Toyota: ಇನ್ನೋವಾ ಹೈಕ್ರಾಸ್ ಕಾರಿಗಾಗಿ ಕ್ಯೂ ನಿಂತ ಗ್ರಾಹಕರು.. ಈ ರೂಪಾಂತರಗಳ ಬುಕ್ಕಿಂಗ್ ಸ್ಥಗಿತ!

ದೇಶದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಇನ್ನೋವಾ ಹೈಕ್ರಾಸ್ (Innova Hycross) ಎಂವಿಪಿಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ.

ಸದ್ಯ ಗ್ರಾಹಕರು ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯನ್ನು ದೊಡ್ಡ ಪ್ರಮಾಣದಲ್ಲಿ ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆ, ಇದರ ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಮಾದರಿಗಳಾದ ಝಡ್ಎಕ್ಸ್ ಮತ್ತು ಝಡ್ಎಕ್ಸ್ (ಒ)ಗೆ ಆರ್ಡರ್ ತೆಗೆದುಕೊಳ್ಳುವುದನ್ನು ಮತ್ತೊಮ್ಮೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ತಿಂಗಳಷ್ಟೇ ಇವುಗಳ ಬುಕ್ಕಿಂಗ್‌ನ್ನು ತೆರೆಯಲಾಗಿತ್ತು. ಆದಾಗ್ಯೂ, ಉಳಿದೆಲ್ಲ ಹೈಬ್ರಿಡ್ ಆವೃತ್ತಿಗಳು ಕನಿಷ್ಠ 14 ತಿಂಗಳ ಬಳಿಕ ವಿತರಣೆಯಾಗುತ್ತವೆ.

Toyota Innova Hycross Car Get Huge demand ZX ZX O Bookings Stopped Again

ಅದೇ ರೀತಿಯಲ್ಲಿ ಇನ್ನೋವಾ ಹೈಕ್ರಾಸ್ ಕಾರಿನ ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಸರಿ ಸುಮಾರು 6 ತಿಂಗಳ ನಂತರ ಡೆಲಿವರಿಯಾಗಿತ್ತವೆ. ಇನ್ನೋವಾ ಹೈಕ್ರಾಸ್ ನಂತೆಯೇ ಡೀಸೆಲ್ ಎಂಜಿನ್‌ನೊಂದಿಗೆ ಸಿಗುವ ಇನ್ನೋವಾ ಕ್ರಿಸ್ಟಾ ಮಾದರಿಗಳು ಕೂಡ ಸ್ವಲ್ಪ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದ್ದು, 5 ತಿಂಗಳ ಬಳಿಕ ನಿಮ್ಮ ಮನೆಯನ್ನು ಸೇರುತ್ತವೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಕಾರು ನೋಡುಗರನ್ನು ತನ್ನತ್ತ ಸೆಳೆಯುವಂತಹ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಸೂಪರ್ ವೈಟ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಅತ್ಯಾಕರ್ಷಕ ಬಣ್ಣಗಳನೊಂದಿಗೆ ಸಿಗುತ್ತದೆ. ಜೊತೆಗೆ 7 ಅಥವಾ 8 ಆಸನ ವ್ಯವಸ್ಥೆಯಲ್ಲಿಯೂ ಕೂಡ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ.

ನೂತನ ಇನ್ನೋವಾ ಹೈಕ್ರಾಸ್ ಎಂಪಿವಿಯು 2.0-ಲೀಟರ್, 4-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದ್ದು, ಸಿವಿಟಿ ಗೇರ್‌ಬಾಕ್ಸ್‌ನ್ನು ಸಹ ಹೊಂದಿದೆ. ಇಂಧನ ದಕ್ಷತೆ (Fuel Efficiency) ವಿಚಾರವಾಗಿ ಮಾತನಾಡುವುದಾದರೆ, 23.24 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ABS (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಇನ್ನು ಟೊಯೊಟಾ ಇನ್ನೋವಾ ಕ್ರಿಸ್ಟಾ (Innova Crysta) ಎಂಪಿವಿ ಬಗ್ಗೆ ಹೇಳುವುದಾದರೆ, ಇದು ರೂಪಾಂತರಗಳಿಗೆ ಅನುಗುಣವಾಗಿ ರೂ.19.99 ಲಕ್ಷದಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್ ಪಡೆದಿರುವ ಈ ಕಾರು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 21, 2024, 11:32 [IST]
English summary
Toyota innova hycross car get huge demand zx zx o bookings stopped again
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+