Toyota: ಈ ಕಾರಿಗಾಗಿ ಮುಗಿಬಿದ್ದ ಗ್ರಾಹಕರು.. 7 ಜನ ಹೋಗಬಹುದು, 26 ಕಿ.ಮೀ ಮೈಲೇಜ್, 10 ಲಕ್ಷ ಬೆಲೆ
ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಗುರುತಿಸಿಕೊಂಡಿದೆ. ಕಂಪನಿಯು ಕೈಗೆಟುಕುವ ಬೆಲೆಯಲ್ಲಿ ಮಾರಾಟಗೊಳಿಸುವ ರೂಮಿಯನ್ (Rumion) ಎಂಪಿವಿಗೆ ಈ ಫೆಬ್ರವರಿ (2024) ತಿಂಗಳು ಸಹ ದೊಡ್ಡ ಮಟ್ಟದಲ್ಲಿ ಬೇಡಿಕೆ ಮುಂದುವರಿದಿದೆ.
ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ 1 ಫೆಬ್ರವರಿ 2024ಕ್ಕೆ ಅನ್ವಯವಾಗುವಂತೆ ರೂಮಿಯನ್ (Rumion) ಎಂವಿಪಿ ಪಡೆದಿರುವ ಕಾಯುವಿಕೆ ಅವಧಿ (Waiting Period) ಬಗ್ಗೆ ವಿವರವನ್ನು ಬಹಿರಂಗಪಡಿಸಿದೆ. ಈ ತಿಂಗಳು ಸಹ ಹೆಚ್ಚಿನ ಡಿಮ್ಯಾಂಡ್ ಹೊಂದಿರುವ ಸಿಎನ್‌ಜಿ (CNG) ರೂಪಾಂತಗಳ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಿಸಿದೆ.

ಗ್ರಾಹಕರು ಮಾತ್ರ ಕಂಪನಿಯು ಸಿಎನ್‌ಜಿ ಮಾದರಿಗಳಿಗೆ ಎಂದಿನಿಂದ ಆರ್ಡರ್ ಪಡೆಯುವುದನ್ನು ಆರಂಭಿಸುತ್ತದೆ ಎಂದು ಕಾತರದಿಂದ ಕಾಯುತ್ತಿದ್ದಾರೆ. ಟೊಯೊಟಾ ರೂಮಿಯನ್ (Toyota Rumion) ಎಂಪಿವಿಯ ಪೆಟ್ರೋಲ್ ರೂಪಾಂತರಗಳು ಕೂಡ ವಿತರಣೆಯಾಗಲು ಸ್ವಲ್ಪ ಜಾಸ್ತಿಯೇ ಸಮಯಾವಕಾಶ ಹಿಡಿಯುತ್ತದೆ. ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಡಿಲೆವರಿಯಾಗಲು 6-7 ತಿಂಗಳು ಬೇಕಾಗುತ್ತದೆ. ಜನವರಿಯಲ್ಲಿಯೂ ಇದೇ ರೀತಿಯ ಕಾಯುವಿಕೆ ಅವಧಿಯಿತ್ತು.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ರೂ.10.29 ಲಕ್ಷದಿಂದ ರೂ.13.68 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಸ್, ಜಿ, ವಿ ರೂಪಾಂತರ ಹಾಗೂ ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ, ಕೆಫೆ ವೈಟ್ ಎಂಟೈಸಿಂಗ್ ಸಿಲ್ವರ್ ಒಳಗೊಂಡಂತೆ 5 - ಆಕರ್ಷಕ ಮೊನೊ ಟೋನ್ ಬಣ್ಣಗಳೊಂದಿಗೆ ಲಭ್ಯವಿದೆ.

ಮಾರುತಿ ಸುಜುಕಿ ಎರ್ಟಿಗಾ ರೀ-ಬ್ಯಾಡ್ಜ್ ಆವೃತ್ತಿಯಾಗಿರುವ ಟೊಯೊಟಾ ರೂಮಿಯನ್ ವಿನ್ಯಾಸದ ದೃಷ್ಟಿಯಿಂದ ಅತ್ಯಾಧುನಿಕವಾಗಿದೆ. 7 ಜನರು ಆರಾಮದಾಯಕವಾಗಿ ಪ್ರಯಾಣಿಸಬಹುದು. ಈ ಕಾರು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಟೊಯೊಟಾ ರೂಮಿಯನ್ ಎಂಪಿವಿ ಎರಡು ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.5 - ಲೀಟರ್ ಪೆಟ್ರೋಲ್ ಎಂಜಿನ್, 103 ಪಿಎಸ್ ಗರಿಷ್ಠ ಪವರ್, 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

ಸಿಎನ್‌ಜಿ ಪಡೆದಿರುವ ಕಾರು ಸಹ ಇದೇ ರೀತಿಯ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಕೇವಲ 5 - ಸ್ವೀಡ್ ಮಾನ್ಯವಲ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಮೈಲೇಜ್ ವಿಚಾರವಾಗಿ ಮಾತನಾಡುವುದಾದರೆ, ಪೆಟ್ರೋಲ್ ರೂಪಾಂತರಗಳು 20.51 ಕೆಎಂ/ಎಲ್ ವರೆಗೆ ಮತ್ತು ಸಿಎನ್‌ಜಿ ರೂಪಾಂತರ 26.11 ಕೆಎಂ/ಕೆಜಿ ಇಂಧನ ದಕ್ಷತೆಯನ್ನು ಹೊಂದಿದೆ.
ಸುರಕ್ಷತೆಯ ಸಲುವಾಗಿ ಟೊಯೊಟಾ ರೂಮಿಯನ್ ಎಂಪಿವಿ ಅತ್ಯುತ್ತಮವಾಗಿದ್ದು, 4 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಕ್ಯಾಮೆರಾ, ISOFIX ಚೈಲ್ಡ್ ಸೀಟ್ ಆಂಕರ್ಸ್ ಅನ್ನು ಒಳಗೊಂಡಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜ್ಜೊ ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications