Innova: ಟೊಯೊಟಾ ಇನ್ನೋವಾ ಹೈಕ್ರಾಸ್ ಗ್ರಾಹಕರಿಗೆ ಸಿಹಿಸುದ್ದಿ.. ಈ ಮಾದರಿಗಳ ಬುಕ್ಕಿಂಗ್ ಪುನರಾರಂಭ

ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಇನ್ನೋವಾ ಹೈಕ್ರಾಸ್ (Innova Hycross) ಎಂಪಿವಿಗಳಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ.

ಭಾರೀ ಡಿಮ್ಯಾಂಡ್ ಹಿನ್ನೆಲೆ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ರೂಪಾಂತರಗಳಾದ ಝಡ್ಎಕ್ಸ್ ಮತ್ತು ಝಡ್ಎಕ್ಸ್(ಒ) ಬುಕ್ಕಿಂಗ್ ಮಂಗಳವಾರದಿಂದ ಪುನಾರಂಭವಾಗಿದೆ. ಆಸಕ್ತ ಗ್ರಾಹಕರು, ಟೊಯೊಟಾ ಇಂಡಿಯಾ (Toyota India)ದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.50,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಈ ಎಂಪಿವಿಗಳನ್ನು ಕಾಯ್ದಿರಿಸಬಹುದು.

Toyota Innova Hycross Car ZX and ZX O Variants Bookings Reopen Details

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ, ರೂ.19.77 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ತಾತ್ಕಾಲಿಕವಾಗಿ ಬುಕ್ಕಿಂಗ್ ಪಡೆಯುವುದನ್ನು ನಿಲ್ಲಿಸಲಾಗಿದ್ದ ಝಡ್ಎಕ್ಸ್, ಝಡ್ಎಕ್ಸ್ (ಒ) ಮಾದರಿಗಳೊಂದಿಗೆ ಜಿ, ಜಿಎಕ್ಸ್, ಜಿಎಕ್ಸ್ (ಒ) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಎಂಪಿವಿ ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಜೊತೆಗೆ 7 ಅಥವಾ 8 ಆಸನ ವ್ಯವಸ್ಥೆಯಲ್ಲೂ ಸಿಗುತ್ತದೆ. ಇದರಿಂದಲೇ ಇನ್ನೋವಾ ಹೈಕ್ರಾಸ್ ಎಂಪಿವಿ ಅಧಿಕ ಸಂಖ್ಯೆಯಲ್ಲಿ ಖರೀದಿದಾರರನ್ನು ಸೆಳೆದಿದೆ.

Toyota Innova Hycross Car ZX and ZX O Variants Bookings Reopen Details

ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರು, 2.0-ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಗರಿಷ್ಠ ಪವರ್ (ಶಕ್ತಿ) ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುವ ಈ ಕಾರು, 23.24 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ಈ ಎಂಪಿವಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಟೊಯೊಟಾ ಕಂಪನಿಯು ಇನ್ನೋವಾ ಹೈಕ್ರಾಸ್ ಎಂಪಿವಿಯೊಂದಿಗೆ ಇನ್ನೋವಾ ಕ್ರಿಸ್ಟಾ (Innova Crysta) ಎಂಪಿವಿಯನ್ನು ಮಾರಾಟ ಮಾಡುತ್ತದೆ. ಇದು ರೂ.19.99 ಲಕ್ಷದಿಂದ ರೂ.26.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 150 ಪಿಎಸ್ ಪವರ್ ಮತ್ತು 343 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಈ ಟೊಯೊಟಾ ಇನ್ನೋವಾ ಕ್ರಿಸ್ಟಾ, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 2, 2024, 15:17 [IST]
English summary
Toyota innova hycross car zx and zx o variants bookings reopen details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+