26 Km ಮೈಲೇಜ್: ಜನಪ್ರಿಯ ಟೊಯೊಟಾ ಫ್ಯಾಮಿಲಿ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ 'ರೂಮಿಯನ್' ಫ್ಯಾಮಿಲಿ ಎಂಪಿವಿಯಾಗಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನೀವು ಈ ಕಾರನ್ನು ಮನೆಗೆ ತರಬೇಕು ಎಂದು ಆಲೋಚಿಸುತ್ತಿದ್ದೀರಾ.. ಇಲ್ಲಿ ಈ ನೂತನ ಎಂಪಿವಿಯ ಆನ್-ರೋಡ್ ಬೆಲೆ (On-Road Price), ಮೈಲೇಜ್ (Mileage) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಹೊಚ್ಚ ಹೊಸ ಟೊಯೊಟಾ ರೂಮಿಯನ್ (Toyota Rumion) ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಇದರ ಎಸ್ ಎಂಟಿ (ಪೆಟ್ರೋಲ್) ರೂಪಾಂತರ, ರೂ.13.01 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿಸಿದರೆ, ರೂ.11,01 ಲಕ್ಷ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.22,331 ಇಎಂಐ ಪಾವತಿಸಬೇಕು.

Toyota Rumion

ಈ ರೂಮಿಯನ್ ಕಾರಿನ ಎಸ್ ಸಿಎನ್‌ಜಿ ರೂಪಾಂತರ, ರೂ.14.17 ಲಕ್ಷ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.12.17 ಲಕ್ಷ ಸಾಲ ಬಾಕಿಯಿರುತ್ತದೆ. ಆ ಮೊತ್ತಕ್ಕೆ 8% ಬಡ್ಡಿ ಹಾಕಿ 5 ವರ್ಷಗಳ ಅವಧಿಗೆ ಮಾಸಿಕ ರೂ.24,685 ಇಎಂಐ ಕಟ್ಟಬೇಕು.

ನೂತನ ಟೊಯೊಟಾ ರೂಮಿಯನ್ ಎಂಪಿವಿಯ ಜಿ ಎಂಟಿ (ಪೆಟ್ರೋಲ್) ರೂಪಾಂತರ, ರೂ.14.43 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಈ ಕಾರನ್ನು ಕೊಂಡುಕೊಂಡರೆ, ರೂ.12.43 ಲಕ್ಷ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.25,206 ಇಎಂಐ ಪಾವತಿಸಬೇಕು.

Toyota Rumion

ಈ ಟೊಯೊಟಾ ರೂಮಿಯನ್ ಕಾರಿನ ಎಸ್ ಎಟಿ (ಪೆಟ್ರೋಲ್) ರೂಪಾಂತರ, ರೂ.14.84 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಈ ಕಾರನ್ನು ಖರೀದಿ ಮಾಡಿದರೆ ರೂ.12.84 ಲಕ್ಷ ಸಾಲ ಬಾಕಿಯಿರುತ್ತದೆ. ಅದಕ್ಕೆ 8% ಬಡ್ಡಿ ಹಾಕಿ 5 ವರ್ಷಗಳ ಅವಧಿಗೆ ಮಾಸಿಕ ರೂ.26,049 ಇಎಂಐ ಕಟ್ಟಬೇಕು.

ಹೊಸ ರೂಮಿಯನ್ ಎಂಪಿವಿಯ ವಿ ಎಂಟಿ(ಪೆಟ್ರೋಲ್) ರೂಪಾಂತರ, ರೂ.15.32 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.13.32 ಲಕ್ಷ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.27,015 ಇಎಂಐ ಪಾವತಿಸಬೇಕು.

Toyota Rumion

ನೂತನ ಟೊಯೊಟಾ ರೂಮಿಯನ್ ಎಂಪಿವಿ 1.5-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು.

ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಮತ್ತು ಪುಶ್-ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 4-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Monday, November 4, 2024, 13:13 [IST]
English summary
Toyota rumion mpv on road price mileage and emi details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+