Toyota: ದೊಡ್ಡ ಕಾರು ಇನ್ನೋವಾಗಾಗಿ ಶೋರೂಂ ಎಡತಾಕಿದ ಗ್ರಾಹಕರು.. 8 ಜನ ಹೋಗಬಹುದು!

ಭಾರತದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಅದರಲ್ಲೂ ಕಂಪನಿಯು ದಶಕಗಳಿಂದ ಮಾರಾಟಗೊಳಿಸುತ್ತಿರುವ ಇನ್ನೋವಾ (Innova) ಎಂಪಿವಿಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದ್ದು, ಈ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಿಕರಿಯಾಗುತ್ತಿವೆ.

ಫೆಬ್ರವರಿ 1 2024ಕ್ಕೆ ಅನ್ವಯವಾಗುವಂತೆ ಟೊಯೊಟಾ ಇಂಡಿಯಾ (Toyota India), ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿಇನ್ನೋವಾ ಹೈಕ್ರಾಸ್ (Innova Hycross) ಎಂಪಿವಿ ಪಡೆದಿರುವ ಕಾಯುವಿಕೆ ಅವಧಿ (Waiting Period) ಬಗ್ಗೆ ವಿವರವನ್ನು ಬಹಿರಂಗಗೊಳಿಸಿದೆ. ಈ ಕಾರಿನ ಪೆಟ್ರೋಲ್ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 5 - 6 ತಿಂಗಳ ನಂತರ ವಿತರಣೆಯಾಗಲಿದೆ.

Toyota Innova Hycross Mpv February 2024 Waiting Period Revealed

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿ ಹೈಬ್ರಿಡ್ ರೂಪಾಂತರಗಳು ಕೊಂಚ ಅಧಿಕ ಕಾಯುವಿಕೆ ಅವಧಿಯನ್ನು ಹೊಂದಿವೆ. ಈ ಕಾರುಗಳು ಸರಿ ಸುಮಾರು 12 - 13 ತಿಂಗಳ ನಂತರ ಗ್ರಾಹಕರ ಕೈಸೇರಲಿದೆ. ಭಾರೀ ಬೇಡಿಕೆ ಬಂದ ಹಿನ್ನೆಲೆ, ಝಡ್ಎಕ್ಸ್ ಮತ್ತು ಝಡ್ಎಕ್ಸ್ (ಒ) ರೂಪಾಂತರಗಳ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ರೂ.18.92 ಲಕ್ಷದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಬ್ಲ್ಯಾಕ್ಲಿಶ್ ಅಗೆಹಾ ಗ್ಲಾಸ್ ಫ್ಲೇಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಪರ್ಲ್ ಕ್ರಿಸ್ಟಲ್ ಶೈನ್ ಸೇರಿದಂತೆ 7 ಬಣ್ಣಗಳೊಂದಿಗೆ ಲಭ್ಯವಿದೆ.

ಇನ್ನೋವಾ ಹೈಕ್ರಾಸ್ ಎಂಪಿವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಅವುಗಳೆಂದರೆ, 2 - ಲೀಟರ್ ಹೈಬ್ರಿಡ್ (ಪೆಟ್ರೋಲ್ & ಎಲೆಕ್ಟ್ರಿಕ್) ಮತ್ತು 2 - ಲೀಟರ್, ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್. ಜೊತೆಗೆ ಸಿವಿಟಿ ಹಾಗೂ ಇ-ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 16.13 ಕೆಎಂಪಿಎಲ್ ರಿಂದ 23.24 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

7, 8 ಆಸನ ಆಯ್ಕೆಯಲ್ಲಿ ಲಭ್ಯವಿರುವ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಅನ್ನು ಹೊಂದಿದೆ.

ಸುರಕ್ಷತೆ ವಿಚಾರದಲ್ಲಿಯೂ ಇನ್ನೋವಾ ಹೈಕ್ರಾಸ್ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‍ಸಿಎಪಿಯಿಂದ 5 ಸ್ಟಾರ್ ರೇಟಿಂಗ್ ಪಡೆದಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, February 7, 2024, 10:25 [IST]
English summary
Toyota innova hycross mpv february 2024 waiting period revealed
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+