Toyota: ಇನ್ನೋವಾ ಕಾರುಗಳಿಗೆ ಮುಗಿಬಿದ್ದ ಗ್ರಾಹಕ.. ZX, ZX(O) ವೇರಿಯೆಂಟ್ಸ್ ಬುಕ್ಕಿಂಗ್ ತಾತ್ಕಾಲಿಕ ಸ್ಥಗಿತ

ಭಾರತದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದ್ದು, ಇನ್ನೋವಾ ಸರಣಿ ಕಾರುಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಜನವರಿ ತಿಂಗಳು ಈ ಎಂಪಿವಿ ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ 1 ಜನವರಿ 2024ಕ್ಕೆ ಅನ್ವಯವಾಗುವಂತೆ ಇನ್ನೋವಾ ಹೈಕ್ರಾಸ್, ಕ್ರಿಸ್ಟಾ ಎಂವಿಪಿ (ಮಲ್ಟಿ ಯುಟಿಲಿಟಿ ವೆಹಿಕಲ್) ಹೊಂದಿರುವ ಕಾಯುವಿಕೆ ಅವಧಿ ಬಗ್ಗೆ ವಿವರವನ್ನು ಪ್ರಕಟಿಸಿದೆ. ಇನ್ನೋವಾ ಹೈಕ್ರಾಸ್ (Innova Hycross) ಪೆಟ್ರೋಲ್ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 5 - 6 ತಿಂಗಳು ಹಿಡಿಯುತ್ತದೆ.

Toyota: ಇನ್ನೋವಾ ಕಾರುಗಳಿಗೆ ಮುಗಿಬಿದ್ದ ಗ್ರಾಹಕ.. ZX, ZX(O) ವೇರಿಯೆಂಟ್ಸ್ ಬುಕ್ಕಿಂಗ್ ತಾತ್ಕಾಲಿಕ ಸ್ಥಗಿತ

ಅದೇ ರೀತಿಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯ ಹೈಬ್ರಿಡ್ (HYBRID) ರೂಪಾಂತರಗಳು 14 - 15 ತಿಂಗಳು ಕಾಯುವಿಕೆ ಅವಧಿಯನ್ನು ಪಡೆದಿವೆ. ಗ್ರಾಹಕರಿಂದ ವಿಪರೀತವಾಗಿ ಬೇಡಿಕೆ ಹೆಚ್ಚಾದ ಹಿನ್ನೆಲೆ, ಝಡ್ಎಕ್ಸ್ ಮತ್ತು ಝಡ್ಎಕ್ಸ್ (ಒ) ರೂಪಾಂತರಗಳ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಿಸಲಾಗಿದೆ.

ಡಿಸೇಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುವ ಇನ್ನೋವಾ ಕ್ರಿಸ್ಟಾ (Innova Crysta) ಎಂವಿಪಿ ಸಹ ಧೀರ್ಘ ಕಾಯುವಿಕೆ ಅವಧಿ (Waiting Period)ಯನ್ನು ಹೊಂದಿದೆ. ಇವತ್ತು ಈ ಕಾರನ್ನು ಕಾಯ್ದಿರಿಸಿದರೂ ಡಿಲೆವರಿಯಾಗಲು ಬರೋಬ್ಬರಿ 7 ತಿಂಗಳು ಆಗುತ್ತದೆ. ಇನ್ನೋವಾ ಎಂವಿಪಿಗಳು 7 ಅಥವಾ 8 ಆಸನ ಆಯ್ಕೆಯೊಂದಿಗೆ ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ.

Toyota: ಇನ್ನೋವಾ ಕಾರುಗಳಿಗೆ ಮುಗಿಬಿದ್ದ ಗ್ರಾಹಕ.. ZX, ZX(O) ವೇರಿಯೆಂಟ್ಸ್ ಬುಕ್ಕಿಂಗ್ ತಾತ್ಕಾಲಿಕ ಸ್ಥಗಿತ

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ರೂ.18.92 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜಿ, ಜಿಎಕ್ಸ್, ವಿಕ್ಸ್ ಒಳಗೊಂಡಂತೆ 5 ರೂಪಾಂತರ, ಗ್ಲಾಸ್ ಫ್ಲೇಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಸೇರಿದಂತೆ 7 ಬಣ್ಣಗಳೊಂದಿಗೆ ದೊರೆಯುತ್ತದೆ.

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಪವರ್ ಟ್ರೈನ್ ಬಗ್ಗೆ ಹೇಳುವುದಾದರೆ, ಇದು 2.0-ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿದೆ. ಜೊತೆಗೆ ಸಿವಿಟಿ (CVT) ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, 21 kmpl ಇಂಧನ ದಕ್ಷತೆಯನ್ನು ಹೊಂದಿದೆ.

Toyota: ಇನ್ನೋವಾ ಕಾರುಗಳಿಗೆ ಮುಗಿಬಿದ್ದ ಗ್ರಾಹಕ.. ZX, ZX(O) ವೇರಿಯೆಂಟ್ಸ್ ಬುಕ್ಕಿಂಗ್ ತಾತ್ಕಾಲಿಕ ಸ್ಥಗಿತ

ಇನ್ನೋವಾ ಹೈಕ್ರಾಸ್ ಎಂಪಿವಿ, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta), ರೂ.19.99 ಲಕ್ಷದಿಂದ ರೂ.26.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಎಂಪಿವಿ 2.4-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 150 PS ಗರಿಷ್ಠ ಪವರ್, 343 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

ಈ ಇನ್ನೋವಾ ಕ್ರಿಸ್ಟಾ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಸ್ಟಾರ್ಟ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಒಳಗೊಂಡಿದೆ.

Article Published On: Thursday, January 11, 2024, 15:29 [IST]
English summary
Toyota innova hycross crysta january 2024 waiting period revealed
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+