Toyota: ಟೊಯೊಟಾದ ತಾಕತ್ತು.. ದಾಖಲೆ ಸಂಖ್ಯೆಯಲ್ಲಿ ಕಾರುಗಳ ಮಾರಾಟ, ಇನ್ನೋವಾ ಆಯ್ತು ಗೇಮ್ ಚೇಂಜರ್!

ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಗ್ಲಾನ್ಜಾ, ಇನ್ನೋವಾ, ರೂಮಿಯಾನ್ ಮತ್ತು ಫಾರ್ಚುನರ್ ಒಳಗೊಂಡಂತೆ ಹಲವು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಟೊಯೊಟಾ ಕಂಪನಿಯು ಶುಕ್ರವಾರ ಅಕ್ಟೋಬರ್ (2024) ತಿಂಗಳ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದೆ. ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆ, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮವಾದ ಪ್ರಗತಿ ಸಾಧಿಸಿದೆ.

ಕಳೆದ ತಿಂಗಳು (ಅಕ್ಟೋಬರ್ - 2024) ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಬರೋಬ್ಬರಿ 30,845 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲು ಯಶಸ್ವಿಯಾಗಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 21,879 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 41% ಬೆಳವಣಿಗೆ ಸಾಧಿಸಿದೆ. ಕಂಪನಿ ಈ ಪರಿಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಲು 'ಇನ್ನೋವಾ' ಎಂಪಿವಿಗಳು ಪ್ರಮುಖ ಕಾರಣವಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

Toyota October 2024 Sales Report 41 Percent Growth Innova Become Game Changer

2024ರ ಹಣಕಾಸಿನ ವರ್ಷದಲ್ಲಿ ಟೊಯೊಟಾ 1,93,468 ಯುನಿಟ್ ಕಾರುಗಳನ್ನು ಮಾರಾಟ ಮಾಡಿ ಶೇಕಡ 33% ಪ್ರಗತಿ ಕಂಡಿದೆ. ಈ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ಸಹ ಸಾಧಿಸಿದೆ. ಉತ್ಪಾದನೆ ಹೆಚ್ಚಳಗೊಂಡಿದ್ದರಿಂದ ಭಾರಿ ಸಂಖ್ಯೆಯಲ್ಲಿ ಕಾರುಗಳನ್ನು ಗ್ರಾಹಕರಿಗೆ ವಿತರಿಸಲು ಕಂಪನಿಗೆ ಸಾಧ್ಯವಾಗಿದೆ. 2023ರ ಹಣಕಾಸಿನ ವರ್ಷದಲ್ಲಿ 1,45,818 ಯುನಿಟ್ ಕಾರುಗಳನ್ನು ಮಾತ್ರ ಮಾರಾಟ ಮಾಡಿತ್ತು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟೊಯೂಟಾ ಹತ್ತಾರು ಕಾರುಗಳನ್ನು ಮಾರಾಟ ಮಾಡುತ್ತಿದೆ. ಅವುಗಳಲ್ಲಿ 'ಇನ್ನೋವಾ' ಜನಪ್ರಿಯ ಎಂಪಿವಿ ಆಗಿದ್ದು, 2 ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನೋವಾ ಹೈಕಾಸ್ (Innova Hycross) ರೂ.19.77 ರಿಂದ ರೂ.30.98 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಹೈಬ್ರಿಡ್ (ಪೆಟ್ರೋಲ್ & ಎಲೆಕ್ಟ್ರಿಕ್) ಹಾಗೂ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಪಡೆದಿದೆ.

Toyota October 2024 Sales Report 41 Percent Growth Innova Become Game Changer

ಇನ್ನೋವಾ ಕ್ರಿಸ್ಟಾ (Innova Crysta) ಬಗ್ಗೆ ಹೇಳುವುದಾದರೆ, ಇದು ರೂ.19.99 ರಿಂದ ರೂ.26.55 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2.4-ಲೀಟರ್ ಡಿಸೇಲ್ ಎಂಜಿನ್‌ & 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 7/ 8 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಲಭ್ಯವಿದೆ.

ಟೊಯೊಟಾ ರೂಮಿಯನ್ ಎಂಪಿವಿ ಕೂಡ ಪ್ರಮಖ ಎಂಪಿವಿಯಾಗಿದೆ. ಇದು ರೂ.10.44 ಲಕ್ಷದಿಂದ ರೂ.13.73 ಲಕ್ಷ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಎಂಜಿನ್ ಆಯ್ಕೆಯನ್ನು ಪಡೆದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Toyota October 2024 Sales Report 41 Percent Growth Innova Become Game Changer

ಟೊಯೊಟಾ ಗ್ಲಾನ್ಜಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ರೂ.6.86 ಲಕ್ಷ ಆರಂಭಿಕ ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಇದು ರೂ.7.74 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಜನರು ಸಂಚರಿಸಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, November 2, 2024, 9:00 [IST]
English summary
Toyota october 2024 sales report 41 percent growth innova become game changer
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+