಬಿಡುಗಡೆಗೊಂಡ ಇನ್ನೋವಾ ಹೈಕ್ರಾಸ್ ಅಂದಿನಿಂದಲೇ ಸಖತ್ ಡಿಮ್ಯಾಂಡ್ ಪಡೆದುಕೊಂಡಿತ್ತು. ಈಗಲೂ ಹೆಚ್ಚಿನ ಸಂಖ್ಯೆಯ ಗ್ರಾಹಕರು ಈ ಎಂಪಿವಿಯನ್ನು ಬುಕ್ಕಿಂಗ್ ಮಾಡುತ್ತಿದ್ದು, ಅದಕ್ಕೆ ಕಾಯುವಿಕೆ ಅವಧಿ ಸಾಕ್ಷಿಯಾಗಿದೆ.

Toyota Innova Hycross Achieve 50,000 Units New Sales Milestone: Rs 19 Lakh Price

ಫೆಬ್ರವರಿ 1 2024ಕ್ಕೆ ಅನ್ವಯವಾಗುವಂತೆ ಟೊಯೊಟಾ, ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಇನ್ನೋವಾ ಹೈಕ್ರಾಸ್ ಎಂಪಿವಿಯ ಕಾಯುವಿಕೆ ಅವಧಿ (Waiting Period) ಕುರಿತು ವಿವರವನ್ನು ಪ್ರಕಟಿಸಿತ್ತು. ಈ ಎಂಪಿವಿಯ ಪೆಟ್ರೋಲ್ ರೂಪಾಂತರಗಳನ್ನು ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 5-6 ತಿಂಗಳ ನಂತರ ವಿತರಣೆಯಾಗಲಿವೆ. ಹೈಬ್ರಿಡ್ ರೂಪಾಂತರಗಳು 12-13 ತಿಂಗಳ ಬಳಿಕ ಗ್ರಾಹಕರ ಕೈಸೇರಲಿವೆ. ಹೆಚ್ಚಿನ ಬೇಡಿಕೆಯಿರುವುದರಿಂದ, ಝಡ್ಎಕ್ಸ್, ಝಡ್ಎಕ್ಸ್ (ಒ) ರೂಪಾಂತರಗಳ ಬುಕ್ಕಿಂಗ್‌ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ, ರೂ.19.77 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಜಿ, ಜಿಎಕ್ಸ್, ವಿಕ್ಸ್ ಸೇರಿದಂತೆ 5 ರೂಪಾಂತರ ಮತ್ತು ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ.

Toyota Innova Hycross Achieve 50,000 Units New Sales Milestone: Rs 19 Lakh Price

ವಿನ್ಯಾಸದ ದೃಷ್ಟಿಯಿಂದಲೂ ಇನ್ನೋವಾ ಹೈಕ್ರಾಸ್ ಕಾರು ಅತ್ಯಾಧುನಿಕವಾಗಿದ್ದು, 7, 8 ಆಸನ ಆಯ್ಕೆಯಲ್ಲಿ ದೊರೆಯುತ್ತದೆ. ಇದು 2-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್), 2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, ಸಿವಿಟಿ ಮತ್ತು ಇ-ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 16.13 ರಿಂದ 23.24 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್‌ನೊಂದಿಗೆ ಲಭ್ಯವಿರುವ ಇನ್ನೋವಾ ಕ್ರಿಸ್ಟಾ (Innova Crysta) ಎಂಪಿವಿ, ರೂ.19.99 ಲಕ್ಷದಿಂದ ರೂ.26.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕೇವಲ 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 150 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 343 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಇನ್ನೋವಾ ಕ್ರಿಸ್ಟಾ ಎಂಪಿವಿ ಸಹ 7, 8 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, February 23, 2024, 9:37 [IST]
English summary
Toyota innova hycross achieve 50000 units new sales milestone rs 19 lakh price
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+